ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ವಿರುದ್ದ ಸಚಿವ ಡಾ.ಕೆ.ಸುಧಾಕರ್ ಅವಹೇಳನಕಾರಿ ಹೇಳಿಕೆ ನೀಡಿರುವುದು ಕಂಡು ಬಂದ ಹಿನ್ನಲೆಯಲ್ಲಿ ಸಚಿವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
2018-19ರಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿದ್ದ ಸುಧಾಕರ್ ನೇಮಕಾತಿಯನ್ನು ಪ್ರಶ್ನಿಸಿ ಆಂಜನೇಯರೆಡ್ಡಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಇದಕ್ಕೆ ಪ್ರತಿಯಾಗಿ ಅಂದು ಶಾಸಕರಾಗಿದ್ದ ಸುಧಾಕರ್ ರೈತರಿಗೆ ಕಳ್ಳಬಟ್ಟಿ ಕುಡಿಸಿ ಜೈಲು ಸೇರಿದವರು ಇಂದು ನನ್ನ ವಿರುದ್ದ ಹೋರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹೇಳಿಕೆಯನ್ನು ಖಂಡಿಸಿ ಆಂಜನೇಯ ರೆಡ್ಡಿ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆಯನ್ನ ಹೂಡಿದ್ದರು.
ಮಾನನಷ್ಟ ಮೊಕದ್ದಮೆಯನ್ನು ಕ್ರಿಮಿನಲ್ ಕೇಸ್ ಎಂದು ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದ ಕಾರಣ ಸುಧಾಕರ್ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಾಗಿತ್ತು.







