ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ನ ಐವರು ನ್ಯಾಯಾಧೀಶರ ಪೀಠವು ಇಂದು (ಅಕ್ಟೋಬರ್ 17) ಭಾರತದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸುವುದರ ವಿರುದ್ಧ 3:2 ತೀರ್ಪು ನೀಡಿದೆ. ಪೀಠವು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರನ್ನೂ ಒಳಗೊಂಡಿತ್ತು.
ಭಾರತದಲ್ಲಿ ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ತೀರ್ಪು ಪ್ರಕಟಿಸಿದ್ದು, ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಒಬ್ಬರ ಜೀವನದ ಹಾದಿಯನ್ನು ಆಯ್ಕೆ ಮಾಡುವ ಅವಿಭಾಜ್ಯ ಅಂಗವಾಗಿದೆ ಆದರೆ ಸಲಿಂಗ ದಂಪತಿಗಳಿಗೆ ಸಂಸತ್ತಿನಿಂದ ಪೂರಕ ಕಾನೂನು ರಚಬೆಯಾಗಬೇಕು ಹಾಗೂ ರಾಜ್ಯವು ಇನ್ನೂ ಕೆಲವು ಕಾನೂನು ರಕ್ಷಣೆಗಳನ್ನು ನೀಡಬೇಕು. ಇದು ನ್ಯಾಯಾಂಗ ವ್ಯಾಪ್ತಿಯಲ್ಲಿ ಬರುವುದಿಲ್ಲ ಇದು ಶಾಸಕಾಂಗ ವ್ಯಪ್ತಿಗೆ ಬರುತ್ತದೆ ಅವರೇ ತೀರ್ಮಾನಿಸಬೇಕು ಎಂದು ಹೇಳಿದೆ.
ಸಲಿಂಗ ವಿವಾಹಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು ನಾಲ್ಕು ಪ್ರತ್ಯೇಕ ತೀರ್ಪನ್ನು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಧನಂಜಯ ಯಶವಂತ್ ಚಂದ್ರಚೂಡ್ ಅವರು ಈ ವಿಷಯವನ್ನು ನಿರ್ಧರಿಸುವುದು ನ್ಯಾಯಾಲಯದ ಮಿತಿಯಲ್ಲಿ ಬರುವುದಿಲ್ಲ ಮತ್ತು ಮದುವೆಯನ್ನು ನಿಯಂತ್ರಿಸುವ ಕಾನೂನುಗಳನ್ನು ರಚಿಸುವುದು ಅದಕ್ಕೆ ಅನುಮೋದನೆ ನೀಡುವುದು ಸಂಸತ್ತ ಎಂದು ಹೇಳಿದೆ.
ಸಲಿಂಗ ವಿವಾಹಕ್ಕೆ ಒಪ್ಪಿಗೆ ನೀಡುತ್ತಿಲ್ಲ ಎಂಬ ಕಾರಣದಿಂದ ವಿಶೇಷ ವಿವಾಹ ಕಾಯ್ದೆಯನ್ನು ರದ್ದುಪಡಿಸಲು ಸಾಧ್ಯವಿಲ್ಲ. ಸಲಿಂಗ ವಿವಾಹ ಮಾನ್ಯತೆಯ ವಿಚಾರದಲ್ಲಿ ಸಂಸತ್ತು ತೀರ್ಮಾನಿಸಬೇಕು. ಹೊಸ ವಿವಾಹ ವ್ಯವಸ್ಥೆಯನ್ನು ರಚಿಸುವಂತೆ ಸಂಸತ್ತು ಅಥವಾ ಸರ್ಕಾರವನ್ನು ನಾವು ಒತ್ತಾಯಿಸಲು ಸಾಧ್ಯವಿಲ್ಲ. ವಿಶೇಷ ವಿವಾಹ ಕಾಯ್ದೆಯ (SMA) ಸೆಕ್ಷನ್ 4 ಸಲಿಂಗ ದಂಪತಿಗಳನ್ನು ಒಳಗೊಂಡಿಲ್ಲ ಎಂಬ ಕಾರಣಕ್ಕೆ ಅಸಾಂವಿಧಾನಿಕ ಎಂದು ಪರಿಗಣಿಸಲಾಗುವುದಿಲ್ಲ. ಈ ನ್ಯಾಯಾಲಯವು ಶಾಸಕಾಂಗದ ವ್ಯಾಪ್ತಿಯಲ್ಲಿ ಪ್ರವೇಶಿಸದಂತೆ ಎಚ್ಚರಿಕೆ ವಹಿಸಿದ್ದೇವೆ. ವಿವಾಹ ವ್ಯವಸ್ಥೆಯೊಳಗೆ ಪ್ರವೇಶಿಸುವ ಹಕ್ಕಿನಲ್ಲಿ, ವ್ಯಕ್ತಿಯು ಇನ್ನೊಬ್ಬ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕು ಮತ್ತು ಆ ವಿವಾಹವನ್ನು ಶಾಸನವು ಗುರುತಿಸುವ ಹಕ್ಕು ಎರಡನ್ನೂ ಒಳಗೊಂಡಿದೆ ಎಂದು ಸಿಜೆಐ ಡಿವೈ ಚಂದ್ರಚೂಡ್ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.
ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಒಬ್ಬರ ಜೀವನದ ಹಾದಿಯನ್ನು ಆಯ್ಕೆ ಮಾಡುವ ಅವಿಭಾಜ್ಯ ಅಂಗವಾಗಿದೆ. ಕೆಲವರು ಇದನ್ನು ತಮ್ಮ ಜೀವನದ ಪ್ರಮುಖ ನಿರ್ಧಾರವೆಂದು ಪರಿಗಣಿಸಬಹುದು. ಈ ಹಕ್ಕು ಸಂವಿಧಾನ ವಿಧಿ 21 ರ ಅಡಿಯಲ್ಲಿ ಜೀವನ ಮತ್ತು ಸ್ವಾತಂತ್ರ್ಯದ ಹಕ್ಕಿನ ಮೂಲಕ್ಕೆ ಹೋಗುತ್ತದೆ. ಒಂದು ಒಕ್ಕೂಟಕ್ಕೆ ಪ್ರವೇಶಿಸುವ ಹಕ್ಕನ್ನು ಸಹ ಆರ್ಟಿಕಲ್ 19(1)(ಇ) ನಲ್ಲಿ ಆಧಾರಿಸಲಾಗಿದೆ. ಪ್ರತಿಯೊಬ್ಬರಿಗೂ ತಮ್ಮ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕಿದೆ, ಸರ್ಕಾರವು ಸಲಿಂಗ ಸಂಬಂಧಗಳಿಗೆ ಕಾನೂನು ಸ್ಥಾನಮಾನ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಲಿಂಗ ದಂಪತಿಗೆ ತಾರತಮ್ಯ ಮಾಡದಂತೆ ನೋಡಿಕೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದರು.

ಅವಿವಾಹಿತ ದಂಪತಿಗಳು ಮಗುವನ್ನು ದತ್ತು ತೆಗೆದುಕೊಳ್ಳುವುದನ್ನು ತಡೆಯುವ ನಿಬಂಧನೆಗಳು ತಪ್ಪು. ಭಿನ್ನಲಿಂಗೀಯ ದಂಪತಿ ಮಾತ್ರ ಉತ್ತಮ ಪೋಷಕರಾಗಬಹುದು ಎಂದು ಕಾನೂನು ಹೇಳುವುದಿಲ್ಲ, ತಾರತಮ್ಯಕ್ಕೆ ಕಾರಣವಾಗುತ್ತದೆ ಎಂದು ಸಿಜೆಐ ಡಿ.ವೈ. ಚಂದ್ರಚೂಡ್ ತಮ್ಮ ತೀರ್ಪಿನಲ್ಲಿ ಹೇಳಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠವು ತೀರ್ಪನ್ನು ಪ್ರಕಟಿಸಿದೆ.