ರಾಜ್ಯದಲ್ಲಿ ಲಾಕ್‌ಡೌನ್ ನಿಯಮ ಜಾರಿಯಲ್ಲಿದ್ದಾಗ, ನಿಯಮ ಉಲ್ಲಂಘಿಸಿ ಸಿಎಂ ಯಡಿಯೂರಪ್ಪ ಪುತ್ರ ಬಿವೈ ವಿಜೇಂದ್ರ ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಆರೋಪವನ್ನು ರಾಜ್ಯ ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.
ಈ ಸಂಬಂಧ ಮೈಸೂರು ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸುವಂತೆ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿ ಸರ್ಕಾರಕ್ಕೆ ಆದೇಶ ನೀಡಿದೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಪತ್ನಿಯೊಂದಿಗೆ ಮೇ 18 ರಂದು ನಂಜನಗೂಡಿನ ಶ್ರೀಕಂಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದು, ಕಪಿಲಾ ನದಿ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ್ದರು. ಇದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಇದೆಷ್ಟು ಸರಿ.? ರಾಜ್ಯದಲ್ಲಿ ಲಾಕ್ ಡೌನ್ ನಿರ್ಬಂಧವಿದೆ ದೇವಾಲಯಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಜನರಿಗೊಂದು ನಿಯಮ ಜನಪ್ರತಿನಿಧಿಗಳಿಗೊಂದು ನಿಯಮವೇ..? ಜನಸಾಮಾನ್ಯರ ಓಡಾಟಕ್ಕೆ ನಿರ್ಬಂಧವಿರುವಾಗ ಬಿ ವೈ ವಿಜಯೇಂದ್ರ ನಿಯಮಗಳನ್ನು ಉಲ್ಲಂಘಿಸಿ ದೇವಸ್ಥಾನಕ್ಕೆ ತೆರಳಿದ್ದು, ವ್ಯಾಪಕ ಟೀಕೆಗೆ ಹಾಗೂ ಆಕ್ರೋಶಕ್ಕೆ ಕಾರಣವಾಗಿತ್ತು.

ಕೋವಿಡ್ 19 ಕರ್ತವ್ಯದಲ್ಲಿದ್ದ ವೇಳೇ ವಿಜೇಂದ್ರ ಅವರು ಮೈಸೂರಿನಿಂದ ದೇವಸ್ಥಾನಕ್ಕೆ ತೆರಳಿದ್ದರು ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ್ ನಾವಡಗಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು ಕೂಡ ಮುಖ್ಯ ನ್ಯಾಯಮೂರ್ತಿ ಖಡಕ್ಕಾಗಿ ಉತ್ತರಿಸಿದ್ದಾರೆ. ಲಾಕ್‌ಡೌನ್ ಅವಧಿಯಲ್ಲಿ ದೇವಸ್ಥಾನಕ್ಕೆ ಪ್ರವೇಶ ಇಲ್ಲ ಎಂಬ ನಿಯಮ ಎಲ್ಲ ನಾಗರಿಕರಿಗೂ ಅನ್ವಯವಾಗಬೇಕು. ರಾಜಕರಣಿಗಳಿಗೊಂದು ನಿಯಮ..? ಜನಸಾಮಾನ್ಯರಿಗೆ ಮತ್ತೊಂದು ನಿಯಮ ಇರಲು ಸಾಧ್ಯವಿಲ್ಲ ಎಂದಿದ್ದಾರೆ. ಈ ವಿಚಾರ ಸಂಬಂಧ ಪ್ರಾಥಮಿಕ ತನಿಖೆಯ ವರದಿ ಸಲ್ಲಿಸುವಂತೆ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ, ಜೂನ್ 18 ಕ್ಕೆ ವಿಚಾರಣೆ ಮುಂದೂಡಿದೆ.
ಮೂಲ- NIE