ಕೋವಿಡ್-19 ಮಹಾವಿಪತ್ತಿನ ಸಂದರ್ಭದಲ್ಲಿ ನಮ್ಮ MLA/MPಗಳು ಎಲ್ಲಿ ಹೋಗಿದ್ದಾರೆ?

ಕೋವಿಡ್ ಸಂಧರ್ಭದಲ್ಲಿಯೂ ಜನಪ್ರತಿನಿಧಿಗಳ ಅನುಪಸ್ಥಿತಿಯ ಕುರಿತಂತೆ ಕೆಆರ್‌ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉತ್ತಮವಾದ ಸರ್ಕಾರಿ ಆಸ್ಪತ್ರೆಗಳನ್ನು ನಿರ್ಮಿಸಿದ್ದರೆ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಕಟ್ಟಿದ್ದರೆ, ನಮ್ಮ MLA/MPಗಳು ಈಗಿನಂತೆ ತಲೆ ತಪ್ಪಿಸಿಕೊಂಡು ಓಡಾಡುತ್ತಿರಲಿಲ್ಲ; ಪುಕ್ಕಲರೂ, ಪಲಾಯನವಾದಿಗಳೂ ಆಗುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ. 

ಮಂಗಳೂರು, ಉಡುಪಿ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ವಿಜಯಪುರ, ಬಾಗಲಕೋಟೆ, ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಸೇರಿದಂತೆ ಸುಮಾರು 15 ಜಿಲ್ಲಾ ಕೇಂದ್ರಗಳಲ್ಲಿ ಇಂದಿಗೂ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ. ಯಾಕೆ? ಎಂದು ಪ್ರಶ್ನಿಸಿರುವ ಅವರು, ಅಲ್ಲಿರುವ ಭ್ರಷ್ಟ ಮತ್ತು ಬಲಿಷ್ಟರಾದ ಸ್ಥಳೀಯ ರಾಜಕಾರಣಿಗಳು, ಮಠಗಳು, ಖಾಸಗಿ ಸಂಸ್ಥೆಗಳು ನಡೆಸುವ ಖಾಸಗಿ ಮೆಡಿಕಲ್ ಕಾಲೇಜುಗಳ ಮಾಫಿಯಾ ಅಲ್ಲಿ ಇಂದಿಗೂ ಸರ್ಕಾರಿ ಮೆಡಿಕಲ್ ಕಾಲೇಜು ಬರಲು ಬಿಟ್ಟಿಲ್ಲ ಎಂದು ಹೇಳಿದ್ದಾರೆ.

ಈಗ ಅದರ ಫಲವನ್ನು ಶ್ರೀಮಂತರೂ ಸೇರಿದಂತೆ ಎಲ್ಲರೂ ಉಣ್ಣುತ್ತಿದ್ದಾರೆ. ಸಾಕಷ್ಟು ದುಡ್ಡಿರುವವರಿಗೂ ಇಂದು ಖಾಸಗಿ ಆಸ್ಪತ್ರೆಗಳಲ್ಲಿ ಸಾಮಾನ್ಯ ಹಾಸಿಗೆ ಸಿಗುತ್ತಿಲ್ಲ. ಹಾಸಿಗೆ ಸಿಕ್ಕರೂ ಅಗತ್ಯವಾದಾಗ ಆಮ್ಲಜನಕ ಸಿಗುತ್ತಿಲ್ಲ. ಆಮ್ಲಜನಕ ಇರುವ ಹಾಸಿಗೆ ಸಿಕ್ಕರೂ ತೀರಾ ಅಗತ್ಯವಾದಾಗ ICU ಸೌಲಭ್ಯ ಸಿಗುತ್ತಿಲ್ಲ. ಉತ್ತಮ ಸರ್ಕಾರಿ ಆಸ್ಪತ್ರೆಗಳು ಎಲ್ಲಾ ಕಡೆಯೂ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿತ್ತೆ? ಎಂದು ರವಿ ಕೃಷ್ಣಾ ಪ್ರಶ್ನಿಸಿದ್ದಾರೆ.
ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಬಗ್ಗೆ ತಲೆಕೆಡಿಸಿಕೊಳ್ಳದೆ, ತಮಗೆ ಹೇಗಿದ್ದರೂ ಖಾಸಗಿ ಆಸ್ಪತ್ರೆಗಳಿವೆ ಎಂದು ಉಡಾಫೆ ಮತ್ತು ನಿರ್ಲಕ್ಷ ವಹಿಸಿದ್ದ ನಾಡಿನ ಶ್ರೀಮಂತರು ಈಗಲಾದರೂ ಉತ್ತಮ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಅಗತ್ಯವನ್ನು ಮನಗಾಣಬೇಕು. ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲಿಯೂ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಆಗಬೇಕು. ಅದಕ್ಕೆ ಅಡ್ಡಿಪಡಿಸುವ ಭ್ರಷ್ಟ ರಾಜಕಾರಣಿಗಳನ್ನು ಮತ್ತು ಖಾಸಗಿ ಮಾಫಿಯಾಗಳನ್ನು ಜನರು ಬಗ್ಗುಬಡಿಯಬೇಕು.ಹಾಗಾಗಲು ಜನರು ಮೊದಲು J.C.B ಪಕ್ಷಗಳನ್ನು ತಿರಸ್ಕರಿಸಬೇಕು. ಈ ಮೂರೂ ಪಕ್ಷಗಳಲ್ಲಿ ಇರುವವರೇ ಆ ಮಾಫಿಯಾದಲ್ಲಿ ಇರುವುದು ಎಂದು ಅವರು ಹೇಳಿದ್ದಾರೆ.

ಈ ವಿಪತ್ತಿನ ಸಂದರ್ಭದಲ್ಲಿ ಇವೆಲ್ಲವನ್ನೂ ಯೋಚಿಸಿ. ಬನ್ನಿ, ಎಲ್ಲರೂ ಜೊತೆಗೂಡಿ ಮೌಲ್ಯಾಧಾರಿತ ಸಮಾಜವನ್ನು ಕಟ್ಟೋಣ; ಒಳ್ಳೆಯ ನಾಡನ್ನು ಕಟ್ಟೋಣ. ಈ ಸಂದರ್ಭದಲ್ಲಿ ಅದು ಪ್ರಾಮಾಣಿಕ, ಪ್ರಾದೇಶಿಕ, ಜನಪರ ರಾಜಕಾರಣದಿಂದ ಮಾತ್ರ ಸಾಧ್ಯ ಎಂದು ರವಿ ಕೃಷ್ಣಾ ರೆಡ್ಡಿ ಕರೆ ನೀಡಿದ್ದಾರೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...