ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಮೈಸೂರು, ಬೆಳಗಾವಿ, ಶಿವಮೊಗ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ದ.ಕನ್ನಡ, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಲಾಕ್‌ಡೌನ್ ಮುಂದುವರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಅನ್‌ಲಾಕ್ ಮಾಡಿರುವ ಕಡೆ ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ.
ಅನ್‌ಲಾಕ್ ಮಾಡಿರುವ ಜಿಲ್ಲೆಗಳಲ್ಲಿ ಮಧ್ಯಾಹ್ನ 2ರವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಜೂನ್ 14 ರ ನಂತರವು ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಅವಕಾಶವಿಲ್ಲ.
ಶೇಕಡ 30 ರಷ್ಟು ಸಿಬ್ಬಂದಿಯೊಂದಿಗೆ ಗಾರ್ಮೆಂಟ್ಸ್ ಆರಂಭಕ್ಕೆ ಅವಕಾಶ ನೀಡಲಾಗಿದೆ. ಕಾರ್ಖಾನೆಗಳಲ್ಲಿ 50 ರಷ್ಟು ಸಿಬ್ಬಂದಿಗೆ ಕೆಲಸ ಮಾಡಲು ಅವಕಾಶ. ಶೇಕಡಾ 50 ರಷ್ಟು ಸಿಬ್ಬಂದಿಗಳೊಂದಿಗೆ ಕೈಗಾರಿಕೆ ಆರಂಭಕ್ಕೆ ಅವಕಾಶ ನೀಡಲಾಗಿದೆ. ಗಾರ್ಮಾಂಟ್ಸ್ಗಳಲ್ಲಿ ಮಾತ್ರ ಶೇಕಡಾ 30 ರಷ್ಟು ಸಿಬ್ಬಂದಿಗೆ ಅವಕಾಶ. ನಿರ್ಮಾಣ ಚಟುವಟಿಕೆ ಆರಂಭಿಸಲು ಅನುಮತಿ. ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶವಿದೆ.
ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡ ಬಹುದು. ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಮಧ್ಯಾಹ್ನ 2 ಗಂಟೆಗೆವರೆ ಬಾರ್ ತೆರೆಯಲು ಅನುಮತಿ ನೀಡಲಾಗಿದೆ.
ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.