ಜೂನ್‌ 14 ರ ನಂತರ 11 ಜಿಲ್ಲೆ ಹೊರತು ಪಡಿಸಿ ಉಳಿದೆಡೆ ಲಾಕ್‌ಡೌನ್‌ ಸಡಿಲಿಕೆ, ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು ಗ್ರಾಮಾಂತರ,  ಚಿಕ್ಕಮಗಳೂರು, ಮೈಸೂರು, ಬೆಳಗಾವಿ, ಶಿವಮೊಗ್ಗ, ದಾವಣಗೆರೆ, ಚಾಮರಾಜನಗರ, ಹಾಸನ, ದ.ಕನ್ನಡ, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ  ಜೂನ್‌ 21 ರವರೆಗೆ ಲಾಕ್‌ಡೌನ್‌ ಮುಂದುವರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಅನ್‌ಲಾಕ್ ಮಾಡಿರುವ ಕಡೆ ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ.

ಅನ್‌ಲಾಕ್ ಮಾಡಿರುವ ಜಿಲ್ಲೆಗಳಲ್ಲಿ ಮಧ್ಯಾಹ್ನ 2ರವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಜೂನ್‌ 14 ರ ನಂತರವು  ಬಿಎಂಟಿಸಿ, ಕೆಎಸ್‌ಆರ್‌ಟಿಸಿ  ಬಸ್‌ ಸಂಚಾರಕ್ಕೆ ಅವಕಾಶವಿಲ್ಲ.

ಶೇಕಡ 30 ರಷ್ಟು ಸಿಬ್ಬಂದಿಯೊಂದಿಗೆ ಗಾರ್ಮೆಂಟ್ಸ್‌ ಆರಂಭಕ್ಕೆ ಅವಕಾಶ ನೀಡಲಾಗಿದೆ. ಕಾರ್ಖಾನೆಗಳಲ್ಲಿ 50 ರಷ್ಟು  ಸಿಬ್ಬಂದಿಗೆ ಕೆಲಸ ಮಾಡಲು ಅವಕಾಶ. ಶೇಕಡಾ 50 ರಷ್ಟು ಸಿಬ್ಬಂದಿಗಳೊಂದಿಗೆ ಕೈಗಾರಿಕೆ ಆರಂಭಕ್ಕೆ ಅವಕಾಶ ನೀಡಲಾಗಿದೆ. ಗಾರ್ಮಾಂಟ್ಸ್ಗಳಲ್ಲಿ ಮಾತ್ರ ಶೇಕಡಾ 30 ರಷ್ಟು ಸಿಬ್ಬಂದಿಗೆ ಅವಕಾಶ. ನಿರ್ಮಾಣ ಚಟುವಟಿಕೆ ಆರಂಭಿಸಲು ಅನುಮತಿ. ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶವಿದೆ.

ಪಾರ್ಕ್ಗಳನ್ನು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ.  ಬೀದಿ ಬದಿ ವ್ಯಾಪಾರಿಗಳು ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವ್ಯಾಪಾರ ಮಾಡ ಬಹುದು.  ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ಮಧ್ಯಾಹ್ನ 2 ಗಂಟೆಗೆವರೆ ಬಾರ್ ತೆರೆಯಲು ಅನುಮತಿ ನೀಡಲಾಗಿದೆ.

 ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಿಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ವಾರಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.  

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...