ಭಾರತದಲ್ಲಿ ಕೋವಿಡ್ ಸಂಬಂಧಿತ ಮಾಹಿತಿಯನ್ನು ಅಂದರೆ ವ್ಯಕ್ತಿಯ ಹೆಸರು, ಮೊಬೈಲ್ ಸಂಖ್ಯೆ, ಮನೆಯ ವಿಳಾಸ ಹಾಗೂ ಕೋವಿಡ್ ಪರೀಕ್ಷೆಯ ಪಲಿತಾಂಶವನ್ನ ಒಳಗೊಂಡಿರುವ ಸರ್ಕಾರಿ ಸರ್ವರ್‌ಅನ್ನು ಹ್ಯಾಕ್ ಮಾಡಲಾಗಿದೆ ಮತ್ತು ಈ ಮಾಹಿತಿಯನ್ನು ಆನ್‌ಲೈನ್ ಮೂಲಕ ವೀಕ್ಷಿಸಬಹುದಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಸೋರಿಕೆಯಾಗಿರುವ ಮಾಹಿತಿಯನ್ನು ರೈಡ್ ಪೋರಮ್ ವೆಬ್‌ಸೈಟ್‌ನಲ್ಲಿ ಮಾರಾಟಕ್ಕೆ ಇಡಲಾಗಿದೆ. ಅಲ್ಲಿ ಸುಮಾರು 20,000 ಸಾವಿರ ಜನರ ಡೇಟಾ ಇದೆ ಎಂದು ತಿಳಿದು ಬಂದಿದೆ. ರೈಡ್ ಪೋರಮ್‌ನಲ್ಲಿ ಮಾರಾಟಕ್ಕೆ ಇಟ್ಟಿರುವ ಮಾಹಿತಿಯಲ್ಲಿ ಜನರ ಹೆಸರು, ವಯಸ್ಸು, ಲಿಂಗ, ವಿಳಾಸ, ಮೊಬೈಲ್ ಸಂಖ್ಯೆ, ದಿನಾಂಕ ಹಾಗೂ ಕೋವಿಡ್-19 ವರದಿಯ ಪಲಿತಾಂಶವನ್ನ ತೋರಿಸುತ್ತದೆ.
ಈ ಕುರಿತು ಟ್ವೀಟ್ ಮಾಡಿರುವ ಸೈಬರ್ ಸೆಕ್ಯೂರಿಟಿ ಸಂಶೋಧಕ ರಾಜಶೇಖರ್ ರಾಜಹರಿಯಾ ಹೆಸರು ಕೋವಿಡ್-19 ಪಲಿತಾಂಶಗಳು ಹಾಗೂ ವೈಯಕ್ತಿಕ ಮಾಹಿತಿಯನ್ನು ಕಂಟೆಂಟ್ ಡೆಲಿವರಿ ನೆಟ್‌ವರ್ಕ್ ಮೂಲಕ ಬಿಡುಗಡೆ ಮಾಡಲಾಗಿದೆ. ಗೂಗಲ್ ಇಂಡೆಕ್ಸ್‌ನಲ್ಲಿ ಸುಮಾರು 9ಲಕ್ಷ ಸರ್ಕಾರಿ ಹಾಗೂ ಖಾಸಗಿ ಮಾಹಿತಿಯನ್ನು ಇಂಡೆಕ್ಸ್ ಮಾಡಲಾಗಿದೆ ಎಂದು ಟ್ವೀಟ್ ಮಾಡಿತಿಳಿಸಿದ್ದಾರೆ.
ಈ ಕುರಿತು ಈಗಾಗಲೇ ಮಾಹಿತಿ, ತಂತ್ರಜ್ಞಾನ ಹಾಗೂ ಸಂವಹನ ಇಲಾಖೆಗೆ ದೂರನ್ನು ಸಲ್ಲಿಸಿದ್ದು ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿದು ಬಂದಿದೆ. ಸದ್ಯ ಸೋರಿಕೆಯಾಗಿರಯವ ಮಾಹಿತಿ ಕೋವಿನ್ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಲು ಉದ್ದೇಶಿಸಲಾಗಿತ್ತು.
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಯುವ ಸಲುವಾಗಿ ಮತ್ತು ಜನರಲ್ಲಿ ಲಸಿಕೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸರ್ಕಾರವು ಡಿಜಿಟಲ್ ತಂತ್ರಜ್ಞಾನಗಳ ಮೇಲೆ ಹೆಚ್ಚು ಅವಕಂಬಿತವಾಗಿದೆ. ಕೋವಿಡ್ ಸಂಬಂಧಿತ ಮಾಹಿತಿಗಳನ್ನು ತಿಳಿದುಕೊಳ್ಳಲು ಜನರು ಆರೋಗ್ಯ ಸೇತು ಅಪ್ಲಿಕೇಶನ್‌ಅನ್ನು ಬಳಸಬೇಕು ಎಂದು ಸರ್ಕಾರ ಈ ಹಿಂದೆ ತಿಳಿಸಿತ್ತು.
ಡಾರ್ಕ್ ವೆಬ್‌ನಲ್ಲಿ ಮಾರಾಟವಾಗುವ ಡೇಟಾವನ್ನು ಸೈಬರ್ ಕಳ್ಳರು ಮತ್ತು ವಂಚಕರು ವಿವಿಧ ರೀತಿಯ ವಂಚನೆಗಳಿಗೆ ಬಳಸಿಕೊಳ್ಳುತ್ತಾರೆ.