ದೇಶದಲ್ಲಿ ಕಳೆದ 24 ಗಂಟೆಯಲ್ಲಿ 2,827 ಜನರಲ್ಲಿ ಕರೋನಾ ಸೋಂಕು ಪತ್ತೆಯಾಗಿದೆ. 24 ಗಂಟೆಯಲ್ಲಿ 24 ಜನರು ಕರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ದೇಶದಲ್ಲಿ 19067 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3,230 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಈವರೆಗೆ 4,25,70,165 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.