ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 826 ಮಂದಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಯಾವುದೇ ಸಾವುಗಳು ವರದಿಯಾಗಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಈ ಕುರಿತು ನಿನ್ನೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ, ಬೆಂಗಳೂರು ನಗರದಲ್ಲಿ 746, ದಕ್ಷಿಣ ಕನ್ನಡ 12, ಮೈಸೂರು 17 ಸೇರಿದಂತೆ ರಾಜ್ಯಾಧ್ಯಂತ 826 ಮಂದಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ತಿಳಿಸಿದೆ.
ಕಳೆದ 24 ಗಂಟೆಯಲ್ಲಿ 826 ಮಂದಿಗೆ ಕೋವಿಡ್ ದೃಢಪಟ್ಟ ಕಾರಣ, ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ.ಯಾವುದೆ ಸಾವು ಸಂಭವಿಸಿಲ್ಲ ಎಂದು ವರದಿಯಾಗಿದೆ.