2‌ ತಿಂಗಳಗಳ ಕಾಲ ಉಚಿತ ಪಡಿತರ, ಆಟೋ ಚಾಲಕರಿಗೆ ಧನಸಹಾಯ ಘೋಷಿಸಿದ ಕೇಜ್ರಿವಾಲ್

ಕೋವಿಡ್ ಎರಡನೇ ಅಲೆಯಿಂದಾಗಿ ದೇಶದಲ್ಲಿ ಸೋಂಕಿನ ಸಂಖ್ಯೆ ಹಾಗು ಸಾವಿನ ಸಂಖ್ಯೆ ಹೆಚ್ಚುತ್ತಿರುವುದರ ಮಧ್ಯೆ ಬಡವರ, ಕೂಲಿ ಕಾರ್ಮಿಕರ ಮಧ್ಯಮ ವರ್ಗದವರ ಪರಿಸ್ಥಿತಿ ಹೇಳತೀರದು, ಆರ್ಥಿಕ ಸಮಸ್ಯೆ ಒಂದೆಡೆ ಯಾದ್ರೆ ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೆ ಹೊತ್ತಿನ ಊಟಕ್ಕೂಕಷ್ಟದ ಸ್ಥಿತಿ ಎದುರಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಂಕು ಹೆಚ್ಚು ಉಲ್ಬಣಗೊಂಡು ಸಾಕಷ್ಟು ಜನ ಬಲಿಯಾಗಿದ್ದು, ಈ ನಿಟ್ಟಿನಲ್ಲಿ ಕೇಜ್ರಿವಾಲ್ ಸರ್ಕಾರ ಕೋವಿಡ್ ನಿಯಂತ್ರಣದ ಸಲುವಾಗಿ ಕಠಿಣ ಕೋವಿಡ್ ನಿರ್ಬಂಧಗಳನ್ನು ಜಾರಿ ಮಾಡಿದ್ದು, ಈ ಮಧ್ಯೆ ಜನರ ಸಮಸ್ಯೆಯನ್ನು ಅರಿತ ಸರ್ಕಾರ ಉಚಿತ ಪಡಿತರ ಮತ್ತು ಆರ್ಥಿಕ ಸಹಾಯಕ್ಕೆ ಮುಂದಾಗಿದೆ.

2 ತಿಂಗಳವರೆಗೆ ಉಚಿತ ಪಡಿತರ

ದೆಹಲಿಯಲ್ಲಿ ಪಡಿತರ ಚೀಟಿ ಹೊಂದಿರುವ 72 ಲಕ್ಷ ಮಂದಿಗೆ ಮುಂದಿನ 2 ತಿಂಗಳು ಉಚಿತ ಪಡಿತರ ನೀಡಲಾಗುತ್ತದೆ ಎಂದು ಮೇ 4 ರಂದು ಕೇಜ್ರಿವಾಲ್ ಸರ್ಕಾರ ಪ್ರಕಟಿಸಿದೆ. ಕೋವಿಡ್‌ ಲಾಕ್‌ಡೌನ್‌ನಿಂದ ಬಡವರು, ಕೂಲಿಕಾರ್ಮಿಕರು, ಮಧ್ಯಮವರ್ಗದವರು ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದು, ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಈ ಸ್ವಲ್ಪಮಟ್ಟಿನ ಆರ್ಥಿಕ ಬಿಕ್ಕಟ್ಟನ್ನು ಬಗೆಹರಿಸುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

2 ತಿಂಗಳ ಪಡಿತರ ವಿತರಣೆಗೂ, ಲಾಕ್ಡೌನ್ ವಿಸ್ತರಣೆಗೂ ಸಂಬಂಧವಿಲ್ಲ

ಸರ್ಕಾರ ಎರಡು ತಿಂಗಳು ಉಚಿತ ಪಡಿತರ ವಿತರಣೆ ಘೋಷಣೆ ಮಾಡಿದ ಮಾತ್ರಕ್ಕೆ, ಮುಂದಿನ ಎರಡು ತಿಂಗಳುಗಳವರೆಗೆ ಲಾಕ್ಡೌನ್ ವಿಸ್ತರಣೆಯಾಗಲಿದೆ ಎಂಬುದು ಇದರ ಅರ್ಥವಲ್ಲ, ಬದಲಿಗೆ ದಿನಕೂಲಿ ಕಾರ್ಮಿಕರಿಗೆ ಕೆಲಸವಿಲ್ಲ, ಚಿಕ್ಕಪುಟ್ಟ ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದವರ ವ್ಯಾಪಾರ ಸ್ಥಗಿತಗೊಂಡಿದೆ. ಈ ವರ್ಗಗಳು ಸಾಕಷ್ಟು ತೊಂದರೆಗೊಳಗಾಗಿದ್ದು, ಕೋವಿಡ್ ಸೋಂಕಿನ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಅವರುಗಳಿಗೆ ಸರ್ಕಾರದಿಂದ ಸ್ಪಲ್ಪ ಸಹಾಯ ಮಾಡುವುದು ಇದರ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದ್ದಾರೆ.

ಆಟೋ ಚಾಲಕರಿಗೆ 5 ಸಾವಿರ ಧನಸಹಾಯ

ಜೊತೆಗೆ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೂ ಧನಸಹಾಯ ನೀಡಲು ಕೇಜ್ರಿವಾಲ್ ಸರ್ಕಾರ ತೀರ್ಮಾನ ಕೈಗೊಂಡಿದೆ. ಚಾಲಕರಿಗೆ ತಲಾ 5,000 ರೂ. ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದೆ. ಏಪ್ರಿಲ್ 19 ರಂದು ದೆಹಲಿಯಲ್ಲಿ ಆರು ದಿನಗಳ ಲಾಕ್ ಡೌನ ಘೋಷಿಸಿ ಏಪ್ರಿಲ್ 25 ರವರೆಗೆ ಜಾರಿಯಲ್ಲಿತ್ತು. ಬಳಿಕ ಮೇ 3 ರವರೆಗೆ ವಿಸ್ತರಿಸಿದ್ದರು. ಮತ್ತೆ ಕೋವಿಡ್ ಹೆಚ್ಚಳದಿಂದ ಮೇ 1 ರಂದು ಮತ್ತೆ ಲಾಕ್ಡೌನ್ ಅವಧಿಯನ್ನು ಮೇ 10 ರವರೆಗೆ ವಿಸ್ತರಿಸಲಾಗಿದೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...