• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

Covid 2ನೇ ಅಲೆಯ ಭೀಕರತೆ ಗೊತ್ತಿದ್ದರು ಸರ್ಕಾರ ಮುಂಜಾಗ್ರತೆ ವಹಿಸದಿರುವುದು ಈಗಿನ ಈ ಪರಿಸ್ಥಿತಿಗೆ ಕಾರಣ -ಸಿದ್ದರಾಮಯ್ಯ

Any Mind by Any Mind
April 27, 2021
in ಕರ್ನಾಟಕ
0
Covid 2ನೇ ಅಲೆಯ ಭೀಕರತೆ ಗೊತ್ತಿದ್ದರು ಸರ್ಕಾರ ಮುಂಜಾಗ್ರತೆ ವಹಿಸದಿರುವುದು ಈಗಿನ ಈ ಪರಿಸ್ಥಿತಿಗೆ ಕಾರಣ -ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಕೋವಿಡ್‌ ಸಂಕಷ್ಟ ಹಿನ್ನಲೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇಂದು ಸುದ್ದಿಗೋಷ್ಟಿ ನಡೆಸಿ ರಾಜ್ಯ ಹಾಗು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.  ಈಗಿನ ಈ ಪರಿಸ್ಥಿತಿಗೆ ಕೇಂದ್ರ ಹಾಗು ರಾಜ್ಯ ಸರ್ಕಾರವೇ ಕಾರಣ, ಕೋವಿಡ್‌ 2 ನೇ ಅಲೆ ಜನವರಿಯಲ್ಲಿಯೇ ಉಲ್ಭಣಗೊಂಡಿದೆ.ಇದು ಎಷ್ಟು ಭೀಕರವಾಗಿರುತ್ತದೆ ಮತ್ತು ಇದಕ್ಕೆ ತಕ್ಕಂತೆ ಮಾಡಿಕೊಳ್ಳಬೇಕಾದ ಸಿದ್ಧತೆ ಕುರಿತು ತಜ್ಞರ ಸಮಿತಿ 2020 ನವೆಂಬರ್ 30 ರಂದೇ ಸರ್ಕಾರಕ್ಕೆ ವರದಿ ನೀಡಿತ್ತು. ಇದನ್ನು ಸರ್ಕಾರ ನಿರ್ಲಕ್ಷಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳದಿರುವುದೇ ಇಷ್ಟೆಲ್ಲಾ ಸಾವು, ನೋವು, ಕಣ್ಣೀರಿಗೆ ಕಾರಣವಾಗಿದೆ ಎಂದಿದ್ದಾರೆ.

ಮತ್ತೊಂದು ಕಡೆ ಕೇಂದ್ರ ಸರ್ಕಾರ ಕೂಡ ಇದೇ ರೀತಿಯ ಬೇಜವಾಬ್ದಾರಿಯಿಂದ ವರ್ತಿಸಿತು. ಎರಡನೇ ಅಲೆ ಜನವರಿ ಬಳಿಕ ಬರುತ್ತದೆ ಎನ್ನುವುದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಗೊತ್ತಿತ್ತು. ಆದರೂ ಕೇಂದ್ರ ಸರ್ಕಾರ ಐದು ರಾಜ್ಯಗಳ ಚುನಾವಣೆ ಘೋಷಿಸಿತು. ಕುಂಬಮೇಳ ನಡೆಯುವುದಕ್ಕೂ ಅವಕಾಶ ನೀಡಿತು. ಇತರೆ ದೇಶಗಳಲ್ಲಿ ಎರಡನೇ ಅಲೆ ಸಂದರ್ಭದಲ್ಲಿ ಉಂಟಾದ ಸ್ಥಿತಿ ಗೊತ್ತಿದ್ದೂ ಕೇಂದ್ರ ಸರ್ಕಾರ ಸಂಪೂರ್ಣ ಮೈಮರೆಯಿತು ಎಂದು ಕೇಂದ್ರ ಸರ್ಕಾರದ ನಡೆಯನ್ನೂ ಕೂಡ ಟೀಕಿಸಿದ್ದಾರೆ.

2020 ಡಿಸೆಂಬರ್ ನಲ್ಲಿ 2021ರ ಜನವರಿಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಕೇಂದ್ರ ಸರ್ಕಾರ ಏಪ್ರಿಲ್ ಕೊನೆಯಲ್ಲಿ ತೆಗೆದುಕೊಳ್ಳುತ್ತಿದೆ. ಅದೂ ಕೂಡ ದೇಶದ ಕೋಟ್ಯಂತರ ಜನರು ಆಕ್ರೋಶ, ಅಸಮಾಧಾನ ವ್ಯಕ್ತಪಡಿಸಿ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಲು ಶುರು ಮಾಡಿದ ಬಳಿಕ ಈಗ ತುರ್ತು ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಈ ಪರಮ ನಿರ್ಲಕ್ಷ್ಯದ ಕಾರಣಕ್ಕೇ ಸಹಸ್ರಾರು ಮಂದಿ ಪ್ರಾಣ ಕಳೆದುಕೊಂಡರು. ಲಕ್ಷಾಂತರ ಮಂದಿ ಕನಿಷ್ಠ ಆರೋಗ್ಯ ಸವಲತ್ತುಗಳು, ಜೀವರಕ್ಷಕ ಔಷಧಿಗಳು ಸಿಗದೆ ಸಾವು ಬದುಕಿನ ನಡುವೆ ಸೆಣೆಸುತ್ತಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊತ್ತುಕೊಳ್ಳಬೇಕೆಂದಿದ್ದಾರೆ.

ಪ್ರತೀ ದಿನ ದೇಶದಲ್ಲಿ 3.5 ಲಕ್ಷದಷ್ಟು ಸೋಂಕಿತರು ಪತ್ತೆ ಆಗುತ್ತಿದ್ದಾರೆ. ಆದರೆ ತಜ್ಞ ವೈದ್ಯ ನಾರಾಯಣ ಹೃದಯಾಲಯದ ಡಾ.ದೇವಿಪ್ರಸಾದ್ ಶೆಟ್ಟಿ ಅವರ ಪ್ರಕಾರ ಸೋಂಕಿತರ ಪ್ರಮಾಣ ಇನ್ನೂ ಐದು ಪಟ್ಟು ಹೆಚ್ಚಿದೆ. ಕೋವಿಡ್ ಪರೀಕ್ಷೆಗಳು ಕಡಿಮೆ ನಡೆಯುತ್ತಿರುವುದರಿಂದ ಪಾಸಿಟಿವ್ ಪ್ರಕರಣಗಳ ಪ್ರಮಾಣ ಕೂಡ ಕಡಿಮೆ ಇದೆ. ಹೀಗಾಗಿ ಈಗಿರುವುದಕ್ಕಿಂತ ಐದು ಪಟ್ಟು ಹೆಚ್ಚು ಸೋಂಕಿತರು ಇರುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಪಾರದರ್ಶಕವಾಗಿ ವರ್ತಿಸುತ್ತಿಲ್ಲ. ಎಲ್ಲದರಲ್ಲೂ ಸುಳ್ಳು ಹೇಳುತ್ತಿದೆ. ಸಾವಿನ ಸಂಖ್ಯೆಯನ್ನೂ ಮುಚ್ಚಿಡುತ್ತಿದೆ. ಸರ್ಕಾರದ ಲೆಕ್ಕಕ್ಕೂ, ಬಿಬಿಎಂಪಿ ನೀಡುವ ಲೆಕ್ಕಕ್ಕೂ, ಅಂಕಿ-ಸಂಖ್ಯೆ ಇಲಾಖೆಯ ಲೆಕ್ಕಕ್ಕೂ ಭಾರೀ ವ್ಯತ್ಯಾಸವಿದೆ. ಈ ರೀತಿ ಸುಳ್ಳು ಲೆಕ್ಕ ಮತ್ತು ಪಾರದರ್ಶಕತೆ ಇಲ್ಲದೆ ಸರ್ಕಾರ ತನ್ನ ಲೋಪಗಳಿಗೆ ತೇಪೆ ಹಾಕಿಕೊಳ್ಳಲು ಯತ್ನಿಸುತ್ತಿದೆ ಎಂದಿದ್ದಾರೆ.

ಪ್ರತೀ ಕ್ಷಣ ತಮ್ಮದಲ್ಲದ ತಪ್ಪಿಗೆ ಜನ ಸಾಯುತ್ತಿದ್ದಾರೆ. ಅದರಲ್ಲೂ 28, 30, 40 ವರ್ಷದವರೆಲ್ಲಾ ಸಾವನ್ನಪ್ಪುತ್ತಿರುವುದು ಬಹಳ ದುಃಖದ ಸಂಗತಿ. ಇಂಥಾ ಧಾರುಣ ಸಾವುಗಳು ಸಂಭವಿಸುತ್ತಿರುವ ಹೊತ್ತಲ್ಲೂ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ವಿಶ್ವವನ್ನು ಕೊರೋನಾ ವಿಪತ್ತಿನಿಂದ ಭಾರತ ರಕ್ಷಿಸಿಬಿಟ್ಟಿತು ಎಂದು ಹೇಳಿಕೆ ನೀಡಿದರು. ಈಗ ವೈದ್ಯ ಸವಲತ್ತುಗಳಿಲ್ಲದೆ ವಿಶ್ವದಲ್ಲೇ ಅತೀ ಹೆಚ್ಚು ನರಳುತ್ತಿರುವ ದೇಶ ಭಾರತ ಆಗಿದೆ.

ಕೋವಿಡ್ ಎರಡನೇ ಅಲೆ ವಿಕೋಪಕ್ಕೆ ಹೋಗಿದ್ದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು, “ಮಹಾಕುಂಬಕ್ಕೆ ಬರುತ್ತಿರುವವರಿಗೆ ಸ್ವಾಗತ” ಎಂದು ಟ್ವೀಟ್ ಮಾಡುತ್ತಾರೆ. ಎರಡನೇ ಅಲೆ ತಡೆಗಟ್ಟಲು ಕನಿಷ್ಠ ಸಿದ್ಧತೆಗಳನ್ನೂ ಮಾಡದ ಪ್ರಧಾನಿ ಅವರು ಹತ್ತಾರು ಚುನಾವಣಾ ರ‍್ಯಾಲಿಗಳನ್ನು ನಡೆಸಿದರು. ಸಾಲದ್ದಕ್ಕೆ “ಇಷ್ಟೊಂದು ದೊಡ್ಡ ಸಂಖ್ಯೆಯ ಜನರನ್ನು ನಾನು ನೋಡಿಯೇ ಇಲ್ಲ” ಎಂದರು.ಇದೆಲ್ಲಾ ದೇಶದ ಪ್ರಧಾನಿ ವರ್ತಿಸುವ ರೀತಿಯಾ ? ಹಾಗೆಯೇ ಉತ್ತರಕಾಂಡದ ಮುಖ್ಯಮಂತ್ರಿಗಳು, “ಗಂಗಾಮಾತೆ ಆಶೀರ್ವಾದಿಂದ ಕೊರೋನವೇ ಇಲ್ಲ. ಕೊರೋನಾ ಹೊರಟು ಹೋಗಿದೆ” ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದು,

ಆಕ್ಸಿಜನ್, ವೆಂಟಿಲೇಟರ್, ಬೆಡ್‌ಗಳು, ಆಸ್ಪತ್ರೆಗಳು, ಔಷಧಗಳು, ಲಸಿಕೆ, ರೆಮ್ಡಿಸ್ವಿವರ್ ಚುಚ್ಚುಮದ್ದು ಇಲ್ಲದೆ ದೇಶದ ಜನ ಸಾಯುವ ಹೊತ್ತಲ್ಲೂ ಬಿಜೆಪಿ ಮುಖ್ಯಮಂತ್ರಿಗಳು, ಪ್ರಧಾನಿಗಳು, ಕೇಂದ್ರ ಸಚಿವರುಗಳ ಅನಾಗರೀಕ, ಅಮಾನವೀಯ ಹೇಳಿಕೆಗಳಿಗೆ ಜನ ಅವರನ್ನು ಕ್ಷಮಿಸುವುದಿಲ್ಲ ಎಂದು ಸಿದ್ದರಾಮ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ಕೋವಿಡ್-19 ಮೊದಲ ಅಲೆ 2020ರ ಅಕ್ಟೋಬರ್, ನವೆಂಬರ್ ವೇಳೆಗೆ ಮುಗಿದಿತ್ತು. ಎರಡನೇ ಅಲೆ 2021ರ ಆರಂಭದಲ್ಲೇ ಅಪ್ಪಳಿಸುತ್ತದೆ ಎನ್ನುವುದೂ ಗೊತ್ತಿತ್ತು. ಆದರೆ ಇಲ್ಲಿಯವರೆಗೂ ದೇಶದ ಜನಕ್ಕೆ ಅಗತ್ಯವಾದಷ್ಟು ಲಸಿಕೆ ಲಭ್ಯವಿಲ್ಲ. 2020ರ ಅಕ್ಟೋಬರ್‌ನಲ್ಲೇ ಲಸಿಕೆ ಸಿದ್ದಪಡಿಸಲು ಗುತ್ತಿಗೆ ಕರೆಯಲಾಗಿತ್ತು. ಆದರೆ ಆರು ತಿಂಗಳು ಮುಗಿದರೂ ಇಲ್ಲಿಯವರೆಗೂ ದೇಶದ ಜನಕ್ಕೆ ಲಸಿಕೆ ಸಿಗುತ್ತಿಲ್ಲ. ಮೊದಲು 65 ವರ್ಷ ಮೇಲ್ಪಟ್ಟವರಿಗೆ ಎಂದರು, ಬಳಿಕ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಎಂದರು. ಈಗ 28-30 ವರ್ಷದವರೆಲ್ಲಾ ಕೊರೋನಾಕ್ಕೆ ಬಲಿ ಆಗುವುದು ಹೆಚ್ಚಾಗುತ್ತಿದ್ದಂತೆ 18 ವರ್ಷದ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತದೆ ಎನ್ನುತ್ತಿದ್ದಾರೆ. ಲಸಿಕೆಯಲ್ಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಾರತಮ್ಯ ನೀತಿ ಅನುಸರಿಸಿದ್ದು ಮಾತ್ರ ಅಕ್ಷಮ್ಯ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದ ಬದಲಿಗೆ ಲಾಕ್ ಡೌನ್ ಘೋಷಿಸಿ ದುಡಿಯುವ ವರ್ಗ ಮತ್ತು ಸಮುದಾಯಗಳನ್ನು ಹಸಿವಿಗೆ ದೂಡಿವೆ. ಇಲ್ಲಿಯವರೆಗೂ ಶ್ರಮಿಕರಿಗೆ, ದುಡಿಯುವ ವರ್ಗಕ್ಕೆ ಪ್ಯಾಕೇಜ್ ಘೋಷಿಸಿಲ್ಲ. ಮೊದಲ ಅಲೆ ಸಂದರ್ಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಘೋಷಿಸಿದ್ದ ಪ್ಯಾಕೇಜ್ ಕೂಡ ಸಮರ್ಪಕವಾಗಿ ಅಗತ್ಯವಿದ್ದವರಿಗೂ ತಲುಪಿಲ್ಲ. ಹಿಂದೆಯೇ ನಾನು ಒತ್ತಾಯಿಸಿರುವಂತೆ ಅವತ್ತೇ ದುಡಿದು ಅವತ್ತೇ ತಿನ್ನಬೇಕಾದ ಬಡ ಕುಟುಂಬಗಳಿಗೆ 10 ಕೆಜಿ ಅಕ್ಕಿ ಜತೆಗೆ ಅವರ ಕೈಗೆ 10 ಸಾವಿರ ರೂಪಾಯಿ ಹಣ ಕೊಡಬೇಕು ಎಂದು ಮತ್ತೊಮ್ಮೆ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಚುನಾವಣೆ ಇರುವ ರಾಜ್ಯಗಳಲ್ಲಿ, “ಪಕ್ಷ ಅಧಿಕಾರಕ್ಕೆ ಬಂದರೆ ಕೊರೋನಾ ಲಸಿಕೆ ಉಚಿತ” ಎಂದು ಭಾಷಣ ಮಾಡುತ್ತಿರುವ ಬಿಜೆಪಿ ರಾಷ್ಟ್ರೀಯ ಮುಖಂಡರು ಈಗಾಗಲೇ ಬಿಜೆಪಿಯೇ ಅಧಿಕಾರದಲ್ಲಿರುವ ರಾಜ್ಯಗಳ ಜನರಿಗೆ ಏಕೆ ಉಚಿತ ಲಸಿಕೆ ಕೊಡುತ್ತಿಲ್ಲ ? ರಾಜ್ಯದ ಜನ ಏನು ತಪ್ಪು ಮಾಡಿದ್ದಾರೆ ? ನಿಮಗೆ ಗೆಲ್ಲಿಸಿದ್ದೇ ತಪ್ಪಾಯಿತಾ ? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರ ಪರಿಸ್ಥಿತಿ ನಿಭಾಯಿಸಲಾಗದೆ ಕೈಚೆಲ್ಲಿರುವ ಹೊತ್ತಲ್ಲಿ ಕಾಂಗ್ರೆಸ್ ಪಕ್ಷ ಜನರನ್ನು ಕೋವಿಡ್‌ನಿಂದ ರಕ್ಷಿಸಲು ಮುಂದಾಗಿದೆ. ಈಗಾಗಲೇ ಕಾಂಗ್ರೆಸ್‌ನ ಹಾಲಿ-ಮಾಜಿ ಶಾಸಕರು, ಸಂಸದರು ಮತ್ತು ಇತರೆ ನಾಯಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಹಲವು ರೀತಿಯ ಆರೋಗ್ಯ ನೆರವು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.

ಜೊತೆಗೆ ರಾಜ್ಯ ಕಾಂಗ್ರೆಸ್‌ನಿಂದ ದೊಡ್ಡದೊಂದು ವೈದ್ಯರ ಪಟ್ಟಿ ಸಿದ್ದಪಡಿಸಲಾಗಿದೆ. ಸೋಂಕಿತರಿಗೆ ಅಗತ್ಯ ನೆರವು ನೀಡುವುದು, ಸಲಹೆ ನೀಡುವುದು, ಚಿಕಿತ್ಸೆಗೆ ಮಾರ್ಗದರ್ಶನ ನೀಡುವುದೂ ಸೇರಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆಂಬ ಮಾಹಿತಿ ನೀಡಿದ್ದಾರೆ.

ಚಿಕಿತ್ಸಾ ಕೇಂದ್ರಗಳನ್ನು ತೆರೆಯುವುದು, ರಕ್ತ ಪರೀಕ್ಷೆ ಕೇಂದ್ರಗಳನ್ನು ತೆರೆಯುವುದು ಸೇರಿದಂತೆ ಹಲವು ರೀತಿಯ ಕಾರ್ಯಗಳನ್ನು ಇನ್ನಷ್ಟು ವೇಗವಾಗಿ, ಹೆಚ್ಚಿನ ಪ್ರಮಾಣದಲ್ಲಿ ನಡೆಸಬೇಕು ಎಂದು ತೀರ್ಮಾನ ತೆಗೆದುಕೊಳ್ಳಲಾಗಿದೆ. ಕೋವಿಡ್‌ ವಿರುದ್ಧ ಹೋರಾಡಲು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸರ್ಕಾರದ ಗೈಡ್ ಲೈನ್ಸ್ ಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Previous Post

ಮಗಳ ಮದುವೆಗೆ ಕೂಡಿಟ್ಟ 2 ಲಕ್ಷವನ್ನು ಆಕ್ಸಿಜನ್‌ ಸಿಲಿಂಡರ್ ಖರೀದಿಗೆ ದಾನ ಮಾಡಿದ ರೈತ

Next Post

ತಾವು ವಿಶ್ವಗುರು ಆಗಲು ಭಾರತವನ್ನು ಬಲಿ ಕೊಡುತ್ತಿದ್ದಾರೆಯೇ ನರೇಂದ್ರ ಮೋದಿ?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ತಾವು ವಿಶ್ವಗುರು ಆಗಲು ಭಾರತವನ್ನು ಬಲಿ ಕೊಡುತ್ತಿದ್ದಾರೆಯೇ ನರೇಂದ್ರ ಮೋದಿ?

ತಾವು ವಿಶ್ವಗುರು ಆಗಲು ಭಾರತವನ್ನು ಬಲಿ ಕೊಡುತ್ತಿದ್ದಾರೆಯೇ ನರೇಂದ್ರ ಮೋದಿ?

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada