ಕರೋನಾ ಆತಂಕ: SSLC ಪರೀಕ್ಷೆ ಮುಂದೂಡಿಕೆ –ಶಿಕ್ಷಣ ಸಚಿವ ಸುರೇಶ್‌ ಕುಮಾರ್

ಕರೋನಾ 2ನೇ ಅಲೆ ಹೆಚ್ಚಾದ ಹಿನ್ನಲೆ, ಜೂನ್ 21 ರಿಂದ  ನಡೆಯಬೇಕಿದ್ದ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ  ಆದೇಶದವರೆಗೆ ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್  ತಿಳಿಸಿದ್ದಾರೆ.

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದ್ದು,   ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ ಏಕಾಗ್ರತೆಯಿಂದ‌ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕೆಂದು   ರಾಜ್ಯದ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. 

ರಾಜ್ಯದಲ್ಲಿ ಕೋವಿಡ್‌ 2 ನೇ ಅಲೆ ಹೆಚ್ಚು ಉಲ್ಬಣಗೊಳ್ಳುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಹಾಗು  ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಕೋವಿಡ್  ಎರಡನೇ‌ ಅಲೆಯ  ಸಂಪೂರ್ಣ  ನಿಯಂತ್ರಣಕ್ಕೆ ಬಂದ   ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ರಾಜ್ಯ  ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...