ಕೋವಿಡ್ -19 ಇನ್ನೂ ಮುಗಿದಿಲ್ಲ. ಸೋಂಕು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಯನ್ನು ತಪ್ಪದೆ ಪಾಲಿಸಿ ಎಂದು ದೇಶದ ಜನರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಲಹೆ ನೀಡಿದ್ದಾರೆ.
ದೆಹಲಿಯಲ್ಲಿ ಭಗವಾನ್ ಮಹಾವೀರ್ ಸೂಪರ್ ಸ್ಪೆಷಾಲಿಟಿ ನಿರ್ಮಾಣಕ್ಕೆ ಮಂಗಳವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸೋಂಕು ತಡೆಗಟ್ಟಲು ಮಾಸ್ಕ್ ಪರಿಣಾಮಕಾರಿ ಅಸ್ತ್ರ, ಸರ್ಕಾರದ ಮಾರ್ಗಸೂಚಿಯನ್ನು ತಪ್ಪದೆ ಪಾಲಿಸಿ ಎಂದರು.