ಹಿರಿಯ ಗಾಯಕಿ ಲತಾ ಮಂಗೇಶ್ಕರ್ (92) ಅವರಿಗೆ ಕೋವಿಡ್ ದೃಢವಾಗಿದ್ದು ಅವರನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಚಿಕಿತ್ಸೆಗೆ ಸ್ಪಂದಿದುತ್ತಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಇತ್ತೀಚಿಗೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಭೇಟಿ ಮಾಡಲು ಅಥವಾ ನೋಡಲು ಯಾರಿಗೂ ಅವಕಾಶ ನೀಡುತ್ತಿಲ್ಲ ಎಂದು ಆಸ್ಪತ್ರೆಯ ವೈದ್ಯ ಡಾ. ಪ್ರತೀಶ್ ಸಮ್ದಾನಿ ಹೇಳಿದ್ದಾರೆ.