• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೊರೊನಾ ಸೋಂಕು ಮತ್ತೆ ಅಬ್ಬರ.. ಆರೋಗ್ಯ ಇಲಾಖೆ ತುರ್ತು ಸಭೆ..

Any Mind by Any Mind
December 17, 2023
in ದೇಶ
0
ಕೊರೊನಾ ಸೋಂಕು ಮತ್ತೆ ಅಬ್ಬರ.. ಆರೋಗ್ಯ ಇಲಾಖೆ ತುರ್ತು ಸಭೆ..
Share on WhatsAppShare on FacebookShare on Telegram

ADVERTISEMENT

ರಾಜ್ಯದಲ್ಲಿ ಕೊರೊನಾ ಸೋಂಕು ಅಬ್ಬರ ಶುರುವಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ದೇಶದಲ್ಲಿ ಕಳೆದ ಏಳೂವರೆ ತಿಂಗಳ ಬಳಿಕ ಕೊರೊನಾ ಸೋಂಕು ನಿಧಾನವಾಗಿ ಏರುಗತಿಯಲ್ಲಿ ಸಾಗುತ್ತಿದೆ. ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ವೇಗವಾಗಿ ಹರಡುವ ಕಾರಣದಿಂದ ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ರಾಜ್ಯಗಳಿಗೂ ಎಚ್ಚರಿಕೆ ರವಾನೆ ಮಾಡಿದೆ. ಹೀಗಾಗಿ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದ್ದು, ತುರ್ತು ಸಭೆ ನಡೆಸಿದ್ದಾರೆ.

ರಾಜ್ಯದಲ್ಲಿ 58 ಆಕ್ಟೀವ್ ಕೊರೊನಾ ಕೇಸ್‌ಗಳಿದ್ದು, ಅದರಲ್ಲಿ 47 ಮಂದಿ ಹೋಂ ಐಸೋಲೇಷನ್‌ನಲ್ಲಿ ಇದ್ದಾರೆ. ಕೋವಿಡ್ ಹೆಚ್ಚಳ ಆಗೋ ಮಾಹಿತಿ ಇದೆ ಎಂದಿದ್ದಾರೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ಟೆಸ್ಟಿಂಗ್‌ ಮಾಡಲು ಸೂಚನೆ ಕೊಡಲಾಗಿದೆ. ಮುಂದಿನ ಮಂಗಳವಾರ ತಾಂತ್ರಿಕ ಸಲಹಾ ಸಮಿತಿ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಿ ಹಲವು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

ಕೊರೊನಾ ಸೋಂಕಿನ ಜೊತೆಗೆ ಕೊರೊನಾ ಉಪತಳಿ ಆಗಿರುವ JN 1 ಸೋಂಕಿನ ಟೆನ್ಷನ್ ಕೂಡ ಶುರುವಾಗಿದೆ. ರಾಜ್ಯ ಸರ್ಕಾರ ಕೊರೊನಾ ಉಪತಳಿ JN 1 ಸೋಂಕು ಬಗ್ಗೆಯೂ ಕಟ್ಟೆಚ್ಚರ ವಹಿಸಲು ನಿರ್ಧಾರ ಮಾಡಲಾಗಿದೆ. ಕರ್ನಾಟಕ ಅಷ್ಟೇ ಅಲ್ಲದೆ ನೆರೆಯ ರಾಜ್ಯ ಕೇರಳ, ತಮಿಳುನಾಡಿನಲ್ಲಿ ಕೊರೊನಾ ಕೇಸ್‌ಗಳ ಸಂಖ್ಯೆ ಹೆಚ್ಚಾಳವಾಗ್ತಿದೆ. ತಮಿಳುನಾಡಿನ ಆರೋಗ್ಯ ಸಚಿವ ಸುಬ್ರಹ್ಮಣಿಯನ್‌ ಮಾತನಾಡಿ, RTPCR ಟೆಸ್ಟ್‌ ಹೆಚ್ಚಳ ಮಾಡಲಾಗಿದೆ. ತಮಿಳುನಾಡಿನಲ್ಲಿ 38 ಆ್ಯಕ್ಟೀವ್‌‌ ಕೋವಿಡ್‌ ಕೇಸ್‌ಗಳಿದ್ದು, ಅದರಲ್ಲಿ 17 ಕೇಸ್‌ಗಳು ಚೆನ್ನೈನಲ್ಲೇ ಕಾಣಿಸಿಕೊಂಡಿವೆ. ಯಾರಿಗೇ ಸೋಂಕಿನ ಲಕ್ಷಣಗಳು ಕಾಣಿಸಿದರೂ ಟೆಸ್ಟ್‌ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಆಸ್ಪತ್ರೆಯಲ್ಲಿ ಬೆಡ್‌ ರೆಡಿ ಮಾಡಿಕೊಳ್ಳಲು ಕೇರಳ ಸರ್ಕಾರ ಈಗಾಗಲೇ ಸೂಚನೆ ಕೊಟ್ಟಿದೆ. ಭಾರತ ಮಾತ್ರವಲ್ಲ JN.1 ತಳಿ ಈಗಾಗಲೇ ಅಮೆರಿಕದಲ್ಲೂ ಜನರ ನಿದ್ರೆಗೆಡಿಸಿದೆ. ಚೀನಾದಲ್ಲೂ ಅಬ್ಬರ ಶುರು ಮಾಡಿದೆ. ಕೇರಳಾದಲ್ಲೂ JN.1 ಸೋಂಕು ಕೆಲವು ಭಾಗದಲ್ಲಿ ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಕರ್ನಾಟಕ ಸರ್ಕಾರ ಕೊರೊನಾ ಸೋಂಕು ಹೆಚ್ಚಳ ಆದರೆ ನಿಭಾಯಿಸುವ ಶಕ್ತಿಯನ್ನು ಹೆಚ್ಚಳ ಮಾಡಿಕೊಳ್ಳಲು ತಯಾರಿ ನಡೆಸುತ್ತಿದೆ. ಒಂದು ವೇಳೆ ಕೊರೊನಾ ಸೋಂಕು ಹೆಚ್ಚಳ ಆದರೆ ಅದರಲ್ಲೂ ವ್ಯಾಕ್ಸಿನ್‌ ಪಡೆದವರಲ್ಲೇ ಕೊರೊನಾ ಸೋಂಕು ಬರುತ್ತಿದ್ದರೆ ಕೊರೊನಾ ವ್ಯಾಕ್ಷಿನ್‌ ಬಗ್ಗೆಯೂ ದೇಶದಲ್ಲಿ ಚರ್ಚೆ ಹುಟ್ಟುಹಾಕುವ ಸಾಧ್ಯತೆಗಳಿವೆ.

Tags: BJPCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಬಿಜೆಪಿ
Previous Post

ಶಿಥಿಲ ಬೇರುಗಳ ನಡುವೆ ಹಸಿರೆಲೆಯ ಚೆಲುವು : ನಾ ದಿವಾಕರ ಅವರ ಬರಹ

Next Post

ಜನ ಒತ್ತಾಯಿಸಿದ್ರೆ ಯತೀಂದ್ರ ಲೋಕಸಭಾ ಕಣಕ್ಕೆ : ಸಿದ್ದರಾಮಯ್ಯ

Related Posts

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?
Top Story

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

by ಪ್ರತಿಧ್ವನಿ
April 20, 2026
0

ಬೆಂಗಳೂರು :  ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (Enforcement Directorate) ದಾಳಿ...

Read moreDetails
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
Next Post
ಜನ ಒತ್ತಾಯಿಸಿದ್ರೆ ಯತೀಂದ್ರ ಲೋಕಸಭಾ ಕಣಕ್ಕೆ : ಸಿದ್ದರಾಮಯ್ಯ

ಜನ ಒತ್ತಾಯಿಸಿದ್ರೆ ಯತೀಂದ್ರ ಲೋಕಸಭಾ ಕಣಕ್ಕೆ : ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada