ವ್ಯಾಕ್ಸಿನೇಷನ್‌ ವಿಷಯದಲ್ಲಿ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಸರ್ಕಾರವೇ ಬೆಂಬಲಿಸುತ್ತಿದೆ – ಸಿದ್ದರಾಮಯ್ಯ ಗಂಭೀರ ಆರೋಪ

ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ ಇರುವ ಲಸಿಕೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಯಾಕಿಲ್ಲ ಎಂದು ಹೈಕೋರ್ಟ್‌ ಚಾಟಿ‌ ಬೀಸಿದರೂ ರಾಜ್ಯ ಸರ್ಕಾರ ಖಾಸಗಿ‌ ಆಸ್ಪತ್ರೆಗಳ‌ ಸುಲಿಗೆಯನ್ನು ಬೆಂಬಲಿಸುತ್ತಿರುವುದು ನಿರ್ಲಜ್ಜತನದ ಪರಮಾವಧಿ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಜನತೆಗೆ‌ ಉಚಿತವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಕರೋನಾ ಲಸಿಕೆ‌ ಸಿಗುವಂತೆ ಮಾಡಬೇಕಾಗಿರುವ ಆರೋಗ್ಯ ಸಚಿವ ಸುಧಾಕರ್ ಖಾಸಗಿ ಆಸ್ಪತ್ರೆಗಳ ಪರವಾಗಿ ಪ್ರಚಾರಕ್ಕಿಳಿದಿದ್ದಾರೆ. ಇವರು ಸಚಿವರೋ..? ಖಾಸಗಿ ಆಸ್ಪತ್ರೆಗಳ ಪ್ರಚಾರಕರೋ.? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳು ಲಸಿಕಾ ತಯಾರಕ ಸಂಸ್ಥೆ ನಿಗದಿಪಡಿಸಿದ ದರದ ಜೊತೆಗೆ ರೂ.100 ಸೇವಾಶುಲ್ಕ ಮಾತ್ರ ವಸೂಲಿ ಮಾಡಬೇಕೆಂದು ಕೇಂದ್ರ‌ ಸರ್ಕಾರ ಸರ್ಕಾರದ ಸುತ್ತೋಲೆ ಇದ್ದರೂ ಲಸಿಕೆಯನ್ನು 900ರೂ.ಗೆ‌ ಮಾರಾಟ‌ ಮಾಡುತ್ತಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಮಯಾಕಿಲ್ಲ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

ಖಾಸಗಿ ಆಸ್ಪತ್ರೆಗಳು ನೀಡುವ ಲಸಿಕೆಗೆ ಸೇವಾ ಶುಲ್ಕವನ್ನು ರೂ.100ರಿಂದ 200ಕ್ಕೆ ಹೆಚ್ಚಿಸಿರುವ ರಾಜ್ಯದ  ಬಿಜೆಪಿ ಸರ್ಕಾರ ಯಾರ ಹಿತರಕ್ಷಣೆ‌ ಮಾಡುತ್ತಿದೆ? ರಾಜ್ಯದ ಜನರದ್ದೋ? ಖಾಸಗಿ ಆಸ್ಪತ್ರೆಗಳದ್ದೋ..? ಎಂದು ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಕಳೆದ ಏಪ್ರಿಲ್‌ನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಖಾಸಗಿ‌ ಸಂಸ್ಥೆಗಳು ನೀಡುವ ಲಸಿಕೆಗೆ ರೂ.100 ಸೇವಾ ಶುಲ್ಕವನ್ನು‌ ನಿಗದಿಪಡಿಸಿದ್ದರೂ, ಖಾಸಗಿ ಆಸ್ಪತ್ರೆಗಳು ಲಸಿಕೆಗೆ ಹೆಚ್ಚುವರಿ‌ ಶುಲ್ಕ ವಸೂಲಿ‌ ಮಾಡುತ್ತಿದ್ದಾರೆನ್ನುವ ದೂರುಗಳಿವೆ. ಹೀಗಿರುವಾಗಲೇ ರಾಜ್ಯ ಸರ್ಕಾರ ಸೇವಾ ಶುಲ್ಕ‌ವನ್ನು ದುಪ್ಪಟ್ಟುಗೊಳಿಸಿ ಸುಲಿಗೆಯನ್ನು ಬೆಂಬಲಿಸಿದೆ ಎಂದು ಹರಿಹಾಯ್ದಿದ್ದಾರೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...