• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Dinesh Gundu Rao: ಹೃದಾಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
July 7, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಡಾ. ರವೀಂದ್ರನಾಥ್ ಅವರಿಂದ ಆರೋಗ್ಯ ಸಚಿವರಿಗೆ ಕೋವಿಡ್ ಅಡ್ಡ ಪರಿಣಗಳ ವರದಿ ಸಲ್ಲಿಕೆ , ಸಮಿತಿಯ ಶಿಫಾರಸ್ಸುಗಳ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಹೃದಯ ತಪಾಸಣೆ ನಡೆಸಲು ನಿರ್ಧಾರ. ಸರ್ಕಾರಿ ಆಸ್ಪತ್ರೆಗಳ ಹೊರಗೆ ನಡೆಯುವ ಎಲ್ಲ ಹಠಾತ್ ಸಾವುಗಳನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಲು ತೀರ್ಮಾನ

ADVERTISEMENT

ಆಸ್ಪತ್ರೆಯ ಹೊರೆಗೆ ನಡೆಯುವ ಎಲ್ಲ ಹಠಾತ್ ಸಾವುಗಳು ಇನ್ಮುಂದೆ ನೋಟಿಫೈಯಾಗಲಿದ್ದು, ಹೃದಯಾಘಾತಗಳ ಬಗ್ಗೆ ಸಂಶೋಧನೆಗೆ ಹೆಚ್ಚಿನ ಅಂಕಿ ಅಂಶಗಳು ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೋವಿಡ್ ಅಡ್ಡ ಪರಿಣಾಮಗಳ ಕುರಿತು ತಜ್ಞರ ಸಮಿತಿಯ ವರದಿ ಸ್ವೀಕರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಬಳಿಕ ಶೇ 4 ರಿಂದ 5 ರಷ್ಟು ಹೃದಯಾಘಾತಗಳ ಸಂಖ್ಯೆ ಹೆಚ್ಚಾಗಿವೆ ಎಂದರು. ಆದರೆ ಇದಕ್ಕೆ ಕೋವಿಡ್ ಲಸಿಕೆ ನೇರ ಕಾರಣವಲ್ಲ ಎಂಬುದು ತಜ್ಞರ ವರದಿಯಲ್ಲಿ ಹೇಳಲಾಗಿದೆ ಎಂದು ಸ್ಪಷ್ಟಪಡಿಸಿದರು.‌

ಹೃದಯಾಘಾತಗಳು ಹೆಚ್ಚಾಗಲು ಶೇ 50 ರಷ್ಟು ಪ್ರಕರಣಗಳಲ್ಲಿ ತಂಬಾಕು ಸೇವನೆಯೇ ಪ್ರಮುಖ ಕಾರಣ ಎಂಬುದು ತಜ್ಞರ ವರದಿಯಲ್ಲಿ ಹೇಳಲಾಗಿದೆ. ಇದರ ಹೊರತಾಗಿ
ಮಧುಮೇಹ, ರಕ್ತದೊತ್ತಡ, ಒಬೆಸಿಟಿ ಹೆಚ್ಚಾಗಿದೆ. ಸ್ಟೀರಾಯ್ಡ್ ಹೆಚ್ಚಿನ ಬಳಕೆಯೂ ಕೂಡ ಕಾರಣವಾಗಿದೆ. ಕೋವಿಡ್ ಪೂರ್ವದಲ್ಲಿ ಜಯದೇವ ಆಸ್ಪತ್ರೆ ಮೆಡಿಕಲ್ ರೆಕಾರ್ಡ್ಸ್ ಗೆ ಹೊಲಿಕೆ ಮಾಡಿ ಕೂಡಾ ವರದಿ ಸಿದ್ಧಪಡಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ 253 ಹೃದ್ರೋಗ ರೋಗಿಗಳ ಮೇಲೆ ಅಧ್ಯಯನ ಮಾಡಲಾಗಿದೆ. ಹೃದಯಾಘಾತಗಳಿಗೆ ಕೋವಿಡ್ ಲಸಿಕೆ ನೇರ ಕಾರಣವಲ್ಲ ಎಂದು ತಿಳಿದುಬಂದಿದೆ. ಎಂಆರ್ ಎನ್ ಎ ಲಸಿಕೆಯಿಂದ ಕೊಂಚ ಸಮಸ್ಯೆ ಎದುರಾಗಿದೆ. ಆದರೆ ಈ ಲಸಿಕೆಯನ್ನು ನಮ್ಮ ದೇಶದಲ್ಲಿ ಯಾರು ಪಡೆದಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮೊಬೈಲ್, ಸಿಸ್ಟಮ್ ಗಳ ಸ್ಕ್ರೀನ್ ಮುಂದೆ ಮಿತಿಮೀರಿದ ಸಮಯ ಕಳೆದಿರುವುದು ಪರಿಣಾಮ ಬೀರಿದೆ. ಕೋವಿಡ್ ಸಮಯದಲ್ಲಿ ಹೃದಯಾಘಾತಗಳಾಗಿವೆ. ಆದರೆ 3 ವರ್ಷಗಳ ನಂತರ‌ ಕೋವಿಡ್ ನಿಂದ ದುಷ್ಪರಿಣಾಮ ಬೀರಿರುವುದು ಕಡಿಮೆ ಎಂದು ತಜ್ಞರು ವರದಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.‌ 253 ಪ್ರಕರಣಗಳಲ್ಲಿ 19 ಪ್ರಕರಣಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಿದ್ದವು. ಆದರೆ ಶೇ 98 ರಷ್ಟು ಪ್ರಕರಣಗಳಲ್ಲಿ ಕೋವಿಡ್ ಲಸಿಕೆ ಪಡೆದವರಾಗಿದ್ದರು.‌ ಕೊವಿಡ್ ಬಂದ ಒಂದು ವರ್ಷದಲ್ಲಿ ರಕ್ತನಾಳ ಬ್ಲಾಕೇಜ್ ಆಗೋ ಸಾಧ್ಯತೆ ಇದೆ. ಆದ್ರೆ ಮೂರು ವರ್ಷದ ನಂತರ ಅದರ ಪರಿಣಾಮ ಅಷ್ಟರ ಮಟ್ಟಿಗೆ ಇಲ್ಲ ಎಂಬುದು ತಜ್ಞರ ವರದಿಯಲ್ಲಿ ಹೇಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ತಜ್ಞರ ವರದಿಯ ಹಿನ್ನೆಲೆಯಲ್ಲಿ ಹೃದಯಾಘಾತಗಳನ್ನ ಆರಂಭದಲ್ಲೇ ಪತ್ತೆ ಹಚ್ಚಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಲವು ಮಹತ್ವದ ನಿರ್ಧಾರಗಳನ್ನ ಘೋಷಿಸಿದರು..

  • ಸರ್ಕಾರಿ ಆಸ್ಪತ್ರೆಯ ಹೊರಗೆ ನಡೆಯುವ ಎಲ್ಲ ಹಠಾತ್ ಸಾವುಗಳನ್ನು ಅಧಿಸೂಚಿತ ಖಾಯಿಲೆ ಎಂದು ಪರಿಗಣಿಸಲು ನಿರ್ಧಾರ.
  • ಆಸ್ಪತ್ರೆಯ ಹೊರಗೆ ನಡೆಯುವ ಎಲ್ಲ ಹಠಾತ್ ಸಾವುಗಳ ಡೆತ್ ಸರ್ಟಿಫಿಕೇಟ್ ಪಡೆಯಲು ಮರಣೋತ್ತರ ಪರೀಕ್ಷೆ ಕಡ್ಡಾಯ..
  • 15 ವರ್ಷದ ಎಲ್ಲ ಶಾಲಾ ಮಕ್ಕಳನ್ನು ಹೃದಯ ತಪಾಸಣೆಗೆ ಒಳಪಡಿಸಲು ಪ್ಲಾನ್.
  • ಪಠ್ಯ ಪುಸ್ತಕದಲ್ಲಿ ಶಾಲಾ ಮಕ್ಕಳಿಗೆ ಅಸಾಂಕ್ರಾಮಿಕ ರೋಗ, ಹೃದಯ circular ಅಳವಡಿಸಲು ಶಿಕ್ಷಣ ಇಲಾಖೆಗೆ ಮಾಹಿತಿ ಕಳುಹಿಸಲಾಗಿದೆ.
  • ಹಠಾತ್ ಹೃದಯಘಾತಗಳ ಸಂದರ್ಭದಲ್ಲಿ ಸಂಜೀವಿನಿಯಂತೆ ಕಾರ್ಯನಿರ್ವಹಿಸುತ್ತಿರುವ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಎಲ್ಲ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಣೆ.
  • ಬಸ್ ಸ್ಟಾಂಡ್, ರೈಲ್ವೇ ನಿಲ್ದಾಣಗಳಲ್ಲಿ ಸ್ವಯಂ ಚಾಲಿತ AED ಯಂತ್ರಗಳನ್ನ ಇಡಲು ನಿರ್ಧಾರ. ಸಾರ್ವಜನಿಕರಿಗೆ ಸಿಪಿಆರ್ ತರಬೇತಿ ನೀಡಲು‌ ಯೋಜನೆ.
  • ಸರ್ಕಾರ ಮಟ್ಟದಲ್ಲಿ ಸರ್ಕಾರಿ‌ ನೌಕಕರಿಗೆ, ಗುತ್ತಿಗೆ ನೌಕರರಿಗೆ ಹೃದಯ ತಪಾಸಣೆ, ಎ೬ ಸ್ಕ್ರೀನಿಂಗ್ ಮಾಡಲು ನಿರ್ಧರಿಸಿದ್ದೇವೆ
  • ಖಾಸಗಿ ಕಂಪನಿಗಳು, ಉದ್ದಿಮೆದಾರರು ತಮ್ಮ ಕಂಪನಿಗಳಲ್ಲಿ ಕಾರ್ಮಿಕರಿಗೆ ವಾರ್ಷಿಕ ಆರೋಗ್ಯ ತಪಾಸಣೆ ನಡೆಸಲು ಸಲಹೆ..
Tags: bjp slams dinesh gunduraodinesh gundur raoDinesh Gunduraodinesh gundurao about c t ravidinesh gundurao about pm modidinesh gundurao daughtersdinesh gundurao interviewdinesh gundurao latest newsdinesh gundurao love storydinesh gundurao newsdinesh gundurao reactiondinesh gundurao slams pm modidinesh gundurao slams yogiHealth Minister Dinesh Gunduraopcc chief dinesh gunduraotabu dinesh gunduraowho is dinesh gundurao's wife?
Previous Post

ಪೇಮೆಂಟ್ ಪಡೆದು ಪ್ರೊಟೆಸ್ಟ್ ಮಾಡುವ ಕಾಂಗ್ರೆಸ್ಸಿಗರೇ..! – ಮೇಕೆದಾಟುಗೆ DMK ತಕರಾರಿಗೆ ನಿಮ್ಮ ಬದ್ಧತೆ ಏನು ..?! : ಜೆಡಿಎಸ್ ಪ್ರಶ್ನೆ 

Next Post

Priyanka Kharge: ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post

Priyanka Kharge: ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada