ಅಸಹಜ ಸಾವುಗಳೂ ಆಡಳಿತ ಕ್ರೌರ್ಯವೂ

ಕೋವಿಡ್ ನಂತಹ ಒಂದು ಸಾಂಕ್ರಾಮಿಕ ಉಂಟುಮಾಡಿದ ಅನಾಹುತ ನಮ್ಮ ನಾಗರಿಕ ಸಮಾಜವನ್ನು ಮತ್ತು ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಜಾಗೃತಗೊಳಿಸಬೇಕಿತ್ತು. ಅಧಿಕಾರ ರಾಜಕಾರಣದ ಆಟಾಟೋಪದಲ್ಲಿ ಮರೆತುಹೋಗಬಹುದಾದ ಮಾನವ ಸಂವೇದನೆಯ ಎಳೆಗಳನ್ನು ಕಿಂಚಿತ್ತಾದರೂ ಹೊರಗೆಳೆಯಬೇಕಿತ್ತು. ದಿನನಿತ್ಯ ಸಾವುಗಳನ್ನು ಎಣಿಸುವ ಅಧಿಕಾರ ಕೇಂದ್ರಗಳಲ್ಲಿ ಪ್ರತಿಯೊಂದು ಸಾವು ಮನಸನ್ನು ಪ್ರಕ್ಷುಬ್ಧಗೊಳಿಸುವ ವಿಕ್ಷಿಪ್ತತೆಯನ್ನು ಉಂಟುಮಾಡಬೇಕಿತ್ತು. ಇಡೀ ಸಮಾಜವೇ ಆರೋಗ್ಯದಿಂದಿದೆ ಎನ್ನುವ ಭ್ರಮೆಯಲ್ಲಿದ್ದ ನಮಗೆ ಒಮ್ಮಿಂದೊಮ್ಮೆಲೆ ಸರಣಿ ಸಾವುಗಳು ಎದುರಾದಾಗ ನಮ್ಮ ಸಮಾಜ ಆಘಾತಕ್ಕೊಳಗಾಗಬೇಕಿತ್ತು. ಇದೇ ನಾಗರಿಕ ಸಮಾಜವನ್ನು ಆಡಳಿತಾತ್ಮಕವಾಗಿ ಪ್ರತಿನಿಧಿಸುವ ಒಂದು ವ್ಯವಸ್ಥೆಯ ಮನಸ್ಥಿತಿಯೂ … Continue reading ಅಸಹಜ ಸಾವುಗಳೂ ಆಡಳಿತ ಕ್ರೌರ್ಯವೂ