ಕರೋನಾ ವ್ಯಾಕ್ಸಿನೇಷನ್‌ ಹಂಚಿಕೆ ಪ್ರಕ್ರಿಯೆಗೆ 100 ಕೋಟಿ ರೂ ನೀಡಲು ಮುಂದಾದ ಕಾಂಗ್ರೆಸ್

ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರಿಗೆ ಮಂಜೂರು ಮಾಡುವ ಪ್ರದೇಶಾಭಿವೃದ್ಧಿ ನಿಧಿಯಿಂದ ನೂರು ಕೋಟಿ ರೂ.ಗಳನ್ನು ಲಸಿಕೆಗಾಗಿ ನೀಡಲು ಕಾಂಗ್ರೆಸ್‌ ಮುಂದಾಗಿದೆ. ಈ ಸಂಬಂಧ ಪತ್ರಿಕಾ ಗೋಷ್ಟಿ ನಡೆಸಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.‌ಶಿವಕುಮಾರ್  ಮಾಹಿತಿ ಹಂಚಿಕೊಂಡಿದ್ದಾರೆ.

ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಮ್ಮ ಪಕ್ಷದ ಎಲ್ಲಾ ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ರೂ.1 ಕೋಟಿಯಂತೆ ಒಟ್ಟು ರೂ.100 ಕೋಟಿ ಹಣವನ್ನು ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ ನೀಡಲು ತೀರ್ಮಾನಿಸಿದ್ದೇವೆ ತಿಳಿಸಿದ್ದಾರೆ.

ದೇಶದ ಪ್ರತಿಯೊಬ್ಬರಿಗೂ ಕರೋನಾ ವ್ಯಾಕ್ಸಿನ್ ನೀಡುವುದೇ ಸೋಂಕು ತಡೆಗಟ್ಟಲು ಇರುವ ಪರಿಣಾಮಕಾರಿ ಮಾರ್ಗವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇಷ್ಟರೊಳಗೆ ಕನಿಷ್ಠ ಅರ್ಧದಷ್ಟು ಜನರಿಗೆ ವ್ಯಾಕ್ಸಿನ್ ನೀಡಿದ್ದರೆ ಕರೋನಾ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ಬಂದಿರುತ್ತಿತ್ತು ಎಂದಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೇಜವಾಬ್ದಾರಿಯಿಂದಾಗಿ ಇಂದು ಜನ ವ್ಯಾಕ್ಸಿನ್ ಗಾಗಿ ಆಸ್ಪತ್ರೆಗಳಿಗೆ ಅಲೆಯುವ ಪರಿಸ್ಥಿತಿ ಬಂದಿದೆ. ಕರ್ನಾಟಕ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ವ್ಯಾಕ್ಸಿನ್ ನೀಡಿಕೆ ಸಂಬಂಧ ಎರಡೂ ಸರ್ಕಾರಗಳಿಗೆ ಛೀಮಾರಿ ಹಾಕಿವೆ. ಇಷ್ಟಾದರೂ ಬಿಜೆಪಿ ನಾಯಕರಿಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಕ್ಕೆ ವ್ಯಾಕ್ಸಿನ್ ಬರಲು ಇನ್ನು ಹಲವು ತಿಂಗಳುಗಳಾಗಬಹುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಹೇಳಿದ್ದಾರೆ. ಕೆಲವೇ ದಿನಗಳಲ್ಲಿ ಕರೋನಾ 3ನೇ ಅಲೆ ಬರಲಿದ್ದು, ಅದರ ಬಗೆಗಿನ ತಜ್ಞರ ಅಭಿಪ್ರಾಯವನ್ನು ಗಮನಿಸಿದರೆ ಮುಂದಿನ ದಿನಗಳ ಬಗ್ಗೆ ಆತಂಕವಾಗುತ್ತದೆ. ಕೊವಿಶೀಲ್ಡ್ ವ್ಯಾಕ್ಸಿನ್ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಪದೇ ಪದೇ ತನ್ನ ಮಾರ್ಗಸೂಚಿಯನ್ನು ಬದಲಾವಣೆ ಮಾಡುತ್ತಿದೆ. ಮೊದಲ ಹಾಗೂ ಎರಡನೇ ಡೋಸ್ ನಡುವಿನ ಅಂತರ 6 ವಾರ ಎಂದು ಈ ಹಿಂದೆ ಹೇಳಿತ್ತು, ಈಗ ಅದನ್ನು 12 ರಿಂದ 16 ವಾರಗಳಿಗೆ ಏರಿಸಿ ಹೊಸ ಮಾರ್ಗಸೂಚಿ ಹೊರಡಿಸಿದೆ.

ವ್ಯಾಕ್ಸಿನ್ ನೀಡಿಕೆ ವಿಚಾರದಲ್ಲಿ ಸರ್ಕಾರ ತನ್ನ ಅನುಕೂಲಕ್ಕೆ ತಕ್ಕಂತೆ ಮಾರ್ಗಸೂಚಿಗಳನ್ನು ಬದಲಾವಣೆ ಮಾಡಿಕೊಳ್ಳುತ್ತಿದೆ. ಇದೊಂದು ವೈಜ್ಞಾನಿಕ ಪ್ರಕ್ರಿಯೆ, ವ್ಯಾಕ್ಸಿನ್ ತಯಾರಿಕಾ ಹಂತದಲ್ಲಿಯೇ ಎರಡು ಡೋಸ್ಗಳ ನಡುವಿನ ದಿನಗಳ ಅಂತರವನ್ನೂ ನಿರ್ಧರಿಸಲಾಗಿರುತ್ತದೆ, ಹಾಗಿದ್ದಾಗ ಪದೇ ಪದೇ ಬದಲಾವಣೆ ಹೇಗೆ ಸಾಧ್ಯ? ಸರ್ಕಾರ ಗಂಟೆಗೊಂದು, ದಿನಕ್ಕೊಂದು ಮಾರ್ಗಸೂಚಿ ಹೊರಡಿಸುವ ಮೂಲಕ ಜನರನ್ನು ಗೊಂದಲಕ್ಕೆ ದೂಡುತ್ತಿದೆ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

18 ರಿಂದ 45ರ ವಯೋಮಿತಿಯ ಜನರ ವ್ಯಾಕ್ಸಿನ್ ಗೆ ರಾಜ್ಯ ಸರ್ಕಾರಗಳೇ ಹಣ ಹಾಕಬೇಕು ಎಂದು ಕೇಂದ್ರ ಸರ್ಕಾರ ಹೇಳಿರುವುದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ. ಕೇಂದ್ರ ಸರ್ಕಾರವೇ ಇಡೀ ದೇಶದ ಜನತೆಗೆ ಉಚಿತವಾಗಿ ವ್ಯಾಕ್ಸಿನ್ ನೀಡುವ ಕೆಲಸ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...