
ಸಂಸದ ಡಿಕೆ ಸುರೇಶ್ ಕಾರ್ಯವೈಖರಿಯನ್ನ ತುಮಕೂರಿನ ಪ್ರಸಿದ್ಧ ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ಹಾಡಿ ಹೊಗಳಿದ್ದಾರೆ.ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾಗಿ ಕೋವಿಡ್ ಸಂದರ್ಭದಲ್ಲಿ ಮಾಡಿದ ಜನಸೇವೆ, ಸಂಸತ್ತಿನಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಡಿ.ಕೆ. ಸುರೇಶ್ ಅವರ ಕಾರ್ಯವೈಖರಿಯನ್ನು ಸಿದ್ದಗಂಗಾ ಮಠದ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿಯವರು ಮುಕ್ತ ಕಂಠದಿಂದ ಪ್ರಶಂಸಿಸಿದರು.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಸುರೇಶ್ ಅವರು ಶ್ರೀಗಳ ಆಶೀರ್ವಾದ ಪಡೆದರು. ಲಿಂಗೈಕ್ಯ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ನಮಸ್ಕರಿಸಿದರು.
ಕೋವಿಡ್ ಸಮಯದಲ್ಲಿ ಅನಾಥ ಶವಗಳಿಗೆ ಅಂತ್ಯ ಸಂಸ್ಕಾರ, ರೋಗಿಗಳಿಗೆ ಔಷಧ ಪೂರೈಕೆ, ರೈತರಿಂದ ಹಣ್ಣು-ತರಕಾರಿ ಖರೀದಿಸಿ ಬಡವರಿಗೆ ಉಚಿತ ವಿತರಣೆ, ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಸರಿಪಡಿಸಿ, ಸೋಂಕಿತರಿಗೆ ಧೈರ್ಯ ತುಂಬಿದ ಸುರೇಶ್ ಅವರ ಕಾರ್ಯವೈಖರಿಯನ್ನು ಶ್ರೀಗಳು ಶ್ಲಾಘಿಸಿದರು.ಸಂಸತ್ತಿನಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತುತ್ತಿರುವುದಕ್ಕೂ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು.ಸಂಸದ ಡಿಕೆ ಸುರೇಶ್ ಕಾರ್ಯವೈಖರಿಯನ್ನ ತುಮಕೂರಿನ ಪ್ರಸಿದ್ಧ ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ಹಾಡಿ ಹೊಗಳಿದ್ದಾರೆ.ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾಗಿ ಕೋವಿಡ್ ಸಂದರ್ಭದಲ್ಲಿ ಮಾಡಿದ ಜನಸೇವೆ, ಸಂಸತ್ತಿನಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಡಿ.ಕೆ. ಸುರೇಶ್ ಅವರ ಕಾರ್ಯವೈಖರಿಯನ್ನು ಸಿದ್ದಗಂಗಾ ಮಠದ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿಯವರು ಮುಕ್ತ ಕಂಠದಿಂದ ಪ್ರಶಂಸಿಸಿದರು. ತುಮಕೂರಿನ ಸಿದ್ದಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದ ಸುರೇಶ್ ಅವರು ಶ್ರೀಗಳ ಆಶೀರ್ವಾದ ಪಡೆದರು. ಲಿಂಗೈಕ್ಯ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ನಮಸ್ಕರಿಸಿದರು. ಕೋವಿಡ್ ಸಮಯದಲ್ಲಿ ಅನಾಥ ಶವಗಳಿಗೆ ಅಂತ್ಯ ಸಂಸ್ಕಾರ, ರೋಗಿಗಳಿಗೆ ಔಷಧ ಪೂರೈಕೆ, ರೈತರಿಂದ ಹಣ್ಣು-ತರಕಾರಿ ಖರೀದಿಸಿ ಬಡವರಿಗೆ ಉಚಿತ ವಿತರಣೆ, ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಸರಿಪಡಿಸಿ, ಸೋಂಕಿತರಿಗೆ ಧೈರ್ಯ ತುಂಬಿದ ಸುರೇಶ್ ಅವರ ಕಾರ್ಯವೈಖರಿಯನ್ನು ಶ್ರೀಗಳು ಶ್ಲಾಘಿಸಿದರು.ಸಂಸತ್ತಿನಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತುತ್ತಿರುವುದಕ್ಕೂ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು.
