ಬಿಜೆಪಿ (Bjp) ತೊರೆದು ಕಾಂಗ್ರೆಸ್ (Congress) ಸೇರ್ಪಡೆಯಾಗಿದ್ದ ಹಿನ್ನಲೆ ನಿರೀಕ್ಷೆಯಂತೆ ಚನ್ನಪಟ್ಟಣ ಕಾಂಗ್ರೆಸ್ ಟಿಕೆಟ್ ಸಿ.ಪಿ. ಯೋಗೇಶ್ವರ್‌ಗೆ (Cp yogeshwar) ನೀಡಲಾಗಿದೆ. ಹೀಗಾಗಿ ಚನ್ನಪಟ್ಟಣದ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಇವತ್ತು ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸಲಿದ್ದಾರೆ.

ಇಂದು ಬೆಳಗ್ಗೆ 11 ಗಂಟೆಗೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಇದೇ ವೇಳೆ ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ರೋಡ್ ಶೋ (Road show) ನಡೆಸಲಿದ್ದಾರೆ. ಮೈತ್ರಿ ನಾಯಕರ ವಿರುದ್ಧ ಬೃಹತ್ ಶಕ್ತಿ ಪ್ರದರ್ಶನದಲ್ಲಿ ಸಿಎಂ ಸಿದ್ದರಾಮಯ್ಯ (Cm siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್ (Dcm Dk Shivakumar), ಸಚಿವರಾದ ಚಲುವರಾಯಸ್ವಾಮಿ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.
ಇನ್ನೊಂದೆಡೆ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಆಯ್ಕೆಯ ಗೊಂದಲಕ್ಕೆ ಬಿದ್ದಿದ್ದು, ಇಂದು ಅಭ್ಯರ್ಥಿಯ ಹೆಸರು ಘೋಷಿಸುವುದಾಗಿ ನಿನ್ನೆ ಕುಮಾರಸ್ವಾಮಿ ಹೇಳಿದ್ದಾರೆ. ಹೀಗಾಗಿ ನಿಖಿಲ್ (Nikhil kumaraswamy) ಸ್ಪರ್ಧೆ ಮಾಡ್ತಾರಾ ಅಥವಾ ಅನಿತಾ ಕುಮಾರಸ್ವಾಮಿಯನ್ನ (Anitha kumara swamy) ಕಣಕಿಳಿಸ್ತಾರ ಕಾದು ನೋಡಬೇಕಿದೆ.