• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಮಗಾರಿ ವಿಳಂಬ ಮಾಡುವ ಗುತ್ತಿಗೆದಾರರಿಗೆ ಬಿಸಿ ಮುಟ್ಟಿಸಿ : ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಖಡಕ್ ಸೂಚನೆ

ರಾಜ್ಯದ ನಗರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ವೇಗ : ಯತೀಂದ್ರ ಸಿದ್ದರಾಮಯ್ಯ ಹೇಳಿಕೆ..

ಪ್ರತಿಧ್ವನಿ by ಪ್ರತಿಧ್ವನಿ
July 21, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕಾಮಗಾರಿ ವಿಳಂಬ ಮಾಡುವ ಗುತ್ತಿಗೆದಾರರಿಗೆ ಬಿಸಿ ಮುಟ್ಟಿಸಿ : ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಖಡಕ್ ಸೂಚನೆ
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ಕೈಗೆತ್ತಿಕೊಳ್ಳಲಾಗಿರುವ ನಗರಾಭಿವೃದ್ಧಿ ಹಾಗೂ ಕುಡಿಯುವ ನೀರು ಸರಬರಾಜು ಯೋಜನೆಗಳ ವಿಳಂಬ ಕಾಮಗಾರಿಗಳ ಕುರಿತು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ADVERTISEMENT
Footpath Clearance: ಶಿವಾಜಿನಗರದಲ್ಲಿ ಫುಟ್​ಪಾತ್ ತೆರವು ವೇಳೆ ಹಲ್ಲೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ #pratidhvani

ಬೆಂಗಳೂರಿನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ (KUIDFC) ಕಚೇರಿಯಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ವಿವಿಧ ಯೋಜನೆಗಳ ಪ್ರಗತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನಿಯಮಿತವಾಗಿ ಕಾಮಗಾರಿಗಳ ಮೇಲ್ವಿಚಾರಣೆ ನಡೆಸಿ, ನಿಗದಿಪಡಿಸಿದ ಕಾಲಮಿತಿಯೊಳಗೆ ಪ್ರತಿಯೊಂದು ಯೋಜನೆಯನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಕೆಲಸದಲ್ಲಿ ನಿರ್ಲಕ್ಷ್ಯ ವಹಿಸುವ ಹಾಗೂ ಉದ್ದೇಶಪೂರ್ವಕವಾಗಿ ಕಾಮಗಾರಿ ವಿಳಂಬ ಮಾಡುವ ಗುತ್ತಿಗೆದಾರರ ವಿರುದ್ಧ ಯಾವುದೇ ದಾಕ್ಷಿಣ್ಯ ತೋರದೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ : ಈ ದೇಶಕ್ಕೆ ಮಾರಕ ಯಾವ ಸರ್ಕಾರವೂ ಅಲ್ಲ..ನೀವು.!ಹೌದು ನೀವೇ..!

ವಿಶ್ವ ಬ್ಯಾಂಕ್ ನೆರವಿನ ನಿರಂತರ ನೀರು ಸರಬರಾಜು ಯೋಜನೆಯಡಿ ಬೆಳಗಾವಿ, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಈ ಯೋಜನೆಯಿಂದ 27 ಲಕ್ಷಕ್ಕೂ ಹೆಚ್ಚು ಜನರಿಗೆ ನಿರಂತರ ಕುಡಿಯುವ ನೀರಿನ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ನಗರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ವೇಗ..

ಬೆಳಗಾವಿಯ ಕಾಮಗಾರಿ ಇದೇ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದ್ದು, ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡದ ಕಾಮಗಾರಿಗಳನ್ನು 2027ರ ಜೂನ್ ವೇಳೆಗೆ ಪೂರ್ಣಗೊಳಿಸಲು ಗಡುವು ನಿಗದಿಪಡಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Satish Jarkiholi : ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಮಟ್ಟಹಾಕಲು ಸರ್ಕಾರ ಸಿದ್ಧವಾಗಿದೆ..! #pratidhvani

ಇತ್ತೀಚೆಗೆ ಕಲಬುರಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ನೀರು ಶುದ್ಧೀಕರಣ ಘಟಕ ಹಾಗೂ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿದ್ದೇನೆ. ಕಾಮಗಾರಿ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಸಾಧಿಸಿಲ್ಲ ಎಂದು ಯತೀಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಹಾಗೂ ಸುಸ್ಥಿರ ನಗರಾಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕೆಯುಐಡಿಎಫ್‌ಸಿ (KUIDFC) ಹಲವು ಬೃಹತ್ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಅವುಗಳ ಕಾಮಗಾರಿಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಟಿ. ಭೂಬಾಲನ್, ಮುಖ್ಯ ಇಂಜಿನಿಯರ್‌ಗಳಾದ ಜೆ.ಆರ್. ನಂದೀಶ್, ಕೆ.ಪಿ. ಜಯರಾಮ್, ಅಧೀಕ್ಷಕ ಇಂಜಿನಿಯರ್ ಪದ್ಮನಾಭನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: CM DK Shivakumarcongress karnatakaDr Yathindra SiddaramaiahKarnataka GovernmentKUIDFCPratidhvaniReview Meeting
Previous Post

ರಾಜಕೀಯಕ್ಕಿಂತ ಮಾನವೀಯತೆ ದೊಡ್ಡದು: ವಿದ್ಯಾರ್ಥಿಗಳ ಹೋರಾಟದ ಪರ ಧ್ವನಿ ಎತ್ತಿದ ಯುವ

Next Post

ಕರ್ನಾಟಕದ ರೈತರಿಗೆ ಸಿಹಿಸುದ್ದಿ: ‘ಕುಸುಮ್-ಸಿ’ ಯೋಜನೆಗೆ ವೇಗ

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post
ಕರ್ನಾಟಕದ ರೈತರಿಗೆ ಸಿಹಿಸುದ್ದಿ: ‘ಕುಸುಮ್-ಸಿ’ ಯೋಜನೆಗೆ ವೇಗ

ಕರ್ನಾಟಕದ ರೈತರಿಗೆ ಸಿಹಿಸುದ್ದಿ: ‘ಕುಸುಮ್-ಸಿ’ ಯೋಜನೆಗೆ ವೇಗ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada