ಬೆಳಗಾವಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಇಂದು ನಡೆಯುವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

RCB ದುರಂತದ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಕ್ರಿಕೆಟ್ ಪಂದ್ಯಾವಳಿಗಳು ನಡೆದಿಲ್ಲ. ಈ ಬಗ್ಗೆ ಅನೇಕರು ಮ್ಯಾಚ್ ಪುನಾರಂಭ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದರು. ನಿನ್ನೆ KSCA ಅಧ್ಯಕ್ಷ ವೆಂಕಟೇಶ ಪ್ರಸಾದ್ ಕೂಡ ಡಿಸಿಎಂ ಭೇಟಿ ನೀಡಿ ಚರ್ಚೆ ನಡೆಸಿದ್ದರು.

ಈ ವೇಳೆ ಕ್ರಿಕೆಟ್ ಪಂದ್ಯಗಳನ್ನು ನಿಲ್ಲಿಸಬೇಕು ಎಂಬ ಉದ್ದೇಶ ನಮಗಿಲ್ಲ. ಕ್ರಿಕೆಟ್ ಪ್ರೇಮಿಗಳ ಭಾವನೆಗಳಿಗೆ ಸ್ಪಂದಿಸುತ್ತೇವೆ. ಜನಜಂಗುಳಿ ನಿಯಂತ್ರಣ ಕ್ರಮಗಳ ಬಗ್ಗೆ ಯೋಚಿಸಬೇಕಿದೆ. ಜೊತೆಗೆ ಮೈಕಲ್ ಡಿ ಕುನ್ಹಾ ಸಮಿತಿ ನೀಡಿದ ಸಲಹೆಗಳನ್ನು ಹಂತಹಂತವಾಗಿ ಪಾಲಿಸುವ ಆಲೋಚನೆಯಿದೆ ಎಂದು ತಿಳಿಸಿದ್ದರು.

ಅಲ್ಲದೇ ಐಪಿಎಲ್ ಸೇರಿ ಯಾವ ಕ್ರಿಕೆಟ್ ಪಂದ್ಯವನ್ನೂ ಬೆಂಗಳೂರಿನಿಂದ ಹೊರಹೋಗಲು ಬಿಡುವುದಿಲ್ಲ. ಒಗ್ಗೂಡಿ ಕೆಲಸ ಮಾಡೋಣ ಎಂದು ವೆಂಕಟೇಶ್ ಪ್ರಸಾದ್ ಅವರಿಗೆ ತಿಳಿಸಿದ್ದರು. ಇನ್ನು ಹೊಸ ಕ್ರೀಡಾಂಗಣಗಳನ್ನು ನಿರ್ಮಿಸುವ ಉದ್ದೇಶವೂ ಸರ್ಕಾರದ ಮುಂದಿದ ಎಂದು ಹೇಳಿದ್ದ ಡಿ.ಕೆ ಶಿವಕುಮಾರ್, ಈ ಎಲ್ಲದರ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ತಿಳಿಸಿದ್ದರು. ಹೀಗಾಗಿ ಇಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಯಾವ ತೀರ್ಮಾನ ಹೊರಬೀಳುತ್ತೆ ಕಾದು ನೋಡಬೇಕಿದೆ.













