ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಚೇತೇಶ್ವರ ಪೂಜಾರ ಅವರ ಬಾವ ಜೀತ್ ಪಬಾರಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಹೊರಬಿದ್ದಿದೆ.

ಮಾಜಿ ಗೆಳತಿ ದೂರಿನ ಮೇರೆಗೆ ಅತ್ಯಾಚಾರದ ಆರೋಪ ಎದುರಿಸುತ್ತಿದ್ದ ಜೀತ್ ಪಬಾರಿ ರಾಜ್ಕೋಟ್ನಲ್ಲಿರುವ ತಮ್ಮ ನಿವಾಸದಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಭಾರತ ಮತ್ತು ಸೌತ್ ಆಫ್ರಿಕಾ ನಡುವಿನ ಪಂದ್ಯದ ಕಾಮೆಂಟ್ರಿ ಮಾಡುತ್ತಿದ್ದ ಚೇತೇಶ್ವರ ಪೂಜಾರ ತಕ್ಷಣವೇ ಬಾವನ ನಿವಾಸಕ್ಕೆ ವಾಪಸ್ ಆಗಿದ್ದಾರೆ.

ಜೀತ್ ಪಬಾರಿ ಮೇಲಿನ ಆರೋಪವೇನು..?

ಜೀತ್ ಪಬಾರಿ ಮೊದಲು ನಿಶ್ಚಿತಾರ್ಥ ಮಾಡಿಕೊಂಡಿದ್ದ ಮಹಿಳೆ, ಜೀತ್ ನನ್ನ ಮೇಲೆ ಅತ್ಯಾಚಾರ ಎಸೆಗಿದ್ದಾರೆ ಎಂದು ಆರೋಪಿಸಿದ್ದರು. ನನ್ನೊಂದಿಗೆ ಸಂಬಂಧದಲ್ಲಿ ಜೀತ್ ಏಕಾಏಕಿ ಬೇರೆ ಮದುವೆಯಾದರು ಎಂದು ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ದಾಖಲಾದ ಬಳಿಕ ಜೀತ್ ಪಬಾರಿ ಖಿನ್ನತೆಗೆ ಜಾರಿದ್ದರು ಎನ್ನಲಾಗಿದೆ.












