• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದ್ರಾವಿಡ್ ಸೇರಿದಂತೆ ಮೂವರಿಗೆ ಬಿಸಿಸಿಐ ಜೀವಮಾನ ಸಾಧನೆಯ ಪ್ರಶಸ್ತಿ ಗರಿ..

ಇಬ್ಬರು ಕನ್ನಡಿಗರಿಗೆ ಬಿಸಿಸಿಐ ವಿಶೇಷ ಗೌರವ, ಕ್ರಿಕೆಟ್‌ ಅಭಿಮಾನಿಗಳಲ್ಲಿ ಮನೆ ಮಾಡಿದ ಸಂಭ್ರಮ..

ಪ್ರತಿಧ್ವನಿ by ಪ್ರತಿಧ್ವನಿ
March 14, 2026
in Top Story, ಕರ್ನಾಟಕ, ಕ್ರೀಡೆ, ದೇಶ, ರಾಜಕೀಯ, ವಿಶೇಷ
0
ದ್ರಾವಿಡ್ ಸೇರಿದಂತೆ ಮೂವರಿಗೆ ಬಿಸಿಸಿಐ ಜೀವಮಾನ ಸಾಧನೆಯ ಪ್ರಶಸ್ತಿ ಗರಿ..
Share on WhatsAppShare on FacebookShare on Telegram
ಬೆಂಗಳೂರು : ಭಾರತೀಯ ಕ್ರಿಕೆಟ್‌ ರಂಗದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿ ಸಾಧನೆ ಮಾಡಿದವರನ್ನು ಗುರುತಿಸಿ ಬಿಸಿಸಿಐ ಗೌರವಿಸಲು ಸಜ್ಜಾಗಿದೆ.

Podcast with farmer Kurubur Shanthakumar :ರಾಜ್ಯದಲ್ಲಿ ರೈತರ ಮೇಲೆ ಲಾಠಿ ಚಾರ್ಜ್ ಕೇಂದ್ರದಲ್ಲಿ ರೈತರನ್ನ ಸಾ*.!

ಸಂಸ್ಥೆಯು ಕೊಡಮಾಡುವ ಅತ್ಯುನ್ನತ ಗೌರವವಾದ ಕರ್ನಲ್ ಸಿಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾನುವಾರ ನಡೆಯಲಿರುವ ನಮನ್ ಪ್ರಶಸ್ತಿ ಸಮಾರಂಭದಲ್ಲಿ ಕ್ರಿಕೆಟ್‌ ರಂಗದಲ್ಲಿ ಸಾಧನೆ ಮಾಡಿದ ರೋಜರ್ ಬಿನ್ನಿ, ರಾಹುಲ್ ದ್ರಾವಿಡ್ ಮತ್ತು ಮಿಥಾಲಿ ರಾಜ್ ಅವರಿಗೆ ನೀಡಿ ಗೌರವಿಸಲು ಬಿಸಿಸಿಐ ಸಿದ್ಧತೆ ಮಾಡಿಕೊಂಡಿದೆ.

ADVERTISEMENT
27 ಟೆಸ್ಟ್ ಮತ್ತು 72 ಏಕದಿನ ಪಂದ್ಯಗಳಲ್ಲಿ ತಮ್ಮ ಪ್ರತಿಭೆಯನ್ನು ತೋರಿರುವ ರೋಜರ್ ಬಿನ್ನಿ, 1983 ರಲ್ಲಿ ಭಾರತ ವಿಶ್ವಕಪ್ ಗೆದ್ದ ತಂಡದ ಭಾಗವಾಗಿದ್ದರು. ಭಾರತೀಯ ಕ್ರಿಕೆಟ್‌ನ ಭವಿಷ್ಯವನ್ನು ರೂಪಿಸಿದ್ಧ ಆ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಬಿನ್ನಿ ಹೊರಹೊಮ್ಮಿದ್ದರು.

ಇದನ್ನೂ ಓದಿ : ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಗುಡ್​​ನ್ಯೂಸ್: ಹೊಸ ಸ್ಲಿಪರ್ ಕೋಚ್ ಬಸ್ ಗಳ ಆಗಮನ: ವೈಶಿಷ್ಟ್ಯವೇನು ?

1985 ರಲ್ಲಿ ವಿಶ್ವ ಕ್ರಿಕೆಟ್ ಚಾಂಪಿಯನ್‌ಶಿಪ್ ಗೆದ್ದ ಭಾರತ ಕ್ರಿಕೆಟ್ ತಂಡದಲ್ಲಿ ಗುರುತಿಸಿಕೊಂಡಿದ್ದರು.  ಬಳಿಕ 2000ನೇ ಇಸವಿಯಲ್ಲಿ ವಿಶ್ವಕಪ್ ಗೆದ್ದ ಭಾರತದ ಅಂಡರ್ -19 ತಂಡದ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದರು. ನಂತರ ರಾಷ್ಟ್ರೀಯ ಪುರುಷರ ತಂಡದ ಆಯ್ಕೆದಾರರಾಗಿಯೂ ಬಿನ್ನಿ ಕೆಲಸ ನಿರ್ವಹಿಸಿದ್ದರು. ಅಲ್ಲದೆ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI)ನ ಅಧ್ಯಕ್ಷರಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು.

ಇನ್ನೂ ರಾಹುಲ್ ದ್ರಾವಿಡ್ 509 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಆಡಿದ್ದು, 24,000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. 400 ಕ್ಕೂ ಹೆಚ್ಚು ಕ್ಯಾಚ್‌ಗಳ ಕೀರ್ತಿಗೆ ಭಾಜನರಾಗಿದ್ದಾರೆ. ಕಳೆದ 2007 ರಲ್ಲಿ ಇಂಗ್ಲೆಂಡ್‌ನಲ್ಲಿ ಭಾರತವು ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿಗೆ ನಾಯಕತ್ವ ವಹಿಸಿದ್ದರು. ಬಳಿಕ ಪುರುಷರ ಅಂಡರ್-19 ತಂಡ, ಭಾರತ ಎ ಹಾಗೂ 2024 ರ ಟಿ20 ವಿಶ್ವಕಪ್ ಗೆದ್ದ ರಾಷ್ಟ್ರೀಯ ಪುರುಷರ ತಂಡದ ತರಬೇತುದಾರರಾಗಿಯೂ ದ್ರಾವಿಡ್‌ ಕಾರ್ಯ ನಿರ್ವಹಿಸಿದ್ದರು.

ಇನ್ನೊಬ್ಬ ಮಹಿಳಾ ಆಟಗಾರ್ತಿ ಮಿಥಾಲಿ ರಾಜ್ ಭಾರತ ಪರ ಎಲ್ಲಾ ರೀತಿಯ ಸರಣಿಗಳೂ ಸೇರಿ 333 ಪಂದ್ಯಗಳಲ್ಲಿ ತಮ್ಮ ಪ್ರದರ್ಶನ ನೀಡಿದ್ದಾರೆ. 10,000 ಕ್ಕೂ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಮಹಿಳಾ ಕ್ರಿಕೆಟ್‌ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರ ನಾಯಕತ್ವದಲ್ಲಿ ಭಾರತ ಎರಡು ವಿಶ್ವಕಪ್ ಫೈನಲ್ ತಲುಪಿತ್ತು ಎನ್ನುವುದು ಗಮನಾರ್ಹ ಸಂಗತಿ.
ಹೀಗಾಗಿ ಕ್ರಿಕೆಟ್‌ ಕ್ಷೇತ್ರದಲ್ಲಿ ಈ ಎಲ್ಲ ಆಟಗಾರರು ಮಾಡಿರುವ ಅಭೂತಪೂರ್ವ ಹಾಗೂ ಅವಿಸ್ಮರಣೀಯ ಸಾಧನೆಯನ್ನು ಪರಿಗಣಿಸಿ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ ನೀಡುವುದಾಗಿ ಘೋಷಿಸಿದೆ. ಇದರಲ್ಲಿ ರೋಜರ್‌ ಬಿನ್ನಿ ಹಾಗೂ ರಾಹುಲ್‌ ದ್ರಾವಿಡ್‌ ಇಬ್ಬರೂ ಕರ್ನಾಟಕವರಾಗಿದ್ದು ವಿಶೇಷ.
Tags: BattingBCCIBowlingCricket NewsInternational Matchjay shahkannada newskarnataka newsLife Time Acheivement AwardMithali RajPratidhvaniRahul DravidRoger Binnysports newstest cricketUnder 19 MatchWorld Cup Match
Previous Post

“ಬಾಗಲಕೋಟೆಯಲ್ಲಿ ಮೇಟಿ ಕನಸನ್ನು ನನಸು ಮಾಡಿದ್ದೇನೆ : ಉಪಚುನಾವಣೆಗೆ ಸಿದ್ಧವಾಗಿದ್ದೇವೆ”

Next Post

ಟೆನಿಸ್ ಆಟಗಾರ್ತಿ ಶಿಲ್ಪಾರಂತೆ ಮಂಡ್ಯ ನೆಲದಿಂದ ಇನ್ನಷ್ಟು ಪ್ರತಿಭೆಗಳು ಹೊರಬರಲಿ : ಮನ್ಸುಖ್‌ ಮಾಂಡವೀಯ ಕರೆ..

Related Posts

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ
ರಾಜಕೀಯ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

by ಪ್ರತಿಧ್ವನಿ
May 25, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದೆಹಲಿ ಬುಲಾವ್ ಬಂದಿರುವ ವಿಚಾರಕ್ಕೆ ಇದೀಗ ಸ್ವತಃ ಸಿಎಂ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನನಗೆ ದೆಹಲಿಗೆ ಬರಲು...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
Next Post
ಟೆನಿಸ್ ಆಟಗಾರ್ತಿ ಶಿಲ್ಪಾರಂತೆ ಮಂಡ್ಯ ನೆಲದಿಂದ ಇನ್ನಷ್ಟು ಪ್ರತಿಭೆಗಳು ಹೊರಬರಲಿ : ಮನ್ಸುಖ್‌ ಮಾಂಡವೀಯ ಕರೆ..

ಟೆನಿಸ್ ಆಟಗಾರ್ತಿ ಶಿಲ್ಪಾರಂತೆ ಮಂಡ್ಯ ನೆಲದಿಂದ ಇನ್ನಷ್ಟು ಪ್ರತಿಭೆಗಳು ಹೊರಬರಲಿ : ಮನ್ಸುಖ್‌ ಮಾಂಡವೀಯ ಕರೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada