ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ, ಸಾವಿರಾರು ಪೆನ್ ಡ್ರೈವ್ ಗಳನ್ನ (PENDRIVE) ಹಾಸನದಾದ್ಯಂತ ಹಂಚಿಕೆ ಮಾಡಿದ ಕೇಸ್ ನಲ್ಲಿ ಈಗಾಗಲೇ ಮಾಜಿ ಶಾಸಕ ಪ್ರೀತಂ ಗೌಡ (Preetham gowda) ವಿರುದ್ಧ ಕ್ರಿಮಿನಲ್ ಮೊಕದ್ದಮೆಯಲ್ಲಿ ಕೇಸ್ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದ್ದು, ಈಗ ಸಂಕಷ್ಟ ಎದುರಾಗಿದೆ.
ಹಾಸನದ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ತಮ್ಮ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಮೊಕದಮ್ಮೆಯನ್ನು (Criminal case) ರದ್ದುಗೊಳಿಸಬೇಕು ಮತ್ತು ವಿಚಾರಣೆಗೂ ಬ್ರೇಕ್ ಹಾಕಬೇಕು ಎಂದು ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು.
ಆದ್ರೆ ವಿಶೇಷ ನ್ಯಾಯಾಲಯ ಮಾಜಿ ಶಾಸಕರ ಈ ಮನವಿಯನ್ನು ತಿರಸ್ಕರಿಸಿದ್ದು, ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಮುಂದುವರೆಸುವಂತೆ ಆದೇಶಿಸಿದೆ. ವಿಶೇಷ ನ್ಯಾಯಾಲಯದ ಈ ಆದೇಶದಿಂದ ಪ್ರೀತಂ ಗೌಡ ಗೆ ಶಾಕ್ ಎದುರಾಗಿದೆ.