ಕರ್ನಾಟಕದ ರಾಜ್ಯಪಾಲರ ನಡೆಗೆ ವಿರೋಧ ವ್ಯಕ್ತಪಡಿಸಿ ತೀವ್ರ ಟೀಕೆಗಳು ಕೇಳಿಬಂದಿವೆ. ರಾಜ್ಯಪಾಲರು ಸಂವಿಧಾನಾತ್ಮಕ ಮಿತಿಯೊಳಗೆ ಕಾರ್ಯನಿರ್ವಹಿಸಬೇಕು ಎಂಬ ಒತ್ತಾಯವೂ ವ್ಯಕ್ತವಾಗಿದೆ.ಕರ್ನಾಟಕದ ಮೊದಲ ರಾಜ್ಯಪಾಲರಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರು ಕನ್ನಡ ಸಂಸ್ಕೃತಿ, ಕಲೆ ಹಾಗೂ ಸಾಹಿತ್ಯದ ಪೋಷಕರಾಗಿ ಹೆಸರುವಾಸಿಯಾಗಿದ್ದರು. ನಂತರದ ಅವಧಿಯಲ್ಲಿ ಟಿ.ಎನ್. ಚತುರ್ವೇದಿ, ಖುರ್ಷಿದ್ ಆಲಂ ಖಾನ್ ಹಾಗೂ ವಿ.ಎಸ್. ರಾಮಾದೇವಿ ಅವರುಗಳು ರಾಜ್ಯದ ಅಸ್ಮಿತೆಯನ್ನು ಗೌರವಿಸಿ ಜನಮನ ಗೆದ್ದಿದ್ದರು ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ಇತ್ತೀಚಿನ ಅವಧಿಯಲ್ಲಿ ರಾಜ್ಯಪಾಲರ ನೇಮಕಾತಿ ರಾಜಕೀಯ ಪ್ರಭಾವದಿಂದ ನಡೆಯುತ್ತಿದೆ ಎಂಬ ಟೀಕೆಗಳು ಕೇಳಿಬಂದಿವೆ. ಹಿಂದೆ ರಾಜ್ಯಪಾಲರಾಗಿದ್ದ ವಜೂಭಾಯಿ ವಾಲಾ ಮತ್ತು ಪ್ರಸ್ತುತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರ ನಡೆ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ.ವಿಶೇಷವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆ ಗ್ರೇಡಿಂಗ್ ವ್ಯವಸ್ಥೆ ಕುರಿತು ರಾಜ್ಯಪಾಲರು ತಲೆಹಾಕಿರುವುದನ್ನು ಪ್ರಶ್ನಿಸಲಾಗಿದ್ದು, ಜನರಿಂದ ಆಯ್ಕೆಯಾದ ಸರ್ಕಾರದ ನೀತಿಗಳಲ್ಲಿ ಅನಗತ್ಯ ಹಸ್ತಕ್ಷೇಪ ಬೇಡ ಎಂಬ ಅಭಿಪ್ರಾಯ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲರು ತಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕು, ಇಲ್ಲವಾದರೆ ರಾಜೀನಾಮೆ ನೀಡಬೇಕು ಅಥವಾ ಕೇಂದ್ರ ಸರ್ಕಾರ ಅವರನ್ನು ಹಿಂಪಡೆಯಬೇಕು ಎಂಬ ಒತ್ತಾಯ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರಿಂದ ಕೇಳಿಬಂದಿದೆ.ಈ ಹಿನ್ನೆಲೆಯಲ್ಲಿ ಕನ್ನಡದ ಅಸ್ಮಿತೆ ಹಾಗೂ ರಾಜ್ಯ ಹಿತಾಸಕ್ತಿಗಳ ರಕ್ಷಣೆ ಕುರಿತು ಮತ್ತೆ ಚರ್ಚೆ ಜೋರಾಗಿದೆ.






