• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಕಾಂಗ್ರೆಸ್‌ ಸರ್ಕಾರ ಆಡಳಿತದ ನೂರು ದಿನ ಪೂರ್ಣ | ಟೀಕೆ

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in ಇದೀಗ, ಕರ್ನಾಟಕ, ರಾಜಕೀಯ
0
ಕಾಂಗ್ರೆಸ್‌ ಸರ್ಕಾರ
Share on WhatsAppShare on FacebookShare on Telegram

ಸಂಪೂರ್ಣ ಬಹುಮತದೊಂದಿಗೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ ನೂರು ದಿನಗಳ ಆಡಳಿತ ಅವಧಿ ಪೂರ್ಣಗೊಳಿಸಿದೆ. ಆದರೆ ಕಾಂಗ್ರೆಸ್‌ ಆಡಳಿದ ಬಗ್ಗೆ ಟೀಕೆ ವ್ಯಕ್ತವಾಗಿದೆ.

ADVERTISEMENT

ರಾಜ್ಯದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರೆಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದೆ ಪ್ರತಿಪಕ್ಷಗಳು ಟೀಕಿಸಿವೆ ಎಂದು ವರದಿಯಾಗಿದೆ.

ಕಾಂಗ್ರೆಸ್ ಸರ್ಕಾರ ವರ್ಗಾವಣೆಯನ್ನು ಒಂದು ಕಮಿಷನ್ ದಂಧೆಯಾಗಿ ಮಾಡಿ, ವಿಧಾನಸೌಧದ ಮೂಲೆ ಮೂಲೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗುತ್ತಿಗೆದಾರರ ಬಿಲ್ ಬಾಕಿ ಇಟ್ಟುಕೊಂಡು ಕಮಿಷನ್ ದಂಧೆಗೆ ಮುಂದಾಗಿದೆ.

ರೈತರು ಬರಗಾಲದ ಬವಣೆಯಲ್ಲಿ ಸಿಕ್ಕರೂ ಕೂಡ ಸರ್ಕಾರ ಆ ಕಡೆ ತಿರುಗಿ ನೋಡಿಲ್ಲ. ರೈತರ ಆತ್ಮಹತ್ಯೆ ಮತ್ತೆ ಪ್ರಾರಂಭವಾಗಿದೆ. ಕೃಷಿ ಉತ್ಪಾದನೆಗೆ ಪೆಟ್ಟು ಬೀಳುವ ಎಲ್ಲ ಲಕ್ಷಣ ಕಾಣುತ್ತಿದೆ. ಪೂರ್ಣ ಪ್ರಮಾಣದ ಗ್ಯಾರೆಂಟಿ ಅನುಷ್ಠಾನ ಗೊಳಿಸಲು ರಾಜ್ಯ ಸರ್ಕಾರ ವಿಫಲವಾಗಿದೆ.

ಒಂದು ಕಡೆ ವಿದ್ಯುತ್ ದರ ಹೆಚ್ಚಿಸಿ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಸಾರಿಗೆ ಸಿಬ್ಬಂದಿಗೆ ಸಮರ್ಪಕವಾದ ಸಂಬಳ ನೀಡಿಲ್ಲ. 10 ಕೆಜಿ ಅಕ್ಕಿ ಗ್ಯಾರೆಂಟಿಯನ್ನು ಈಡೇರಿಸಲಾಗಿಲ್ಲ. ಕೇಂದ್ರದ ಐದು ಕೆಜಿ ಅಕ್ಕಿಯೇ ಜನರ ಸಹಾಯಕ್ಕೆ ಬಂದಿದೆ. ರಾಜ್ಯದಲ್ಲಿ ಗೃಹಲಕ್ಷ್ಮೀಯರ ಹುಡುಕಾಟ ಪೂರ್ಣಗೊಂಡಿಲ್ಲ.

ಈ ಮಧ್ಯ ಗ್ಯಾರೆಂಟಿಗಾಗಿ ಎಸ್ಸಿ ಎಸ್ಟಿ ಅಭಿವೃದ್ಧಿ ಹಣ 11 ಸಾವಿರ ಕೋಟಿ ರೂಪಾಯಿ ಬಳಕೆ ಮಾಡಿ ಎಸ್ಸಿ ಎಸ್ಟಿ ಮತ್ತು ಒಬಿಸಿ ಜನರಿಗೆ ಸರ್ಕಾರ ಮೋಸ ಮಾಡಿದೆ.

ಕಾವೇರಿ ಜಲಾನಯನ ಪ್ರದೇಶದ ರೈತರ ಮತ್ತು ಸಾರ್ವಜನಿಕರ ಹಿತ ಕಾಯಲು ವಿಫಲವಾಗಿದೆ. ನಮ್ಮ ಡ್ಯಾಮುಗಳ ಕೀಲಿಕೈಯನ್ನು ತಮಿಳುನಾಡಿಗೆ ಒಪ್ಪಿಸಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಪೈಪೋಟಿ ಆಡಳಿತದ ವ್ಯವಸ್ಥೆ ಮೇಲೆ ದುಷ್ಪರಿಣಾಮ ಬೀರಿದೆ. ಇದರಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ವಾಗಿ ಹದಗೆಟ್ಟಿದೆ ಕೊಲೆ ಸುಲಿಗೆ ಸಾಮಾನ್ಯವಾಗಿದೆ.

ಕಾಂಗ್ರೆಸ್ ಸರ್ಕಾರ ನೂರು ದಿನಗಳಲ್ಲಿ ಜನರ ವಿಶ್ವಾಸ ಗಳಿಸುವುದು ದೂರದ ಮಾತು ಅವರ ಶಾಸಕರ ವಿಶ್ವಾಸವನ್ನೇ ಕಳೆದುಕೊಂಡಿದೆ. ಎಲ್ಲ ರಂಗದಲ್ಲಿ ವೈಫಲ್ಯವೇ ಇವರ ಸಾಧನೆ.

ಸರ್ಕಾರದ ವಿರುದ್ದ ಜನ ಸಾಮಾನ್ಯರು, ಮಾಧ್ಯಮದವರು, ಸಂಘ ಸಂಸ್ಥೆಗಳು ಧ್ವನಿ ಎತ್ರುವುದನ್ನು ಪೊಲೀಸ್ ಇಲಾಖೆ ಮೂಲಕ ಹತ್ತಿಕ್ಕುವ ಪ್ರಯತ್ನ. ಇದು ಪ್ರಜಾಪ್ರಭುತ್ವ ವಿರೊಧಿ, ಸಂವಿಧಾನ ವಿರೋಧಿ ಹಾಗೂ ಸರ್ವಾಧಿಕಾರಿ ಆಡಳಿತವೆಂದು ನೂರು ದಿನಗಳಲ್ಲಿ ತೋರಿಸಿಕೊಟ್ಟಿದೆ ಎಂದು ಪ್ರತಿಪಕ್ಷಗಳು ಕುಹಕವಾಡಿವೆ.

Tags: Congress GovernmentGarentee SchemesKarnataka Congressಕರ್ನಾಟಕ ಕಾಂಗ್ರೆಸ್‌ಕಾಂಗ್ರೆಸ್‌ ಸರ್ಕಾರಗ್ಯಾರಂಟಿ ಯೋಜನೆಗಳು
Previous Post

ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಆಗಸ್ಟ್‌ 30ಕ್ಕೆ ಅನುಷ್ಠಾನ: ಸಿಎಂ ಸಿದ್ದರಾಮಯ್ಯ

Next Post

ರೋಜ್‌ಗಾರ್‌ ಮೇಳದಲ್ಲಿ 51 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಿ ಮೋದಿ

Related Posts

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?
ರಾಜಕೀಯ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಎರಡು ವರ್ಷಗಳ...

Read moreDetails
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಪ್ರಧಾನಿ ಮೋದಿ

ರೋಜ್‌ಗಾರ್‌ ಮೇಳದಲ್ಲಿ 51 ಸಾವಿರ ಮಂದಿಗೆ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಿ ಮೋದಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada