ಮೈಸೂರು : ಆಷಾಢ ಮಾಸ ಆರಂಭ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಜನಸಂದಣಿ ಜೋರಾಗಿದೆ. ನಾಡದೇವತೆ ಚಾಮುಂಡೇಶ್ವರಿಯ ದರ್ಶನಕ್ಕೆ ಭಕ್ತಾದಿಗಳು ಹಾಗೂ ಪ್ರವಾಸಿಗರು ಮುಗಿಬಿದ್ದಿದ್ದಾರೆ. ಭಕ್ತರು ಹಾಗೂ ಪ್ರವಾಸಿಗರಿಂದ ಮೈಸೂರು ಚಾಮುಂಡೇಶ್ವರಿ ದೇಗುಲ ತುಂಬಿ ತುಳುಕುತ್ತಿದೆ.
![](https://pratidhvani.com/wp-content/uploads/2023/06/10-chamundi-hills-big3.jpg)
100 ರೂಪಾಯಿ ಟಿಕೆಟ್ ಪಡೆದು ನಿಲ್ಲುವ ವಿಶೇಷ ದರ್ಶನ ಹಾಗೂ ಧರ್ಮ ದರ್ಶನ ಎರಡೂ ವಿಭಾಗದಲ್ಲಿಯೂ ನೂಕು ನುಗ್ಗಲು ಜೋರಾಗಿದೆ, ಮುಂಜಾನೆಯಿಂದಲೇ ಭಕ್ತಾದಿಗಳು ದೇಗುಲದ ಆವರಣದಲ್ಲಿ ಜಮಾಯಿಸಿದ್ದಾರೆ.
ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೂ ಉಚಿತ ಬಸ್ ಪ್ರಯಾಣ ಇರೋದ್ರಿಂದ ಭಕ್ತಾದಿಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಸರ್ಕಾರಿ ಬಸ್ಗಳಲ್ಲಿ ಮೈಸೂರಿಗೆ ಆಗಮಿಸಿದ ಮಹಿಳೆಯರು ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆಯಲು ಮುಗಿಬಿದ್ದಿದ್ದಾರೆ.