• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, November 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಆರ್‌ಪಿಎಫ್‌ ಪರೀಕ್ಷೆ ; ಕನ್ನಡ ನಿರ್ಲಕ್ಷ್ಯಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ : ಮರು ಪರೀಕ್ಷೆ ನಡೆಸುವಂತೆ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
April 10, 2023
in Top Story, ಕರ್ನಾಟಕ, ದೇಶ, ರಾಜಕೀಯ
0
ಸಿಆರ್‌ಪಿಎಫ್‌ ಪರೀಕ್ಷೆ ; ಕನ್ನಡ ನಿರ್ಲಕ್ಷ್ಯಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ : ಮರು ಪರೀಕ್ಷೆ ನಡೆಸುವಂತೆ ಆಗ್ರಹ
Share on WhatsAppShare on FacebookShare on Telegram

ADVERTISEMENT

ಬೆಂಗಳೂರು: ಏ.೧೦: ಕೇಂದ್ರ ಮೀಸಲು ಪಡೆ (ಸಿಆರ್‌ಪಿಎಫ್‌) ನೇಮಕಾತಿಗೆ ನಡೆಸಲಾದ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸದಿರುವ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಕೇಂದ್ರ ಬಿಜೆಪಿ ಸರಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ. ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್‌ಪಿಎಫ್‌) ನೇಮಕಾತಿಗೆ ನಡೆಸಿದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ಇದು ಖಂಡನೀಯ ಎಂದು ಹೇಳಿದ್ದಾರೆ. ಒಟ್ಟು 9212 ಹುದ್ದೆಗಳಿಗೆ ನಡೆದ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಕರ್ನಾಟಕದ 466 ಹುದ್ದೆಗಳೂ ಸೇರಿವೆ. ದುರಂತ ಎಂದರೆ, ಇಷ್ಟು ಹುದ್ದೆಗಳನ್ನು ಬಯಸುವ ಅಭ್ಯರ್ಥಿಗಳು ಹಿಂದಿ, ಇಂಗ್ಲಿಷ್ ನಲ್ಲಿ ಪರೀಕ್ಷೆ ಬರೆದಿದ್ದಾರೆ, ಬರೆಯುವ ಅನಿವಾರ್ಯ ಸೃಷ್ಟಿಸಲಾಗಿದೆ. ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯುವುದು ನಿರಾಕರಿಸುವುದು ಎಂದರೆ ಸಂವಿಧಾನಕ್ಕೆ ಎಸಗಿದ ಅಪಚಾರ ಎಂದು ಅವರು ಕಿಡಿಕಾರಿದ್ದಾರೆ.

ಇಂದು ಕರ್ನಾಟಕ; ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಆಚೆ ನಾಡಿದ್ದು ಕೇರಳ!! ಬಿಜೆಪಿಯ ಸುಪಾರಿ ಆಟ ಶುರುವಾಗಿದೆ!!! 13/13#ಬಿಜೆಪಿಯ_ವರಸೆ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 10, 2023

ಕೇಂದ್ರ ಸರಕಾರ ತನ್ನ ಸುಪರ್ದಿಯಲ್ಲಿ ನಡೆಸುವ ಎಲ್ಲ ನೇಮಕಾತಿ ಪರೀಕ್ಷೆಗಳನ್ನು ಹಿಂದಿ, ಇಂಗ್ಲಿಷ್ ನಲ್ಲೇ ನಡೆಸುತ್ತಿದೆ. ಕೇವಲ ಹಿಂದಿ ಕೇಂದ್ರಿತ ನೇಮಕಾತಿ ಪ್ರಕ್ರಿಯೆ ಇತರೆ ಭಾಷಿಕರನ್ನು ಉದ್ಯೋಗ ವಂಚಿತರನ್ನಾಗಿಸುವುದು ಮಾತ್ರವಲ್ಲ, ಅನ್ಯ ಭಾಷೆಗಳನ್ನು ಹತ್ತಿಕ್ಕಿ ಹಿಂದಿ ಹೇರಿಕೆ ಮಾಡುವುದಷ್ಟೇ ದುರುದ್ದೇಶವಿರುವುದು ಸ್ಪಷ್ಟ ಎಂದು ಅವರು ಹೇಳಿದ್ದಾರೆ. ಅಷ್ಟೇ ಅಲ್ಲ, ಈ ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳನ್ನು ಹಿಂದಿ ಭಾಷೆಗೆ ಸಂಬಂಧಿಸಿದವು. ಅಲ್ಲಿಗೆ ಸ್ಪಷ್ಟ; ಹಿಂದಿಯೇತರ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಆಯ್ಕೆ ಆಗಬಾರದು ಹಾಗೂ ಉದ್ದೇಶಪೂರ್ವಕವಾಗಿಯೇ ಹೀಗೆ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಇದು ಕೇಂದ್ರವೇ ಕೊಟ್ಟ ಮಾರಣಾಂತಿಕ ಪೆಟ್ಟು ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಅನ್ಯ ಭಾಷೆಯಲ್ಲಿ ಪರೀಕ್ಷೆ ಬರೆಯಬೇಕಾದ ಕರ್ಮ ದಕ್ಷಿಣ ಭಾರತ ರಾಜ್ಯಗಳ ಜನರದ್ದು. ಕನ್ನಡಿಗರೂ ಸೇರಿ ದಕ್ಷಿಣದ ಎಲ್ಲ ಭಾಷಿಕರು ಈ ಬಗ್ಗೆ ವಿರೋಧ ಮಾಡುತ್ತಲೇ ಇದ್ದರೂ ಕೇಂದ್ರ ಸರಕಾರ ಹಿಂದಿ ಹೇರಿಕೆಯನ್ನು ಮುಂದುವರಿಸಿದೆ ಎಂದು ಅವರು ಕಿಡಿ ಕಾರಿದ್ದಾರೆ. ಮುಲಾಜಿಲ್ಲದೆ ಸಿಆರ್ ಪಿಎಫ್ ಮರು ಪರೀಕ್ಷೆ ನಡೆಸಬೇಕು ಹಾಗೂ ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳಲ್ಲೂ ಬರೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಇಲ್ಲವಾದರೆ, ಈ ತಾರತಮ್ಯ ಹಾಗೂ ಹಿಂದಿ ಹೇರಿಕೆ ಇನ್ನೊಂದು ದೊಡ್ಡ ಹೋರಾಟಕ್ಕೆ ನಾಂದಿ ಆದೀತು ಎಂದು ಮಾಜಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.

Tags: 2023 electionassembly electionBJPBJP GovernmentBJP PartyBjpKaranatakabjpkarnatakaBOMMAIbsbommaiBSYCentral Reserve ForceChief Minister H.D.KumaraswamyCMcmbommaiCmIbrahimCRPFctraviDKShivakumarElection CommissionHDDHDKJDSJDS KarnatakaKannadaKarnataka ElectionkumaraswamyNalin Kumar KateelNewsPratidhvanisiddaramaiahState Electionಎಚ್ ಡಿ ಕುಮಾರಸ್ವಾಮಿ
Previous Post

ನಾಳೆ ಅಥವಾ ನಾಡಿದ್ದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿಎಂ ಬೊಮ್ಮಾಯಿ ಘೋಷಣೆ

Next Post

PRATAP SIMHA | BJP | ಸಿದ್ದರಾಮಯ್ಯ ಅವರೇ ಈ ಭಯ ನಿಮ್ಮ ಎದೆಯಲ್ಲಿ ಇರಬೇಕು. #PRATIDHVANI

Related Posts

Energy Conservation Awareness: KREDL Observes ‘BRICS Sustainable Lifestyle Week–2026
Top Story

ಇಂಧನ ಸಂರಕ್ಷಣೆ ಜಾಗೃತಿ: ಕ್ರೆಡಲ್‌ನಿಂದ ‘ಬ್ರಿಕ್ಸ್ ಸುಸ್ಥಿರ ಜೀವನಶೈಲಿ ಸಪ್ತಾಹ–2026’ ಆಚರಣೆ

by Shivakumar
November 8, 2026
0

ಬೆಂಗಳೂರು: ಬ್ರಿಕ್ಸ್ ಸುಸ್ಥಿರ ಜೀವನಶೈಲಿ ಸಪ್ತಾಹ–2026 (BRICS Sustainable Lifestyle Week-2026) ಅಂಗವಾಗಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (KREDL - KREDL) ಕಚೇರಿಯಲ್ಲಿ ಆಯೋಜಿಸಲಾಗಿದ್ದ...

Read moreDetails
Centre responsible for ethanol confusion: Minister M.B. Patil demands high-level probe

ಎಥೆನಾಲ್ ಗೊಂದಲಕ್ಕೆ ಕೇಂದ್ರವೇ ಹೊಣೆ: ಉನ್ನತ ಮಟ್ಟದ ತನಿಖೆಗೆ ಸಚಿವ ಎಂ.ಬಿ. ಪಾಟೀಲ ಆಗ್ರಹ

November 8, 2026
First PUC Annual Examination: Question papers to be prepared at the state level starting from 2027!

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ : 2027 ರಿಂದ ರಾಜ್ಯಮಟ್ಟದಲ್ಲೇ ಪ್ರಶ್ನೆಪತ್ರಿಕೆ ಸಿದ್ಧ!

November 8, 2026
Hassan DC Lata Kumari hits back at Kumaraswamy’s allegations

ಕುಮಾರಸ್ವಾಮಿ ಆರೋಪಕ್ಕೆ ಹಾಸನ ಡಿಸಿ ಲತಾಕುಮಾರಿ ತಿರುಗೇಟು : ಸುಳ್ಳು ಹಬ್ಬಿಸಿದರೆ ಕಠಿಣ ಕ್ರಮದ ಎಚ್ಚರಿಕೆ

November 8, 2026
SHOCKING: Thieves snatch gold earring from elderly woman sitting outside her home and flee; shocking video goes viral.

SHOCKING : ಮನೆಯ ಹೊರಗೆ ಕುಳಿತಿದ್ದ ವೃದ್ಧೆಯ ಚಿನ್ನದ ಓಲೆ ಕಿತ್ತು ಕಳ್ಳರು ಎಸ್ಕೇಪ್ : ಆಘಾತಕಾರಿ ವಿಡಿಯೋ ವೈರಲ್

November 8, 2026
Next Post
PRATAP SIMHA | BJP | ಸಿದ್ದರಾಮಯ್ಯ ಅವರೇ ಈ ಭಯ ನಿಮ್ಮ ಎದೆಯಲ್ಲಿ ಇರಬೇಕು. #PRATIDHVANI

PRATAP SIMHA | BJP | ಸಿದ್ದರಾಮಯ್ಯ ಅವರೇ ಈ ಭಯ ನಿಮ್ಮ ಎದೆಯಲ್ಲಿ ಇರಬೇಕು. #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada