ಬೀದರ್: ಕ್ರೂಸರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೀದರ್ ಜಿಲ್ಲೆಯ ಚಟ್ನಳ್ಳಿ ಎಂಬಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಪ್ರದೀಪ್ ಶಂಕರ್ ಕೋಲಿ (25), ವೀನೋದ್ ಕುಮಾರ್ ಪ್ರಭು (25) ಹಾಗೂ ವರ್ದಿಶ್ ಶರಣಪ್ಪ ಬೇಡರ್ (26) ಎಂದು ಗುರುತಿಸಲಾಗಿದೆ. ಮೃತರು ಬೀದರ್ (Bidar) ತಾಲೂಕಿನ ಯದಲಾಪೂರ್ ಗ್ರಾಮದವರು ಎಂದು ತಿಳಿದು ಬಂದಿದೆ.
ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ರಭಸಕ್ಕೆ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬ್ರೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನ್ನಳ್ಳಿ ಪೊಲೀಸ್ (Mannalli Police) ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.