ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ರಾಜ್ಯ ಸಮೃದ್ದವಾಗಿರುತ್ತದೆ ಇದಕ್ಕೆ ಉತ್ತಮ ಉದಾಹರಣೆ ಎಂದರೆ ರಾಜ್ಯಾದ್ಯಂತ ಉತ್ತಮ ಮಳೆಯಾಗಿರುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಬಣ್ಣಿಸಿದ್ದಾರೆ.
ಶನಿವಾರ ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಮಾತನಾಡಿದ ರವಿ ರಾಜ್ಯದಲ್ಲಿ ನಾವು ಅಧಿಕಾರಕ್ಕೆ ಬಂದಾಗಲೆಲ್ಲಾ ಕೆರೆಗಳೆಲ್ಲಾ ತುಂಬಿ ಕೋಡಿ ಬೀಳುತ್ತವೆ ಮತ್ತು ನಾವು ಬಾಗಿನವನ್ನ ಅರ್ಪಿಸುತ್ತೇವೆ. ಆದರೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಯಾವ ಕೆರೆಯೂ ತುಂಬಿ ಹರಿಯಲಿಲ್ಲ ಎಂದು ಟೀಕಿಸಿದ್ದಾರೆ.
2008-13ರ ಸಮಯದಲ್ಲಿ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಹಾಗೂ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ರಾಜ್ಯಾದ್ಯಂತ ಉತ್ತಮ ಮಳೆಯಾಗಿತ್ತು ಈಗ ನಮ್ಮ ಬಸಣ್ಣ ಮುಖ್ಯಮಂತ್ರಿಯಾಗಿದ್ದಾರೆ ಈಗಲೂ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ.
ಇದು ಬಿಜೆಪಿಯವರ ಕಾಲ್ಗುಣ ಕಾಂಗ್ರೆಸ್ನವರು ಕಾಲಿಟ್ಟ ಕಡೆಯಲೆಲ್ಲಾ ಕೆಟ್ಟದಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಬಣ್ಣಿಸಿದ್ದಾರೆ.