ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾಗೆ ಬರೆದಿದ್ದ ಅರ್ಜಿಯಲ್ಲಿ ವೈಟ್‌ನಾರ್ ಹಾಕಿದ್ದಾರೆ. ದಾಖಲೆ ತಿದ್ದಲಾಗಿದೆ ಎಂದು ಕೇಂದ್ರ ಸಚಿವ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ರು. ಕುಮಾರಸ್ವಾಮಿ ಮಾತಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೂಡ ದಾಖಲಾತಿಗೆ ವೈಟ್ನರ್ ಹಾಕಿ ಕೆಲವು ವಿಚಾರಗಳನ್ನು ಮರೆ ಮಾಚಿದ್ದಾರೆ ಅಂತ ಆರೋಪದ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದಾರೆ. ವೈಟ್ನರ್ ಹಿಂದಿನ ಅಕ್ಷರಗಳ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ವೈಟ್ನರ್ ಹಿಂದಿರುವ ಅಕ್ಷರಗಳು ಬಹಿರಂಗಪಡಿಸಿದ್ದಾರೆ.
ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ನೋಡಿ. ನನ್ನ ಪತ್ನಿ ಬದಲಿ ಭೂಮಿ ಕೇಳಿದ್ದು ತನ್ನದೇ ಜಮೀನನ್ನು. ಸತ್ಯ ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯವೇ ಆಗಿರುತ್ತದೆ ಅಂತ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಪ್ರತಿಕ್ರಿಯಿಸಿರೋ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮೂಡಾ ಜಾಗ ಯಾರದ್ದು..? ಸರ್ಕಾರಿ ಭೂಮಿ ಲಪಟಾಯಿಸಿ ಈಗ ಟಾರ್ಚ್ ಬಿಟ್ಕೊಂಡು ನೋಡ್ತಿದ್ದಾರೆ. ಮೊದಲು ಜಾಗ ಯಾರದ್ದು ಎಂದು ಹೇಳಲಿ. ಸುಳ್ಳು ದಾಖಲೆ ಸೃಷ್ಟಿ ಮಾಡಿ ಸರ್ಕಾರಿ ಜಾಗ ಲಪಟಾಯಿಸಿದ್ದಾರೆ ಅಂತ ಮತ್ತೊಮ್ಮೆ ಕಿಡಿಕಾರಿದ್ದಾರೆ.