• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಕ್ಯಾತೆ ತೆಗೆಯಲು ತಮಿಳುನಾಡಿನಿಂದ ಕಾನೂನು ಬಾಹಿರ ನಿರ್ಣಯ, ಮೇಕೆದಾಟು ಯೋಜನಾ ವರದಿಯನ್ನು CWMA ಅಂಗೀಕರಿಸಬೇಕು : ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
March 22, 2022
in ಇದೀಗ
0
ಕ್ಯಾತೆ ತೆಗೆಯಲು ತಮಿಳುನಾಡಿನಿಂದ ಕಾನೂನು ಬಾಹಿರ ನಿರ್ಣಯ, ಮೇಕೆದಾಟು ಯೋಜನಾ ವರದಿಯನ್ನು CWMA ಅಂಗೀಕರಿಸಬೇಕು : ಸಿದ್ದರಾಮಯ್ಯ
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಕೂಡಲೇ ಮೇಕೆದಾಟು ಯೋಜನೆಗೆ ಪರಿಸರ ಅನುಮತಿ ಕೊಡಬೇಕು ಮತ್ತು ನಮ್ಮ ವಿಸ್ತೃತ ಯೋಜನಾ ವರದಿಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಅಂಗೀಕರಿಸಬೇಕು ಎಂದು ಸದನದ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.

ADVERTISEMENT

ತಮಿಳುನಾಡಿನ ವಿಧಾನಸಭೆಯಲ್ಲಿ ಅಲ್ಲಿನ ಸರ್ಕಾರ ಮತ್ತು ಇತರೆ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆ ಜಾರಿ ವಿರೋಧಿಸಿ ಕೈಗೊಂಡಿರುವ ನಿರ್ಣಯ ಸಂಪೂರ್ಣ ಕಾನೂನು ಬಾಹಿರವಾಗಿದೆ. ಈ ನಿರ್ಣಯವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.

ನಾವು ಮೇಕೆದಾಟು ಯೋಜನೆ ಮಾಡುತ್ತಿರೋದು ಸಂವಿಧಾನಬದ್ಧವಾಗಿ ನಮ್ಮ ಪಾಲಿನ ಹೆಚ್ಚುವರಿ ನೀರನ್ನು ಬಳಕೆ ಮಾಡಿಕೊಳ್ಳಲು. ಬೆಂಗಳೂರು ಮತ್ತು ಸುತ್ತಮುತ್ತಲಿನ ನಗರಗಳಿಗೆ ಕುಡಿಯುವ ನೀರು ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದೆ ಎಂದಿದ್ದಾರೆ.

ಸುಪ್ರೀಂ ಕೋರ್ಟ್ ನ ಅಂತಿಮ ಆದೇಶ 16/02/2018 ರಲ್ಲಿ ಬಂದಿದೆ. ಸಹಜ ಪರಿಸ್ಥಿತಿಯ ವರ್ಷದಲ್ಲಿ 177.25 ಟಿಎಂಸಿ ನೀರನ್ನು ಬಿಳಿಗೊಂಡ್ಲುವಿನಿಂದ ತಮಿಳುನಾಡಿಗೆ ಬಿಡಬೇಕು ಎಂದು ತೀರ್ಪು ಹೇಳಿದೆ. ಈ ಆದೇಶವನ್ನು ಎರಡೂ ರಾಜ್ಯಗಳು ಒಪ್ಪಿಕೊಂಡಿದ್ದೇವೆ.

ತನ್ನ ಪಾಲಿನ ನೀರನ್ನು ಪಡೆದುಕೊಳ್ಳುವುದು ಮಾತ್ರ ತಮಿಳುನಾಡಿಗಿರುವ ಹಕ್ಕು. ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಈ ವರೆಗೆ ತಮಿಳುನಾಡಿಗೆ ಸುಮಾರು 582 ಟಿಎಂಸಿ ನೀರು ಹೆಚ್ಚುವರಿಯಾಗಿ ಹರಿದು ಹೋಗಿದೆ.

ಇದು ನಮ್ಮ ಪಾಲಿನ ನೀರು, ನಾವು ಬಳಸಿಕೊಳ್ಳಬೇಕು.

ಬೆಂಗಳೂರು ನಗರದ ಸುಮಾರು 30% ಜನರಿಗೆ ಇನ್ನೂ ಕೂಡ ಕಾವೇರಿ ನೀರು ಸಿಗುತ್ತಿಲ್ಲ. ಈ ಜನ ಬೋರ್ ವೆಲ್, ಟ್ಯಾಂಕರ್ ನೀರಿನ ಮೇಲೆ ಅವಲಂಬಿತರಾಗಿದ್ದಾರೆ. ಅಂತಾರಾಷ್ಟ್ರೀಯ ಖ್ಯಾತಿಯ ನಗರಕ್ಕೆ ಕುಡಿಯುವ ನೀರು ಕೊಡಲು ಆಗ್ತಿಲ್ಲ ಎಂದರೆ ಏನನ್ನಬೇಕು? ಎಂದು ಪ್ರಶ್ನಿಸಿದಾರೆ.

ಸುಪ್ರೀಂ ಕೋರ್ಟ್ ಬೆಂಗಳೂರು ನಗರಕ್ಕೆ 4.75 ಟಿಎಂಸಿ ಕಾವೇರಿ ನೀರನ್ನು ಹಂಚಿಕೆ ಮಾಡಿದೆ. ನಾವು ಬೆಂಗಳೂರು ನಗರಕ್ಕೆ ಕುಡಿಯುವ ನೀರು ಕೊಡಬೇಕು ಎಂದು ರೂ. 9,000 ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಿದ್ದೇವೆ.

ಕಾವೇರಿ ವಿವಾದ ಸುಮಾರು ನೂರು ವರ್ಷಗಳ ಹಿಂದಿನದು. ಅಂದಿನದಲೂ ನಮಗೆ ಅನ್ಯಾಯ ಆಗುತ್ತಲೇ ಬಂದಿದೆ. 1892 ರ ಒಪ್ಪಂದ, 1924 ರ ಒಪ್ಪಂದ ಹೀಗೆ ಹಲವಾರು ಬಾರಿ ನಮಗೆ ಅನ್ಯಾಯ ಆಗಿದೆ ಎಂದು ಹೇಳಿದ್ದಾರೆ.

ಈಗಲೂ ಅನ್ಯಾಯ ಮಾಡಲು ನೋಡಿದರೆ ಅದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ.

ನಾವು ನಮ್ಮ ನೆಲ, ಜಲ, ಭಾಷೆ, ಗಡಿಗೆ ಸಂಬಂಧಿಸಿದಂತೆ ರಾಜಕಾರಣ ಮಾಡಿಲ್ಲ, ಮುಂದೆಯೂ ಮಾಡಲ್ಲ. ಮೊನ್ನೆ ಮುಖ್ಯಮಂತ್ರಿಗಳು ಸರ್ವಪಕ್ಷಗಳ ಸಭೆ ಕರೆದಿದ್ದರು, ಅಲ್ಲಿ ನಮ್ಮ ಅಭಿಪ್ರಾಯವನ್ನು ಸ್ಪಷ್ಟವಾಗಿ ಹೇಳಿದ್ದೇವೆ. ನಮಗೆ ರಾಜಕೀಯಕ್ಕಿಂತ ನಾಡಿನ ಜನರ ಹಿತ ಮುಖ್ಯ.

ತಮಿಳುನಾಡಿನ ನಿರ್ಣಯವನ್ನು ಖಂಡಿಸಿ ನಾವು ಕೂಡ ಖಂಡನಾ ನಿರ್ಣಯವನ್ನು ಮಾಡಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡೋಣ. ಸರ್ವಪಕ್ಷಗಳ ನಿಯೋಗ ತೆಗೆದುಕೊಂಡು ಹೋಗಿ ಪ್ರಧಾನಿಗಳು ಮತ್ತು ಕೇಂದ್ರ ಜಲ ಸಂಪನ್ಮೂಲ ಸಚಿವರ ಮುಂದೆ ವಸ್ತುಸ್ಥಿತಿಯನ್ನು ಹೇಳೋಣ.

ಒಕ್ಕೂಟ ವ್ಯವಸ್ಥೆಯಲ್ಲಿ ಒಕ್ಕೂಟ ಧರ್ಮ ಪಾಲನೆ ಮಾಡಬೇಕಾದುದ್ದು ಕೇಂದ್ರ ಸರ್ಕಾರದ ಕರ್ತವ್ಯ. ರಾಜ್ಯ ಅಭಿವೃದ್ಧಿ ಆದರೆ ಮಾತ್ರ ದೇಶ ಅಭಿವೃದ್ಧಿ ಆಗಲು ಸಾಧ್ಯ. ರಾಜ್ಯದ ಹಿತಾಸಕ್ತಿಗಾಗಿ ರಾಜಕೀಯ ಬದಿಗಿಟ್ಟು ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ. ಕಾವೇರಿ ನೀರು ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಿಯಿಲ್ಲ ಎಂದು ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿಕಾನೂನು ಬಾಹಿರತಮಿಳುನಾಡಿತಮಿಳುನಾಡುತಮಿಳುನಾಡು ಪೊಲೀಸ್ತಮಿಳುನಾಡು ರಾಜಕೀಯತಮಿಳುನಾಡು ಸರ್ಕಾರನಿರ್ಣಯಬಿ ಎಸ್ ಯಡಿಯೂರಪ್ಪಬಿಜೆಪಿಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಮೇಕೆದಾಟುಮೇಕೆದಾಟು 2.0ಮೇಕೆದಾಟು ತಮಿಳುನಾಡುಮೇಕೆದಾಟು ಪಾದಯಾತ್ರೆಮೇಕೆದಾಟು ಯೋಜನೆಸಿದ್ದರಾಮಯ್ಯ
Previous Post

ಮುಖೇಶ್ ಅಂಬಾನಿ ಬಿಟ್ಟ ಅರಾಮ್ಕೊ ವ್ಯವಹಾರಕ್ಕೆ ಕೈ ಹಾಕುತ್ತಿರುವ ಗೌತಮ್ ಅದಾನಿ! 

Next Post

ತೈಲ ಬೆಲೆ ಏರಿಕೆ ಮಾಡಿ ಮೋದಿ ಸರ್ಕಾರದಿಂದ 10 ಸಾವಿರ ಕೋಟಿ ಲೂಟಿ : ಖರ್ಗೆ ಗಂಭೀರ ಅರೋಪ!

Related Posts

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ
ಇತರೆ / Others

ಬೆಂಗಳೂರಲ್ಲಿ ಮನೆಕೆಲಸದವನಿಂದಲೇ ಮನೆ ಮಹಿಳೆ ಕೊಲೆ

by ಪ್ರತಿಧ್ವನಿ
February 1, 2026
0

ಬೆಂಗಳೂರು: ಮನೆಗೆಲಸಕದಕಿದ್ದ ವ್ಯಕ್ತಿ ಮನೆಯಲ್ಲಿದ್ದ 65 ವರ್ಷದ ಮಹಿಳೆಯನ್ನ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಕೋ ಲೇಔಟ್ ನಲ್ಲಿ ನಡೆದಿದೆ. https://youtu.be/PJDCpnf86AI ಇಂದು...

Read moreDetails
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ ಆತ್ಮ** ಕೇಸ್- SIT ರಚನೆ

January 31, 2026
ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಆತ್ಮಹತ್ಯೆ

ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಆತ್ಮಹತ್ಯೆ

January 30, 2026
Union Budget 2026: ಟ್ರಂಪ್‌ಗೆ ಗುನ್ನ: ಕೇಂದ್ರ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ..?

Union Budget 2026: ಟ್ರಂಪ್‌ಗೆ ಗುನ್ನ: ಕೇಂದ್ರ ಬಜೆಟ್‌ನಲ್ಲಿ ಯಾರಿಗೆ ಸಿಹಿ? ಯಾರಿಗೆ ಕಹಿ..?

January 30, 2026
ಅಕ್ರಮ ಆನ್ ಲೈನ್ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿ “ಮಾಸ್ಟರ್ ಮೈಂಡ್”

ಅಕ್ರಮ ಆನ್ ಲೈನ್ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿ “ಮಾಸ್ಟರ್ ಮೈಂಡ್”

January 29, 2026
Next Post
ತೈಲ ಬೆಲೆ ಏರಿಕೆ ಮಾಡಿ ಮೋದಿ ಸರ್ಕಾರದಿಂದ 10 ಸಾವಿರ ಕೋಟಿ ಲೂಟಿ : ಖರ್ಗೆ ಗಂಭೀರ ಅರೋಪ!

ತೈಲ ಬೆಲೆ ಏರಿಕೆ ಮಾಡಿ ಮೋದಿ ಸರ್ಕಾರದಿಂದ 10 ಸಾವಿರ ಕೋಟಿ ಲೂಟಿ : ಖರ್ಗೆ ಗಂಭೀರ ಅರೋಪ!

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!