ಅರಬ್ಬಿ ಸಮುದ್ರದಲ್ಲಿ ಬಿಪರ್ಜಾಯ್ ಚಂಡಮಾರುತ ರೂಪುಗೊಂಡಿದೆ. ಈ ಚಂಡಮಾರುತದಿಂದಾಗಿ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಲ್ಲಿಯೂ ಭಾರೀ ಪ್ರಮ್ರಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ರೂಪುಗೊಂಡಿದೆ ಎಂದು ಮುಂಬೈ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಿಪರ್ಜಾಯ್ ಚಂಡಮಾರುತವು ಸಮುದ್ರ ಮಟ್ಟದಿಂದ ಸರಾಸರಿ 5.8 ಕಿಲೋ ಮೀಟರ್ವರೆಗೆ ಹರಡಿದೆ ಎಂದು ಮುಂಬೈ ಹವಾಮಾನ ಇಲಾಖೆ ಮಾಹಿತಿ ನೀಡಿದೆ.