ಹುಬ್ಬಳ್ಳಿಯ ಉಣಕಲ್ ಸಮೀಪದ ಅಚ್ಚವ್ವನ ಕಾಲೋನಿಯಲ್ಲಿ ಸಂಭಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಒಂಭತ್ತು ಜನ ಅಯ್ಯಪ್ಪ ಮಾಲಾಧಾರಿಗಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲು, ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ್ ಲಾಡ್ ರವರು ಜಿಲ್ಲಾಧಿಕಾರಿಗಳಿಗೆ ಹಾಗೂ ಕಿಮ್ಸ್ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.
ಅಲ್ಲದೇ ಒಂಭತ್ತು ಜನ ಗಾಯಾಳುಗಳ ಕುಟುಂಬಗಳಿಗೆ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ, ನಗರ ಮತ್ತು ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಾದ ಶ್ರೀ ಅನಿಲ್ ಕುಮಾರ್ ಪಾಟೀಲ್ ಹಾಗೂ ಶ್ರೀ ಅಲ್ತಾಫ್ ಹಳ್ಳೂರು ರವರ ಮುಖಾಂತರ ಧನ ಸಹಾಯಯದ ಚೆಕ್ ವಿತರಿಸಲಾಯಿತು.