• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿ.ದೇವರಾಜ ಅರಸು ಜನ್ಮ ದಿನಾಚರಣೆಬಡತನ, ಜಾತಿ ವ್ಯವಸ್ಥೆ ಹೋಗದೆ ಸಮ ಸಮಾಜದ ನಿರ್ಮಾಣ ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 20, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು: ಸಮಾಜದಲ್ಲಿ ಬಡತನ ಮತ್ತು ಜಾತಿ ವ್ಯವಸ್ಥೆ ಸಂಪೂರ್ಣವಾಗಿ ತೊಲಗದೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಅವರು ಮಂಗಳವಾರ ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ADVERTISEMENT

ಸಮಾಜದಲ್ಲಿ ಮೇಲು ಕೀಳು ಇರಬಾರದು. ಬಡವ ಬಲ್ಲಿದ ಇರಬಾರದು. ಜಾತಿ ವ್ಯವಸ್ಥೆ ಇರಬಾರದು, ಎಲ್ಲರೂ ಮನುಷ್ಯರಾಗಿ ಸಮಾನವಾಗಿ ಬದುಕಬೇಕು ಎಂಬುವುದೇ ಬಸವಾದಿ ಶರಣರ ಕನಸು. ಇದೇ ತತ್ವದ ಆಧಾರದ ಮೇಲೆ ಅಂಬೇಡ್ಕರ್‌ ಅವರು ಸಂವಿಧಾನ ರಚಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರು ಸಹ ಈ ತತ್ವ ಸಿದ್ದಾಂತಗಳ ಆಧಾರದಲ್ಲಿ ಆಡಳಿತ ನಡೆಸಿ, ರಾಜ್ಯದಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು.ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ ಕಾಳಜಿ ಹೊಂದಿದ್ದರು.

ಸ್ವಾತಂತ್ರ್ಯ ಬಂದು 77 ವರ್ಷಗಳು ಕಳೆದರೂ ಇನ್ನೂ ನಮ್ಮಲ್ಲಿ ಸಾಮಾಜಿಕ ಸಮಾನತೆ ಸಾಧ್ಯವಾಗಿಲ್ಲ. ಸಮಾನವಾಗಿ ಸಂಪತ್ತು ಹಂಚಿಕೆ ನಮಗೆ ಸಾಧ್ಯವಾಗಿಲ್ಲ. ವ್ಯಕ್ತಿಯನ್ನು ಜಾತಿ ಆಧಾರದಲ್ಲಿ ಗುರುತಿಸುವಂತಹ ವ್ಯವಸ್ಥೆ ಇನ್ನೂ ನಮ್ಮಲ್ಲಿ ಇದೆ. ಜನರನ್ನು ಅವರ ಪ್ರತಿಭೆ ಮೇಲೆ, ವ್ಯಕ್ತಿತ್ವದ ಮೇಲೆ ಗುರುತಿಸದೆ ಜಾತಿ ಆಧಾರದಲ್ಲಿ ಗುರುತಿಸಲಾಗುತ್ತಿದೆ. ಆದರೆ ಯಾರೂ ಕೂಡಾ ಜಾತಿ ಆಧಾರದಲ್ಲಿ ಸಮಾಜದಲ್ಲಿ ಪ್ರತಿಭಾವಂತ ಆಗಲು ಸಾಧ್ಯವಿಲ್ಲ. ಸರಿಯಾದ ಅವಕಾಶಗಳು ಸಿಕ್ಕಿದರೆ ಮಾತ್ರ ಪ್ರತಿಭಾವಂತ ಆಗಲು ಸಾಧ್ಯ.ಬಸವಾದಿ ಶರಣಗರು 800 ವರ್ಷಗಳ ಹಿಂದಯೇ ಸಮಾನತೆಗಾಗಿ ಸಾಮಾಜಿಕ ಕ್ರಾಂತಿಯನ್ನು ಮಾಡಿದರು.ಆದರೆ ಸಂಪೂರ್ಣ ಸಮ ಸಮಾಜ ನಿರ್ಮಾಣ ಇನ್ನೂ ಸಾಧ್ಯವಾಗಿಲ್ಲ.

ಹಿಂದುಳಿದವರನ್ನು ತುಳಿಯಲು ಈಗಲೂ ನಿರಂತರ ಹುನ್ನಾರಗಳು ನಡೆಯುತ್ತಿವೆ. ನಾನು ಮುಖ್ಯಮಂತ್ರಿ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ. ಆದರೆ ಬದಲಾವಣೆ ಬಯಸದ, ಬಡವರ ವಿರೋಧಿ ಪಟ್ಟಭದ್ರರು ಇದನ್ನು ವಿರೋಧಿಸುತ್ತಿದಾರೆ.

ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ನಾವು ಜಾತಿ ಗಣತಿ ಮಾಡಿದ್ದೇವೆ. ಜಾತಿ ಗಣತಿ ಮಾಡದೆ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿ ಗತಿ ತಿಳಿಯಲು ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಿಲ್ಲ. ಸಾಮಾಜಿಕ ನ್ಯಾಯ ಒದಗಿಸಲು ನಾವು ನಡೆಸುತ್ತಿರುವ ಪ್ರಯತ್ನಗಳಿಂದ ಹತಾಶರಾಗಿ ನನ್ನನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ಮಾಡುತ್ತಿದಾರೆ.

ನಾನು 1984ರಲ್ಲಿ ಮೊದಲ ಬಾರಿಗೆ ಮಂತ್ರಿಯಾದ ಬಳಿಕ ಕಳೆದ 40 ವರ್ಷಗಳಲ್ಲಿ ಇಂದಿನವರೆಗೆ ನನ್ನ ಜೀವನದಲ್ಲಿ ಯಾವುದೇ ಕಳಂಕವಿಲ್ಲ. ನಾನು ಯಾವುದೇ ತಪ್ಪು ಮಾಡದಿದ್ದರೂ ಈಗ ಕಪ್ಪು ಮಸಿ ಬಳಿಯಲು ನಿರಂತರ ಪ್ರಯತ್ನ ನಡೆಯುತ್ತಿದೆ. ಅಧಿಕಾರ ಇದ್ದರೂ, ಇಲ್ಲದಿದ್ದರೂ, ಸಾಮಾಜಿಕ ನ್ಯಾಯದ ವಿಷಯದಲ್ಲಿ, ನಂಬಿರುವ ಸಿದ್ಧಾಂತಗಳ ಕುರಿತು ಯಾವತ್ತೂ ರಾಜಿ ಮಾಡುವುದಿಲ್ಲ.

ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು.

ಕರ್ನಾಟಕ ಏಕೀಕರಣ 1956 ನವಂಬರ್‌ 1 ರಂದೇ ಆಗಿದ್ದರೂ, 1973 ರಲ್ಲಿ ದೇವರಾಜ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿದರು. ಈ ಹಿನ್ನೆಲೆಯಲ್ಲಿಯೇ ನಾವು ಕರ್ನಾಟಕ ಸಂಭ್ರಮ ವರ್ಷಾಚರಣೆ ನಡೆಸುತ್ತಿದ್ದು, ನವೆಂಬರ್‌ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಕನ್ನಡ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧ ಮುಂಭಾಗದಲ್ಲಿ ನವೆಂಬರ್‌ 1 ರಂದು ಅನಾವರಣಗೊಳಿಸಲಾಗುವುದು.

Tags: CM Siddaramaiah‌Congress PartyD. Devaraja Arasu birthday celebration povertyDCM DK ShivakumarEnergy Minister KJ George
Previous Post

ಅನಾಥಶ್ರಮದಲ್ಲಿ ವಿತರಿಸಿದ ಸಮೋಸ ತಿಂದು ಮೂವರು ಮಕ್ಕಳು ಸಾವು, 24 ಮಕ್ಕಳು ಅಸ್ವಸ್ಥ

Next Post

ಸಿಎಂ ವಿರುದ್ಧ ತನಿಖೆಗೆ ಅನುಮತಿ:ರಾಜ್ಯಪಾಲರ ವಿರುದ್ಧ ಪಂಜಿನ ಮೆರವಣಿಗೆ ನಾಳೆ

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
Next Post

ಸಿಎಂ ವಿರುದ್ಧ ತನಿಖೆಗೆ ಅನುಮತಿ:ರಾಜ್ಯಪಾಲರ ವಿರುದ್ಧ ಪಂಜಿನ ಮೆರವಣಿಗೆ ನಾಳೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada