ಡಿ ಗುಕೇಶ್ (D gukesh) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಹೌದು ಭಾರತದ ಯುವ ಗ್ರಾಂಡ್‌ಮಾಸ್ಟರ್ (Grand master) ಡಿ.ಗುಕೇಶ್ ನೂತನ ಚೆಸ್ ಚಾಂಪಿಯನ್ (Chess champion) ಪಟ್ಟ ಗಿಟ್ಟಿಸಿದ್ದಾರೆ.
ಡಿಸೆಂಬರ್ 12ರಂದು ಸಿಂಗಾಪುರದಲ್ಲಿ (Singapore) ನಡೆದ ವಿಶ್ವ ಚಾಂಪಿಯನ್‌ಶಿಪ್ ಚೆಸ್ ಪಂದ್ಯದಲ್ಲಿ ಚೀನಾದ ಡಿಂಗ್ ಲಿರೆನ್ (Ding liren) ರನ್ನು ಸೋಲಿಸುವ ಮೂಲಕ ಗುಕೇಶ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಈ ಚಾಂಪಿಯನ್ ಪಟ್ಟ ಗಿಟ್ಟಿಸಿಕೊಳ್ಳುವ ಮೂಲಕ ಗುಕೇಶ್ ಹೊಸ ಇತಿಹಾಸ ಬರೆದಿದ್ದು, ಚೆಸ್ ಇತಿಹಾಸದಲ್ಲೇ ಅತ್ಯಂತ ಕಿರಿಯ ವಿಶ್ವ ಚಾಂಪಿಯನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಆ ಮೂಲಕ ಡಿ.ಗುಕೇಶ್ ಭಾರತದ ವಿಶ್ವನಾಥನ್ ಆನಂದ್ (Vishwanathan anand) ಅವರ ನಂತರ ಚೆಸ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.