• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿ. 14 ರಂದು 114 ‘ನಮ್ಮ ಕ್ಲಿನಿಕ್‌’ ಗಳ ಉದ್ಘಾಟನೆ: ಸಚಿವ ಡಾ.ಕೆ.ಸುಧಾಕರ್‌

Any Mind by Any Mind
December 12, 2022
in Top Story, ಕರ್ನಾಟಕ
0
ಡಿ. 14 ರಂದು 114 ‘ನಮ್ಮ ಕ್ಲಿನಿಕ್‌’ ಗಳ ಉದ್ಘಾಟನೆ: ಸಚಿವ ಡಾ.ಕೆ.ಸುಧಾಕರ್‌
Share on WhatsAppShare on FacebookShare on Telegram

ನಮ್ಮ ಕ್ಲಿನಿಕ್‌ಗಳಲ್ಲಿ 12 ರೀತಿಯ ಆರೋಗ್ಯ ಸೇವೆಗಳು ಲಭ್ಯ ಇರಲಿದೆ. ತಲಾ ಒಬ್ಬ ವೈದ್ಯಾಧಿಕಾರಿ, ನರ್ಸಿಂಗ್‌ ಸ್ಟಾಫ್‌, ಲ್ಯಾಬ್‌ ಟೆಕ್ನಿಷಿಯನ್‌, ಡಿ ದರ್ಜೆ ನೌಕರರು ಇಲ್ಲಿ ಇರಲಿದ್ದಾರೆ. ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಶಿಶುವಿನ ಸಮಗ್ರ ಆರೈಕೆ, ಬಾಲ್ಯ ಮತ್ತು ಹದಿಹರಯದವರಿಗೆ ಸೇವೆಗಳು, ಸಾರ್ವತ್ರಿಕ ಲಸಿಕಾಕರಣದ ಸೇವೆ

ADVERTISEMENT

ಬೆಂಗಳೂರು:ನಗರ ಪ್ರದೇಶದ ಬಡ ಜನರ ಆರೋಗ್ಯ ಸಂಜೀವಿನಿಯಾಗಿ ಕಾರ್ಯನಿರ್ವಹಿಸುವ ನಮ್ಮ ಕ್ಲಿನಿಕ್‌ಗಳು ಡಿಸೆಂಬರ್‌ 14 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಲೋಕಾರ್ಪಣೆಯಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಮ್ಮ ಕ್ಲಿನಿಕ್ ಗಳನ್ನು ಉದ್ಘಾಟಿಸಲಿದ್ದಾರೆ. ಆರಂಭದಲ್ಲಿ 114 ಕ್ಲಿನಿಕ್‌ಗಳು ಏಕ ಕಾಲಕ್ಕೆ, ಏಕ ಸಮಯದಲ್ಲಿ ಲೋಕಾರ್ಪಣೆಯಾಗಲಿದೆ. ರಾಜ್ಯದಲ್ಲಿ ಒಟ್ಟು 438 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದ್ದು, ಜನವರಿ ಅಂತ್ಯಕ್ಕೆ ಎಲ್ಲವೂ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 243 ನಮ್ಮ ಕ್ಲಿನಿಕ್‌ಗಳು ಕಾರ್ಯಚರಣೆ ಮಾಡಲಿದ್ದು, ಜನವರಿ ಎರಡನೇ ವಾರದೊಳಗೆ ಇವುಗಳು ಜನ ಸೇವೆಗೆ ಲಭ್ಯವಾಗುವಂತೆ ಕೆಲಸ ನಡೆಯುತ್ತಿದ್ದು, ಕನಿಷ್ಠ 150 ಕ್ಲಿನಿಕ್‌ಗಳು ಜನರ ಸೇವೆಗೆ ಲಭ್ಯವಿರುವುದು ಖಚಿತ. ಈ ಕ್ಲಿನಿಕ್‌ಗಳಿಂದ ದುರ್ಬಲ ವರ್ಗದವರಿಗೆ, ಶ್ರಮಕರಿಗೆ, ಕೂಲಿ ಕಾರ್ಮಿಕರಿಗೆ ಸೇರಿದಂತೆ ಹಲವರಿಗೆ ಆರೋಗ್ಯ ಸೇವೆ ಸಿಗಲಿದೆ. 10 ರಿಂದ 20 ಸಾವಿರ ಜನಸಂಖ್ಯೆಗೆ ಒಂದರಂತೆ ನಮ್ಮ ಕ್ಲಿನಿಕ್‌ಗಳು ಆರಂಭವಾಗಲಿದೆ ಎಂದು ಹೇಳಿದರು.

ನಮ್ಮ ಕ್ಲಿನಿಕ್‌ಗಳಲ್ಲಿ 12 ರೀತಿಯ ಆರೋಗ್ಯ ಸೇವೆಗಳು ಲಭ್ಯ ಇರಲಿದೆ. ತಲಾ ಒಬ್ಬ ವೈದ್ಯಾಧಿಕಾರಿ, ನರ್ಸಿಂಗ್‌ ಸ್ಟಾಫ್‌, ಲ್ಯಾಬ್‌ ಟೆಕ್ನಿಷಿಯನ್‌, ಡಿ ದರ್ಜೆ ನೌಕರರು ಇಲ್ಲಿ ಇರಲಿದ್ದಾರೆ. ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಶಿಶುವಿನ ಸಮಗ್ರ ಆರೈಕೆ, ಬಾಲ್ಯ ಮತ್ತು ಹದಿಹರಯದವರಿಗೆ ಸೇವೆಗಳು, ಸಾರ್ವತ್ರಿಕ ಲಸಿಕಾಕರಣದ ಸೇವೆಗಳು, ಕುಟುಂಬ ಕಲ್ಯಾಣ ಗರ್ಭ ನಿರೋಧಕ ಸೇವೆಗಳು, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಪ್ರಮಾಣದ ಕಾಯಿಲೆಗಳಿಗೆ ಸೇವೆ, ಮಧುಮೇಹ, ರಕ್ತದೊತ್ತಡಕ್ಕೆ ಚಿಕಿತ್ಸೆ , ಸಕ್ಕರೆ ಕಾಯಿಲೆ, ದೀರ್ಘಾವಧಿ ಕಾಯಿಲೆಗಳು, ಬಾಯಿ, ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್‌, ಬಾಯಿಯ ಆರೋಗ್ಯ ಸಮಸ್ಯೆಗಳು ಮತ್ತು ಸೇವೆಗಳು, ಕಣ್ಣಿನ ತಪಾಸಣೆ, ಮೆಂಟಲ್‌ ಹೆಲ್ತ್‌ಗೆ ಸಂಬಂಧಿಸಿದ ಮೂಲಭೂತ ಸೇವೆಗಳು ಸೇರಿದಂತೆ ಬೇರೆ ಆಸ್ಪತ್ರೆಗಳಿಗೆ ರೆಫರಲ್‌ ಸೇವೆಗಳು ಇಲ್ಲಿ ಲಭ್ಯವಾಗಲಿದೆ ಎಂದರು.

ವೃದ್ಧಾಪ್ಯ ಆರೈಕೆ, ತುರ್ತು ವೈದ್ಯಕೀಯ ಸೇವೆಗಳು, ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಔಷಧಗಳು ಸಂಪೂರ್ಣ ಉಚಿತವಾಗಿರಲಿದೆ. 14 ಪ್ರಯೋಗ ಶಾಲಾ ಪರೀಕ್ಷೆಗಳು ಇಲ್ಲಿ ಲಭ್ಯವಿದ್ದು ಟೆಲಿ ಕನ್ಸಲ್ಟೇಷನ್‌ ಸರ್ವೀಸಸ್‌, ಕ್ಷೇಮ ಚಟುವಟಿಕೆಗಳು ಕೂಡ ಉಚಿತವಾಗಿವೆ. ಸೋಮವಾರದಿಂದ ಶನಿವಾರ ತನಕ ಬೆಳಗ್ಗೆ 9 ರಿಂದ ಸಂಜೆ 4.30ರ ತನಕ ಈ ಸೇವೆ ಲಭ್ಯವಿದ್ದು ಭಾನುವಾರ ರಜೆ ಇರಲಿದೆ. ಬಡಾವಣೆಯ ವ್ಯಾಪ್ತಿಯಲ್ಲಿ ಈ ಕ್ಲಿನಿಕ್‌ಗಳು ತಲೆ ಎತ್ತುವುದರಿಂದ ಸುಲಭವಾಗಿ ಆರೋಗ್ಯ ಸೇವೆ ಸಿಗಲಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ಸಮಯದಲ್ಲಿ 100ಕ್ಕೂ ಹೆಚ್ಚು ಕ್ಲಿನಿಕ್‌ಗಳು ಉದ್ಘಾಟನೆ ಆಗುತ್ತಿರುವುದು ಸಾರ್ವಕಾಲಿಕ ದಾಖಲೆಯಾಗಲಿದೆ ಎಂದರು.

ಒಟ್ಟು 150 ಕೋಟಿ ರೂಪಾಯಿ ಮೊತ್ತದ ಯೋಜನೆ ಇದಾಗಿದ್ದು ಬಹುತೇಕ ಕ್ಲಿನಿಕ್‌ಗಳು ಸರ್ಕಾರಿ ಕಟ್ಟಡಗಳಲ್ಲೇ ಕಾರ್ಯ ಆರಂಭಿಸಲಿದೆ. ಈಗಾಗಲೇ 300 ವೈದ್ಯರ ನೇಮಕವಾಗಿದ್ದು, ಕೆಲವೆಡೆ ವೈದ್ಯರ ಕೊರತೆ ಇದೆ. ಅಂತಹ ಕಡೆ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು ಕಡ್ಡಾಯ ಗ್ರಾಮೀಣ ಸೇವೆಯಲ್ಲಿರುವ 80-100 ವೈದ್ಯರನ್ನು ಅಲ್ಲಿಗೆ ನೇಮಿಸಲಾಗಿದೆ ಎಂದು ತಿಳಿಸಿದರು.

ಎಲ್ಲಿ, ಎಷ್ಟು ಕ್ಲಿನಿಕ್‌ಗಳು?

ಬಾಗಲಕೋಟೆ 18, ಬಳ್ಳಾರಿ 11, ವಿಜಯನಗರ 6, ಬೆಳಗಾವಿ 21, ಬೆಂಗಳೂರು ಗ್ರಾಮಾಂತರ 9, ಬೀದರ್‌ 6, ಚಾಮರಾಜನಗರ 3, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ದಾವಣಗೆರೆ 1, ಧಾರವಾಡ 6, ಗದಗ 11, ಹಾಸನ 5, ಹಾವೇರಿ 5, ಕಲಬುರ್ಗಿ 11, ಕೊಡಗು 1, ಕೋಲಾರ 3, ಕೊಪ್ಪಳ 3, ಮಂಡ್ಯ 4, ಮೈಸೂರು 6, ರಾಯಚೂರು 8, ರಾಮನಗರ 3, ತುಮಕೂರು 10, ಉಡುಪಿ 10, ಉತ್ತರ ಕನ್ನಡ 10, ವಿಜಯಪುರ 10, ಯಾದಗಿರಿ 3, ಬಿಬಿಎಂಪಿ ವ್ಯಾಪ್ತಿಯಲ್ಲಿ 243

ಝಿಕಾ ವೈರಸ್‌

ಪುಣೆ ಲ್ಯಾಬ್‌ ರಿಪೋರ್ಟ್‌ ಪ್ರಕಾರ ರಾಜ್ಯದಲ್ಲಿ 5 ವರ್ಷದ ಒಂದು ಹೆಣ್ಣು ಮಗುವಿಗೆ ಝಿಕಾ ವೈರಸ್‌ ಇರುವುದು ಖಚಿತವಾಗಿದ್ದು, ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ. ರಾಜ್ಯದಲ್ಲಿ ಇದು ಮೊದಲ ಪ್ರಕರಣವಾಗಿದ್ದು ಸರ್ಕಾರ ಇದನ್ನು ಬಹಳ ಎಚ್ಚರದಿಂದ ಗಮನಿಸುತ್ತಿದೆ ಮತ್ತು ಅದನ್ನು ನಿರ್ವಹಿಸಲು ಸಜ್ಜಾಗಿದೆ ಎಂದು ಸಚಿವರು ಹೇಳಿದರು.

Tags: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣಡಾ.ಕೆ.ಸುಧಾಕರ್‌ನಮ್ಮ ಕ್ಲಿನಿಕ್‌
Previous Post

ಪ್ರವಾಸಿಗರನ್ನ ಆಕರ್ಷಿಸುತ್ತಿದೆ ತ್ಯಾವರೆಕೊಪ್ಪದ ಸಿಂಹ-ಹುಲಿಧಾಮ

Next Post

ಸುಳ್ಯದಲ್ಲಿ ಗೆಳತಿ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಪತಿ.!; ಪತ್ನಿ ಮಾಡಿದ್ದೇನು ..?

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

May 12, 2026
Next Post
ಸುಳ್ಯದಲ್ಲಿ ಗೆಳತಿ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಪತಿ.!; ಪತ್ನಿ ಮಾಡಿದ್ದೇನು ..?

ಸುಳ್ಯದಲ್ಲಿ ಗೆಳತಿ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಪತಿ.!; ಪತ್ನಿ ಮಾಡಿದ್ದೇನು ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada