2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೌಂಟ್‌ಡೌನ್ ಶುರುವಾಗಿದೆ. ಈಗಾಗಲೇ ಪಕ್ಷದ ನಾಯಕರು ಹಾಗೂ ಮುಖಂಡರು ಆಯಾ ಪಕ್ಷಗಳ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಇನ್ನು ಚುನಾವಣಾ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು, ರಾಜ್ಯ ಚುನಾವಣಾ ಅಖಾಡದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್, ಕನಕಪುರ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಹೌದು.. ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಡಿಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಈಗಾಗಲೇ ಡಿ.ಕೆ.ಸುರೇಶ್ ಸಹೋದರ ಡಿ.ಕೆ.ಶಿವಕುಮಾರ್ ಕನಕಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದರು. ಇದೀಗ ಡಿ.ಕೆ.ಸುರೇಶ್ ಕೂಡ ಅದೇ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ.