ಮೇಷ ರಾಶಿಯ ಇಂದಿನ ಭವಿಷ್ಯ

ಮೇಷ ರಾಶಿಯವರ ಈ ದಿನ ಕೆಲಸ ಕಾರ್ಯಗಳಲ್ಲಿ ವಿಳಂಬವಾಗುತ್ತದೆ ಹಾಗೂ ಮಾನಸಿಕ ನೆಮ್ಮದಿ ಅಷ್ಟಾಗಿ ಇರುವುದಿಲ್ಲ. ವಿದೇಶಕ್ಕೆ ಸಂಬಂಧಪಟ್ಟ ವ್ಯವಹಾರದಲ್ಲಿ ಹೆಚ್ಚು ಅನುಕೂಲ ಉಂಟಾಗುತ್ತದೆ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿದೆ.
ವೃಷಭ ರಾಶಿಯ ಇಂದಿನ ಭವಿಷ್ಯ

ವೃಷಭ ರಾಶಿಯವರಿಗೆ ಇಂದು ನಿಮಗೆ ಅಗತ್ಯಕ್ಕಿಂತ ಹೆಚ್ಚು ಖರ್ಚುಗಳು ಉಂಟಾಗುತ್ತದೆ. ದೂರದ ಪ್ರಯಾಣ ಕೆಲಸ ಕಾರ್ಯಗಳಲ್ಲಿ ಕಾರ್ಯಸಿದ್ಧಿಯಾಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿಸಿದ ಫಲಿತಾಂಶ ಸಿಗಲಿದೆ.
ಮಿಥುನ ರಾಶಿಯ ಇಂದಿನ ಭವಿಷ್ಯ

ಮಿಥುನ ರಾಶಿಯವರಿಗೆ ಇಂದು ಮನೆಯಲ್ಲಿ ಬೇಡವಾದ ವಾದ ವಿವಾದಗಳು ಉಂಟಾಗುತ್ತವೆ. ಅದರ ಜೊತೆ ಸಂಬಂಧಿಕರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುತ್ತದೆ. ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸಿ.
ಕರ್ಕಾಟಕ ರಾಶಿಯ ಇಂದಿನ ಭವಿಷ್ಯ

ಕರ್ಕಾಟಕ ರಾಶಿಯವರ ಮನೆಯಲ್ಲಿ ಪರಸ್ಪರ ಸಹಕಾರ ಮನೋಭಾವ ಹೆಚ್ಚಾಗಲಿದೆ. ಷೇರು ಹೂಡಿಕೆ ಅಥವಾ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳಲ್ಲಿ ಬಹಳ ಎಚ್ಚರ ವಹಿಸಿ. ಕೌಟುಂಬಿಕ ನೆಮ್ಮದಿ ಹೆಚ್ಚಾಗಲಿದೆ.
ಸಿಂಹ ರಾಶಿಯ ಇಂದಿನ ಭವಿಷ್ಯ

ಸಿಂಹ ರಾಶಿಯವರ ಈ ದಿನ ನಿಮ್ಮೆಲ್ಲಾ ಕೆಲಸಗಳು ಯಶಸ್ವಿಯಾಗಿ ಮುಗಿಯುತ್ತದೆ. ಶತ್ರುಗಳ ಭಯ ಕಾಡುತ್ತದೆ. ಧಾರ್ಮಿಕ ಕ್ಷೇತ್ರಗಳ ದರ್ಶನವನ್ನು ಪಡೆಯುವಿರಿ. ಆರೋಗ್ಯ ಸುಧಾರಿಸಲಿದೆ. ಮಾನಸಿಕ ಕಿರಿ ಕಿರಿ ಕಡಿಮೆಯಾಗಲಿದೆ.
ಕನ್ಯಾ ರಾಶಿಯ ಇಂದಿನ ಭವಿಷ್ಯ

ಕನ್ಯಾ ರಾಶಿಯವರ ಹೊಸ ಆಲೋಚನೆ ಹಾಗೂ ಯೋಜನೆಗಳಿಗೆ ಹಣದ ಸಮಸ್ಯೆ ಎದುರಾಗುತ್ತದೆ. ಕೆಲಸ ಕಾರ್ಯಗಳಲ್ಲಿ ವಿಳಂಬ ಉಂಟಾಗುತ್ತದೆ. ಬೇಡವಾದ ಖರ್ಚುಗಳ ಮೇಲೆ ನಿಯಂತ್ರಣ ಮಾಡಿ.
ತುಲಾ ರಾಶಿಯ ಇಂದಿನ ಭವಿಷ್ಯ

ತುಲಾ ರಾಶಿಯವರಿಗೆ ಆಸ್ತಿ ಮತ್ತು ಕಟ್ಟಡಕ್ಕೆ ಸಂಬಂಧಿಸಿದ ವ್ಯವಹಾರದಲ್ಲಿ ಉತ್ತಮ ಅಭಿವೃದ್ಧಿ ಹಾಗೂ ಲಾಭ ಉಂಟಾಗುತ್ತದೆ. ವಿದೇಶದಿಂದ ಉದ್ಯೋಗ ಅವಕಾಶಗಳು ಪ್ರಾಪ್ತಿ ಆಗುತ್ತದೆ. ಆರೋಗ್ಯದ ಬಗ್ಗೆ ಗಮನ ಇರಲಿ.
ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಇಂದು ಕೋರ್ಟ್ ಕಚೇರಿಗೆ ಸಂಬಂಧಪಟ್ಟ ಕೆಲಸ ಕಾರ್ಯಗಳಲ್ಲಿ ಅನುಕೂಲ ಉಂಟಾಗುತ್ತದೆ. ಸಂಘ ಸಂಸ್ಥೆ ಕ್ಷೇತ್ರದಲ್ಲಿ ಇರುವಂಥವರಿಗೆ ಉತ್ತಮ ಅಭಿವೃದ್ಧಿ ಕಾಣುವಿರಿ. ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಧನು ರಾಶಿಯ ಇಂದಿನ ಭವಿಷ್ಯ

ಧನುಸ್ಸು ರಾಶಿಯವರು ಇಂದು ಯಾವುದೇ ಪ್ರಮುಖ ಮಾಹಿತಿಯನ್ನು ಯಾರಿಗೂ ಹಂಚಿಕೊಳ್ಳಬೇಡಿ. ಕೆಲಸದಲ್ಲಿ ಸಹೋದ್ಯೋಗಿಗಳಿಂದ ನೆಮ್ಮದಿ ಹಾಳಾಗುತ್ತದೆ. ಆಹಾರದ ಮೇಲೆ ನಿಯಂತ್ರಣ ಅಗತ್ಯವಾಗಿದೆ.
ಮಕರ ರಾಶಿಯ ಇಂದಿನ ಭವಿಷ್ಯ

ಮಕರ ರಾಶಿಯವರಿಗೆ ಇಂದು ಅದೃಷ್ಟ ನಿಮ್ಮ ಕೈ ಹಿಡಿಯಲಿದ್ದು ಹೆಜ್ಜೆ-ಹೆಜ್ಜೆಗೂ ಅನುಕೂಲಕರ ಪರಿಸ್ಥಿತಿ ಇರಲಿದೆ. ಹಣವನ್ನು ಮನಸ್ಸಿಗೆ ಬಂದಂತೆ ಖರ್ಚು ಮಾಡಬೇಡಿ. ಕೌಟುಂಬಿಕ ಕಿರಿ ಕಿರಿ ಕಮ್ಮಿಯಾಗಿ ಮನೆಯಲ್ಲಿ ನೆಮ್ಮದಿ ಹೆಚ್ಚಾಗಲಿದೆ.
ಕುಂಭ ರಾಶಿಯ ಇಂದಿನ ಭವಿಷ್ಯ

ಕುಂಭ ರಾಶಿಯವರು ಈ ದಿನ ನೀವು ಮಾಡಿದ ಕಾರ್ಯಗಳು ಯಶಸ್ವಿಯಾಗುತ್ತವೆ. ಹೂಡಿಕೆಯಿಂದ ಲಾಭ ಗಳಿಸುವ ಸಾಧ್ಯತೆಗಳು ಹೆಚ್ಚಿದೆ. ಪ್ರೇಮ ಸಂಬಂಧಗಳಲ್ಲಿ ಬಾಂಧವ್ಯ ಹೆಚ್ಚಾಗುತ್ತದೆ. ಮನಸ್ಸಿನ ನೆಮ್ಮದಿ ಹೆಚ್ಚಾಗುತ್ತದೆ.
ಮೀನ ರಾಶಿಯ ಇಂದಿನ ಭವಿಷ್ಯ

ಮೀನ ರಾಶಿಯವರು ಹೊಸ ಕೆಲಸವನ್ನು ಪ್ರಾರಂಭಿಸಲು ಇಂದು ಉತ್ತಮವಾದ ದಿನ. ವಾಹನವನ್ನು ಅಜಾಗರೂಕತೆಯಿಂದ ಓಡಿಸಬೇಡಿ, ಇಂದು ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದೆ. ಆರೋಗ್ಯದ ಬಗ್ಗೆ ಗಮನ ಇರಲಿ. ಕುಟುಂಬದ ವಿಚಾರದಲ್ಲಿ ಸೌಮ್ಯವಾಗಿ ನಡೆದುಕೊಳ್ಳಿ.












