ಮೇಷ ರಾಶಿಯ ಇಂದಿನ ಭವಿಷ್ಯ

ಮೇಷ ರಾಶಿಯವರು ಇಂದು ಆಸ್ತಿ ವಿಷಯದಲ್ಲಿ ಎಚ್ಚರವಹಿಸುವುದು ಸೂಕ್ತವಾಗಿದೆ. ದಿಢೀರ್ ಧನ ಲಾಭದಿಂದ ಆರ್ಥಿಕ ಕೊರತೆ ನೀಗುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಕೌಟುಂಬಿಕವಾಗಿ ಶಾಂತಿ ಹೆಚ್ಚಾಗಲಿದೆ.
ವೃಷಭ ರಾಶಿಯ ಇಂದಿನ ಭವಿಷ್ಯ

ವೃಷಭ ರಾಶಿಯವರಿಗೆ ಇಂದು ಹಿರಿಯರ ಭೇಟಿಯಿಂದ ಮನಸ್ಸಿಗೆ ನೆಮ್ಮದಿ ಪ್ರಾಪ್ತಿಯಾಗುತ್ತದೆ. ಕೆಲಸದಲ್ಲಿ ಅನುಕೂಲವಾಗಲಿದ್ದು, ಹಣಕಾಸಿನ ತೊಂದರೆ ನಿವಾರಣೆಯಾಗುತ್ತದೆ. ಆರೋಗ್ಯ ಸುಧಾರಿಸುತ್ತದೆ.
ಮಿಥುನ ರಾಶಿಯ ಇಂದಿನ ಭವಿಷ್ಯ

ಮಿಥುನ ರಾಶಿಯವರಿಗೆ ಇಂದು ಕೆಲಸ ಕಾರ್ಯಗಳಲ್ಲಿ ಹಿನ್ನಡೆಯಾಗಲಿದೆ. ಅನಿರೀಕ್ಷಿತ ಧನಲಾಭ ಸಾಧ್ಯತೆ ಇದೆ. ಆಹಾರ ಸೇವನೆಯಲ್ಲಿ ಎಚ್ಚರಿಕೆ ಇರಲಿ. ಕೆಲಸದ ಸ್ಥಳದಲ್ಲಿ ಒತ್ತಡ ಹೆಚ್ಚಾಗಲಿದೆ.
ಕರ್ಕಾಟಕ ರಾಶಿಯ ಇಂದಿನ ಭವಿಷ್ಯ

ಕರ್ಕಾಟಕ ರಾಶಿಯ ನೌಕರರಿಗೆ ಇಂದು ಹೆಚ್ಚಿನ ಅಧಿಕಾರ ದೊರೆಯುತ್ತದೆ. ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯಲಿದೆ. ಆರೋಗ್ಯ ಸುಧಾರಿಸಲಿದೆ. ಮಾತಿನಲ್ಲಿ ಎಚ್ಚರಿಕೆ ಇರಲಿ.
ಸಿಂಹ ರಾಶಿಯ ಇಂದಿನ ಭವಿಷ್ಯ

ಸಿಂಹ ರಾಶಿಯವರು ಇಂದು ವ್ಯವಹಾರದಲ್ಲಿ ಎಚ್ಚರ ವಹಿಸಬೇಕು. ಸಹಕಾರ ಸಂಘಗಳ ಕ್ಷೇತ್ರದವರಿಗೆ ಉತ್ತಮ ಲಾಭವಾಗಲಿದೆ. ಖರ್ಚುಗಳು ಇನ್ನಷ್ಟು ಹೆಚ್ಚಾಗಲಿವೆ.
ಕನ್ಯಾ ರಾಶಿಯ ಇಂದಿನ ಭವಿಷ್ಯ

ಕನ್ಯಾ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಮಿತ್ರರ ಸಹಕಾರ ಸಿಗುತ್ತದೆ. ವಿದೇಶದಲ್ಲಿ ವಿದ್ಯಾಭ್ಯಾಸದ ವಿಚಾರದಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಪ್ರಾಪ್ತಿ ಆಗುತ್ತದೆ. ಆರೋಗ್ಯದತ್ತ ಗಮನ ಇರಲಿ.
ತುಲಾ ರಾಶಿಯ ಇಂದಿನ ಭವಿಷ್ಯ

ತುಲಾ ರಾಶಿಯವರಿಗೆ ಇಂದು ಕೆಲಸದಲ್ಲಿ ಶುಭ ಸಮಾಚಾರ ದೊರೆಯುತ್ತದೆ. ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರಿ. ಕೌಟುಂಬಿಕ ಕಿರಿ ಕಿರಿ ಕಡಿಮೆಯಾಗಲಿದೆ.
ವೃಶ್ಚಿಕ ರಾಶಿಯ ಇಂದಿನ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಇಂದು ಸ್ವಂತ ಪ್ರಯತ್ನದಿಂದ ಹಣಕಾಸಿನ ವಿಚಾರದಲ್ಲಿ ಅನುಕೂಲವಾಗಲಿದೆ. ಎಲ್ಲ ಕಾರ್ಯಗಳಲ್ಲಿ ಆಸಕ್ತಿಯಿಂದ ಕಾರ್ಯ ನಿರ್ವಹಿಸುವಿರಿ. ಆರೋಗ್ಯದ ಮೇಲೆ ಎಚ್ಚರಿಕೆ ಇರಲಿ.
ಧನು ರಾಶಿಯ ಇಂದಿನ ಭವಿಷ್ಯ

ಧನು ರಾಶಿಯವರ ಮನೆಯಲ್ಲಿ ಇಂದು ಮಂಗಳ ಕಾರ್ಯಗಳು ನಡೆಯುತ್ತವೆ. ಮಾನಸಿಕ ನೆಮ್ಮದಿ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಕುಟುಂಬದಲ್ಲಿ ಅಸಮಾಧಾನ ಹೆಚ್ಚಾಗುವ ಸಾಧ್ಯತೆ ಇದೆ. ಮಾತಿನಲ್ಲಿ ಎಚ್ಚರಿಕೆ ಇರಲಿ.
ಮಕರ ರಾಶಿಯ ಇಂದಿನ ಭವಿಷ್ಯ

ಆಟೋಮೊಬೈಲ್ ಕೆಲಸ ಮಾಡುವ ಮಕರ ರಾಶಿಯವರಿಗೆ ಇಂದು ಒತ್ತಡ ಹೆಚ್ಚಾಗಲಿದೆ. ಮನೋರಂಜನೆಗೋಸ್ಕರ ಹೆಚ್ಚು ಸಮಯ ಕಳೆಯುವಿರಿ. ನೆಮ್ಮದಿ ಹೆಚ್ಚಾಗಲಿದೆ.
ಕುಂಭ ರಾಶಿಯ ಇಂದಿನ ಭವಿಷ್ಯ

ಕುಂಭ ರಾಶಿಯವರಿಗೆ ಇಂದು ನೂತನ ವ್ಯಾಪಾರಿಗಳಿಗೆ ಉತ್ತಮ ಕಾಲವಾಗಿದೆ. ಕೃಷಿಕರಿಗೆ ಹೆಚ್ಚಿನ ಲಾಭವಾಗಲಿದೆ. ಆರೋಗ್ಯ ಚೇತರಿಕೆಯಾಗಲಿದೆ.
ಮೀನ ರಾಶಿಯ ಇಂದಿನ ಭವಿಷ್ಯ

ಮೀನ ರಾಶಿಯವರಿಗೆ ಇಂದು ಸ್ವಂತ ವ್ಯಾಪಾರದಲ್ಲಿ ಅಭಿವೃದ್ಧಿಯಾಗಲಿದೆ. ವಸ್ತುಗಳು ಕಳವಾಗುವ ಸಾಧ್ಯತೆ ಹೆಚ್ಚಿದೆ ಎಚ್ಚರಿಕೆ ಇರಲಿ. ಹಣಕಾಸಿನ ವಿಷಯದಲ್ಲಿ ಎಚ್ಚರ ಅಗತ್ಯ. ಹೊಸಬರ ಸ್ನೇಹ ಒಳ್ಳೆಯದಲ್ಲ.












