ಮೇಷ ರಾಶಿಯ ಈ ದಿನದ ಭವಿಷ್ಯ

ಮೇಷ ರಾಶಿಯವರು ಈ ದಿನ ಮಾನಸಿಕ ನೆಮ್ಮದೇ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಮಾತು ನಡೆಯಲ್ಲಿ ಎಚ್ಚರಿಕೆ ಇರಲಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ. ಯಾವುದೇ ವ್ಯವಹಾರ ಮಾಡುವಾಗ ಎಚ್ಚರವಹಿಸಿ. ಹೊಸದಾಗಿ ಆಗುವ ಸ್ನೇಹದ ಬಗ್ಗೆ ಎಚ್ಚರಿಕೆ ಇರಲಿ.
ವೃಷಭ ರಾಶಿಯ ಈ ದಿನದ ಭವಿಷ್ಯ

ವೃಷಭ ರಾಶಿಯವರಿಗೆ ಕೆಲಸದ ನಡುವೆ ವಿಶ್ರಾಂತಿ ಲಭಿಸಲಿದೆ. ಬಹು ದಿನಗಳಿಂದ ಬಯಸಿದ್ದ ಬಡ್ತಿ ಸಿಗಲಿದೆ. ಹೊಸ ಹೂಡಿಕೆಯಲ್ಲಿ ಎಚ್ಚರಿಕೆ ಇರಲಿ. ಧಾರ್ಮಿಕ ಸ್ಥಳಗಳಿಗೆ ಭೇಟಿಯಿಂದ ಮನಸಿಗೆ ನೆಮ್ಮದಿ ಸಿಗಲಿದೆ. ಆತ್ಮೀಯರು ಮನೆಗೆ ಭೇಟಿ ನೀಡಲಿದ್ದಾರೆ. ಮಾನಸಿಕ ಒತ್ತಡ ಕಡಿಮೆಯಾಗಲಿದೆ.
ಮಿಥುನ ರಾಶಿಯ ಈ ದಿನದ ಭವಿಷ್ಯ

ಮಿಥುನ ರಾಶಿಯರಿಗೆ ಇಂದು ಉದ್ಯೋಗ ಸ್ಥಳದಲ್ಲಿ ಹೆಚ್ಚಿನ ಕೆಲಸದ ಒತ್ತಡವಾಗಲಿದ್ದು, ಸಹೋದ್ಯಗಳಿಂದ ಉಂಟಾಗುವ ಅನಗತ್ಯ ಕಿರಿಕಿರಿ ತಪ್ಪಿಕೊಳ್ಳಿ. ಇಂದು ಅತಿ ಹೆಚ್ಚು ಮೌನ ವಹಿಸುವುದು ಉತ್ತಮ. ನಡೆ ನುಡಿಯಲ್ಲಿ ಎಚ್ಚರಿಕೆ ಇರಲಿ. ಕುಟುಂಬದಲ್ಲಿ ವಿರಸ ಉಂಟಾಗಲಿದ್ದು, ಅನಗತ್ಯ ಮಾತು ಬೇಡ.
ಕಟಕ ರಾಶಿಯ ಈ ದಿನದ ಭವಿಷ್ಯ

ಕಟಕ ರಾಶಿಯವರಿಗೆ ಮಕ್ಕಳಿಂದ ನೆಮ್ಮದಿ ಸಿಗಲಿದೆ. ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಸ್ನೇಹಿತರೊಂದಿಗೆ ಹೆಚ್ಚಿನ ಸಮಯ ಕಳೆಯುತ್ತೀರಿ. ಮಾನಸಿಕ ಒತ್ತಡ ಕಡಿಮೆಯಾಗಲಿದೆ. ಇಷ್ಟದ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ.
ಸಿಂಹ ರಾಶಿಯ ಈ ದಿನದ ಭವಿಷ್ಯ

ಸಿಂಹ ರಾಶಿಯವರಿಗೆ ಇಂದು ಉದ್ಯೋಗದ ಪ್ರಯತ್ನಕ್ಕೆ ಪ್ರತಿಫಲ ಪ್ರಾಪ್ತಿ ಆಗುತ್ತದೆ. ಬಯಸಿದ ಹುದ್ದೆ ಸಿಗುವ ಸಮಯ. ಈ ದಿನ ಹೆಚ್ಚು ಖರ್ಚುಗಳು ಉಂಟಾಗುತ್ತದೆ. ಕೌಟುಂಬಿಕವಾಗಿ ನೆಮ್ಮದಿಯ ಜೀವನ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.
ಕನ್ಯಾ ರಾಶಿಯ ಈ ದಿನದ ಭವಿಷ್ಯ

ಕನ್ಯಾ ರಾಶಿಯವರಿಗೆ ಇಂದು ಕೆಲಸದ ನಡುವೆ ವಿಶ್ರಾಂತಿ ಲಭಿಸಲಿದೆ. ಧಾರ್ಮಿಕ ಸ್ಥಳಗಳಿಗೆ ಭೇಟಿಯಿಂದ ಮನಸಿಗೆ ನೆಮ್ಮದಿ ಸಿಗಲಿದೆ. ಆತ್ಮೀಯರ ಭೇಟಿಯಿಂದ ಮನೆಯಲ್ಲಿ ಸಂತೋಷದ ವಾತಾವರಣ ಇರಲಿದೆ.
ತುಲಾ ರಾಶಿಯ ಈ ದಿನದ ಭವಿಷ್ಯ

ತುಲಾ ರಾಶಿಯವರು ಸ್ನೇಹಿತರೊಂದಿಗೆ ಮನೋರಂಜನೆಗೋಸ್ಕರ ಹೆಚ್ಚು ಸಮಯ ಕಳೆಯುವ ಸಾಧ್ಯತೆ ಇದೆ. ಅನಾರೋಗ್ಯದಿಂದ ಖರ್ಚು ಹೆಚ್ಚಲಿದೆ. ದೂರ ಪ್ರಯಾಣದ ಅವಕಾಶ ಸಿಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿಸಿದ ಫಲಿತಾಂಶ ಸಿಗಲಿದೆ.
ವೃಶ್ಚಿಕ ರಾಶಿಯ ಈ ದಿನದ ಭವಿಷ್ಯ

ವೃಶ್ಚಿಕ ರಾಶಿಯವರು ಸಾಲ ಮರುಪಾವತಿ ಮಾಡುವ ಸಾಧ್ಯತೆ ಹೆಚ್ಚಿದೆ. ಆರೋಗ್ಯ ಬಗ್ಗೆ ಎಚ್ಚರ ವಹಿಸಿ. ಧಾರ್ಮಿಕ ಸ್ಥಳಗಳ ಭೇಟಿಯಿಂದ ಮನಸ್ಸಿಗೆ ನೆಮ್ಮದಿ. ವ್ಯವಹಾರದಲ್ಲಿ ದಿಢೀರ್ ಧನ ಲಾಭ.
ಧನು ರಾಶಿಯ ಈ ದಿನದ ಭವಿಷ್ಯ

ಧನು ರಾಶಿಯವರಿಗೆ ಇಂದು ಉದ್ಯೋಗದ ಪ್ರಯತ್ನಕ್ಕೆ ಪ್ರತಿಫಲ ಪ್ರಾಪ್ತಿ ಉಂಟಾಗುತ್ತದೆ. ಪುಣ್ಯಕ್ಷೇತ್ರ ದರ್ಶನ ಮಾಡುವಿರಿ. ಹೊಸ ಹೂಡಿಕೆಯಲ್ಲಿ ಲಾಭ ಸಿಗಲಿದೆ. ಹೊಸ ಪರಿಚಿತರೊಂದಿಗೆ ಅತಿಯಾದ ಸಲುಗೆ ಬೇಡ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.
ಮಕರ ರಾಶಿಯ ಈ ದಿನದ ಭವಿಷ್ಯ

ಮಕರ ರಾಶಿಯವರಿಗೆ ಇಂದು ದೀರ್ಘಕಾಲದ ಆರ್ಥಿಕ ಬಿಕ್ಕಟ್ಟಿನಿಂದ ಮುಕ್ತಿ ಸಿಗಲಿದೆ. ಕುಟುಂಬದ ವ್ಯವಹಾರಗಳು ಹೆಚ್ಚು ಇರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿಸಿದ ಫಲಿತಾಂಶ, ವಿದೇಶದಲ್ಲಿ ಓದುವ ಆಸೆಗೆ ಹೊಸ ಸೂಚನೆ ಸಿಗಲಿದೆ. ಕೌಟುಂಬಿಕವಾಗಿ ನೆಮ್ಮದಿಯ ಜೀವನ.
ಕುಂಭ ರಾಶಿಯ ಈ ದಿನದ ಭವಿಷ್ಯ

ಕುಂಭ ರಾಶಿಯವರು ಕೆಲಸದಲ್ಲಿ ಹೆಚ್ಚು ಒತ್ತಡ ಮಾನಸಿಕ ಕಿರಿಕಿರಿ ಉಂಟಾಗುತ್ತದೆ. ಮಾತು ಬೆಳ್ಳಿ ಮೌನ ಬಂಗಾರ ಎನ್ನುವುದು ನೆನಪಿರಲಿ. ನಡೆ ನುಡಿಯಲ್ಲಿ ತಾಳ್ಮೆ ಇರಲಿ. ಪ್ರಯಾಣದಲ್ಲಿ ಎಚ್ಚರ ವಹಿಸಿ. ದಿಢೀರ್ ಧನ ಲಾಭವಾಗುವ ಸಾಧ್ಯತೆ ಇದೆ.
ಮೀನ ರಾಶಿಯ ಈ ದಿನದ ಭವಿಷ್ಯ

ಮೀನ ರಾಶಿಯವರಿಗೆ ಹಣಕಾಸಿನ ವ್ಯವಹಾರದಲ್ಲಿ ಅಭಿವೃದ್ಧಿಯಗಲಿದ್ದು, ಹಣದ ಹರಿವು ಹೆಚ್ಚಲಿದೆ. ಹೊಸಬರ ಸ್ನೇಹ ಹಾಗೂ ಸಲುಗೆಯಿಂದ ಮನೆಯಲ್ಲಿ ವಿನಾಕಾರಣ ಅಸಮಾಧಾನ ಹೆಚ್ಚಾಗಲಿದೆ. ಸಂಗಾತಿಗೆ ಸಮಯ ಕೊಡಿ. ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.











