ಮೇಷ ರಾಶಿಯ ಈ ದಿನದ ಭವಿಷ್ಯ

ಮೇಷ ರಾಶಿಯವರಿಗೆ ಇಂದು ಸ್ನೇಹಿತರಿಂದ ಬೆಂಬಲ ಸಿಗಲಿದೆ. ನಿಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಿ. ಕುಟುಂಬದಲ್ಲಿ ವಿವಾದಗಳನ್ನು ತಪ್ಪಿಸಲು ಪ್ರಯತ್ನಿಸಿ.
ವೃಷಭ ರಾಶಿಯ ಈ ದಿನದ ಭವಿಷ್ಯ

ವೃಷಭ ರಾಶಿಯವರು ಇಂದು ಕಚೇರಿಯಲ್ಲಿ ಅನಗತ್ಯ ವಾದ ವಿವಾದಗಳಿಂದ ದೂರವಿರಿ. ಕೆಲವರು ಇಂದು ಹೊಸ ಆಸ್ತಿ ಅಥವಾ ವಾಹನವನ್ನು ಖರೀದಿಸಲು ಯೋಜಿಸಬಹುದು. ಹೂಡಿಕೆಯಲ್ಲಿ ಲಾಭ ಸಿಗಲಿದೆ.
ಮಿಥುನ ರಾಶಿಯ ಈ ದಿನದ ಭವಿಷ್ಯ

ಮಿಥುನ ರಾಶಿಯವರು ಇಂದು ನಿಮ್ಮ ತಾಯಿಯ ಬೆಂಬಲವನ್ನು ಪಡೆಯುತ್ತೀರಿ. ಖರ್ಚು ಹೆಚ್ಚಾಗಲಿದ್ದು, ಹಣದ ವ್ಯವಹಾರದಲ್ಲಿ ನಿಯಂತ್ರಣ ಅಗತ್ಯವಾಗಿದೆ. ನಿಮಗೆ ಉದ್ಯೋಗಾವಕಾಶಗಳು ದೊರೆಯಲಿವೆ.
ಕಟಕ ರಾಶಿಯ ಈ ದಿನದ ಭವಿಷ್ಯ

ಕಟಕ ರಾಶಿಯ ಆರ್ಥಿಕ ಪರಿಸ್ಥಿತಿ ಇಂದು ಸುಧಾರಿಸಲಿದೆ. ವ್ಯಾಪಾರದಲ್ಲಿ ಹೆಚ್ಚಳವಾಗಿದೆ. ಆದರೆ ತೊಂದರೆಗಳೂ ಉಂಟಾಗಬಹುದು ಎಚ್ಚರಿಕೆಯಿಂದ ಹೆಜ್ಜೆಯಿಡಿ.
ಸಿಂಹ ರಾಶಿಯ ಈ ದಿನದ ಭವಿಷ್ಯ

ಸಿಂಹ ರಾಶಿಯವರು ಇಂದು ಸೋಮಾರಿತನದಿಂದ ದೂರವಿರಿ. ನಿಮ್ಮ ಆದಾಯದ ಮೂಲಗಳು ಹೆಚ್ಚಾಗುತ್ತವೆ. ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಆರೋಗ್ಯದ ಬಗ್ಗೆ ಸದಾ ಎಚ್ಚರ ಅಗತ್ಯವಾಗಿದೆ.
ಕನ್ಯಾ ರಾಶಿಯ ಈ ದಿನದ ಭವಿಷ್ಯ

ಕನ್ಯಾ ರಾಶಿಯವರಿಗೆ ಇಂದು ಕೆಲಸದ ಸ್ಥಳದಲ್ಲಿ ತೊಂದರೆಗಳು ಎದರಾಗುತ್ತದೆ. ಆಸ್ತಿ ನಿರ್ವಹಣೆಯ ವೆಚ್ಚಗಳು ಹೆಚ್ಚಾಗಬಹುದು. ಸ್ನೇಹಿತರಿಂದ ಬೆಂಬಲ ಸಿಗುತ್ತದೆ. ಮಾತಿನಲ್ಲಿ ಎಚ್ಚರಿಕೆ ಇರಲಿ.
ತುಲಾ ರಾಶಿಯ ಈ ದಿನದ ಭವಿಷ್ಯ

ತುಲಾ ರಾಶಿಯವರು ಈ ದಿನ ಮಾನಸಿಕ ನೆಮ್ಮದಿ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತೀರಿ. ಯೋಗ ಧ್ಯಾನ ಮಾಡಿ.
ವೃಶ್ಚಿಕ ರಾಶಿಯ ಈ ದಿನದ ಭವಿಷ್ಯ

ವೃಶ್ಚಿಕ ರಾಶಿಯವರಿಗೆ ಇಂದು ಖರ್ಚು ಹೆಚ್ಚಾಗಲಿದೆ. ಪಿತ್ರಾರ್ಜಿತ ಆಸ್ತಿ ವ್ಯವಹಾರಕ್ಕೆ ಸಂಬಂಧಪಟ್ಟ ವಿಚಾರಗಳಲ್ಲಿ ಮಾತುಕತೆ ಉಂಟಾಗುತ್ತದೆ, ಆರೋಗ್ಯ ಸಮಸ್ಯೆ ಹೆಚ್ಚಾಗುತ್ತದೆ. ಆಹಾರ ಸೇವನೆಯಲ್ಲಿ ಎಚ್ಚರಿಕೆ ಇರಲಿ.
ಧನು ರಾಶಿಯ ಈ ದಿನದ ಭವಿಷ್ಯ

ಧನು ರಾಶಿಯವರು ಇಂದು ಕೆಲಸದ ನಿಮಿತ್ತ ಪ್ರಯಾಣ ಮಾಡುವ ಅವಕಾಶವಿರುತ್ತದೆ. ವ್ಯಾಪಾರವನ್ನು ಹೆಚ್ಚಿಸಲು ಹೊಸ ಸ್ಥಳಗಳಿಂದ ಹಣ ಲಭ್ಯವಾಗುತ್ತದೆ. ಮಕ್ಕಳಿಂದ ಸಿಹಿ ಸುದ್ದಿ ಸಿಗಲಿದೆ.
ಮಕರ ರಾಶಿಯ ಈ ದಿನದ ಭವಿಷ್ಯ

ಮಕರ ರಾಶಿಯವರು ತಾಯಿಯಿಂದ ಹಣ ಪಡೆಯುವ ಸಾಧ್ಯತೆ ಇದೆ. ಅತಿಯಾದ ಕೋಪವನ್ನು ತಪ್ಪಿಸಿ. ಹೊಸ ವಾಹನವನ್ನು ಖರೀದಿಸುವ ಬಗ್ಗೆ ಯೋಚಿಸುತ್ತೀರಿ.
ಕುಂಭ ರಾಶಿಯ ಈ ದಿನದ ಭವಿಷ್ಯ

ಕುಂಭ ರಾಶಿಯವರು ಭೂಮಿ ಅಥವಾ ವಾಹನವನ್ನು ಖರೀದಿಸುವ ಅವಕಾಶವಿರುತ್ತದೆ. ಎಚ್ಚರಿಕೆಯಿಂದ ವಾಹನ ಚಲಾಯಿಸಿ. ಕುಟುಂಬದಿಂದ ಬೆಂಬಲ ಸಿಗಲಿದೆ. ಮನಸ್ಸಿನ ನೆಮ್ಮದಿ ಹೆಚ್ಚಾಗಲಿದೆ.
ಮೀನ ರಾಶಿಯ ಈ ದಿನದ ಭವಿಷ್ಯ

ಮೀನ ರಾಶಿಯವರ ಈ ದಿನ ಖರ್ಚು ಹೆಚ್ಚಾಗುತ್ತದೆ. ಕೆಲವರಿಗೆ ವಿದೇಶ ಪ್ರಯಾಣ ಸಾಧ್ಯತೆ ಇದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಕೌಟುಂಬಿಕವಾಗಿ ಉತ್ತಮ ಸಮಯ ಕಳೆಯುವಿರಿ.












