• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಲಿತ ಸಮುದಾಯದ ಸಭೆಗೆ ಬ್ರೇಕ್.. ಈಗ ಡಿಕೆಶಿ ನೇಮಕಕ್ಕೆ ಕೊಕ್ಕೆ..

ಕೃಷ್ಣ ಮಣಿ by ಕೃಷ್ಣ ಮಣಿ
January 15, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಗೃಹ ಸಚಿವ ಡಾ ಜಿ ಪರಮೇಶ್ವರ್‌ ನೇತೃತ್ವದಲ್ಲಿ ದಲಿತ ಸಮುದಾಯ ಮಾಜಿ ಶಾಸಕರು ಹಾಗು ಹಾಲಿ ಶಾಸಕರ ಸಭೆ ಮಾಡಲು ನಿರ್ಧಾರ ಮಾಡಲಾಗಿತ್ತು. ಆದರೆ ದೆಹಲಿಯಲ್ಲಿದ್ದ ಡಿಸಿಎಂ ಡಿ.ಕೆ ಶಿವಕುಮಾರ್‌, ಸುರ್ಜೇವಾಲಗೆ ದೂರು ಕೊಡುವ ಮೂಲಕ ದಲಿತ ಸಮುದಾಯದ ಸಭೆಗೆ ಬ್ರೇಕ್‌ ಹಾಕುವಲ್ಲಿ ಯಶಸ್ವಿಯಾಗಿದ್ದರು. ಆ ಬಳಿಕ ದಲಿತ ಸಮುದಾಯದ ನಾಯಕರು ಹೈಕಮಾಂಡ್‌ ಹಾಗು ಡಿ.ಕೆ ಶಿವಕುಮಾರ್‌ ವಿರುದ್ಧ ಸಿಡಿಮಿಡಿಗೊಂಡಿದ್ದರು. ಆ ಬಳಿಕ ಡಿ.ಕೆ ಶಿವಕುಮಾರ್‌ ವಿರೋಧಿ ಬಣ ಸಮಾಧಾನ ಆಗುವ ಕ್ರಮವೊಂದು ಹೈಕಮಾಂಡ್‌ ಮೂಲಕ ಆಗಿದೆ.

ADVERTISEMENT

ರಾಜ್ಯ ಕಾಂಗ್ರೆಸ್‌ನಲ್ಲಿ ಮುಗಿಯದ ಅಸಮಾಧಾನ ಎನ್ನುವಂತಾಗಿದೆ. ಒಬಿಸಿ ಘಟಕದಲ್ಲಿ ಭುಗಿಲೆದ್ದ ಅಸಮಧಾನ, ಒಬಿಸಿ ಘಟಕದ ನೂತನ ಅಧ್ಯಕ್ಷರ ನೇಮಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ರಾಜ್ಯ ಒಬಿಸಿ ಅಧ್ಯಕ್ಷರನ್ನಾಗಿ ಡಿ.ಟಿ ಶ್ರೀನಿವಾಸ್ ಅವರನ್ನು ನೇಮಕ ಮಾಡಿದ್ದ ಡಿ.ಕೆ ಶಿವಕುಮಾರ್‌ ನಿರ್ಧಾರಕ್ಕೆ ಆಕ್ರೋಶ ವ್ಯಕ್ತವಾಗಿತ್ತು.

ಕೆಪಿಸಿಸಿ ಒಬಿಸಿ ಘಟಕದ ಅಧ್ಯಕ್ಷರನ್ನಾಗಿ ಡಿ.ಕೆ ಶಿವಕುಮಾರ್‌ ಮಾಡಿದ್ದ ನೇಮಕಕ್ಕೆ ತಡೆ ಕೊಟ್ಟಿದೆ ಹೈಕಮಾಂಡ್‌. ಆಪ್ತರಿಗೆ ಪಕ್ಷದ ಹುದ್ದೆ ಕೊಡಿಸುವಲ್ಲಿ ಡಿ.ಕೆ ಶಿವಕುಮಾರ್‌ ಪ್ರಯತ್ನಕ್ಕೆ ಹಿನ್ನಡೆ ಆಗಿದೆ. ಡಿ.ಟಿ ಶ್ರೀನಿವಾಸ್ ನೇಮಕಕ್ಕೆ ತಡೆ ನೀಡಿ ಎಐಸಿಸಿ ಓಬಿಸಿ ಅಧ್ಯಕ್ಷ ಅಜಯ್ ಸಿಂಗ್ ಯಾದವ್ ಆದೇಶ ಮಾಡಿದ್ದಾರೆ.

ಕಾಂಗ್ರೆಸ್ ಒಬಿಸಿ ನಾಯಕರು ಹೈಕಮಾಂಡ್‌ ನಾಯಕರಿಗೂ ದೂರು ನೀಡಿದ್ದರು. ಶಾಸಕ ಬೇಳೂರು ಗೋಪಾಲಕೃಷ್ಣ, ಎಂಎಲ್‌ಸಿ ನಾಗರಾಜ್ ಯಾದವ್ ದೂರು ನೀಡಿದ್ದರು. ಆ ಬಳಿಕ ನಿನ್ನೆ ಸುರ್ಜೇವಾಲಾಗೂ ದೂರು ಸಲ್ಲಿಸಿದ್ದರು ಒಬಿಸಿ ನಾಯಕರು. ಕೇಂದ್ರ ಒಬಿಸಿ ಅಧ್ಯಕ್ಷರಿಗೂ ಈ ಬಗ್ಗೆ ದೂರು ಸಲ್ಲಿಸಿದ್ದ ಶಾಸಕರು.

ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಶ್ರೀನಿವಾಸ್‌ ಅವರನ್ನು ನೇಮಕ ಮಾಡಲಾಗಿತ್ತು. ಡಿ.ಕೆ ಶಿವಕುಮಾರ್‌ ನಿರ್ಧಾರ ಕೆಪಿಸಿಸಿ ಹಿಂದುಳಿದ ವರ್ಗಗಳ ಶಾಸಕರ ತೀವ್ರ ವಿರೋಧ ವ್ಯಕ್ತವಾಗಿತ್ತು. ಬಿಜೆಪಿಯಿಂದ ವಲಸೆ ಬಂದವರಿಗೆ ಅಧ್ಯಕ್ಷರನ್ನಾಗಿ ಮಾಡಿದ್ದೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಶಾಸಕರ ದೂರಿನ ಆಧಾರದ ಮೇಲೆ ಶ್ರೀನಿವಾಸ್ ನೇಮಕ ಪೆಂಡಿಂಗ್ ಇಡಲಾಗಿದೆ. ಎಐಸಿಸಿ ಒಬಿಸಿ ಘಟಕದ ಅಧ್ಯಕ್ಷರಿಂದ ಡಿ.ಕೆ ಶಿವಕುಮಾರ್‌ಗೆ ಪತ್ರ ಬರೆದಿದ್ದು, ನೀವು ಮಲ್ಲಿಕಾರ್ಜುನ ಖರ್ಗೆಯವರ ಒಪ್ಪಿಗೆ ಪಡೆಯದೆ ಏಕಾಏಕಿ ಅಧ್ಯಕ್ಷರನ್ನ ನೇಮಕ ಮಾಡಿದ್ದೀರ. ಹಾಗಾಗಿ ಎಐಸಿಸಿ ಅಧ್ಯಕ್ಷರ ಅನುಮತಿ ಇಲ್ಲದೆ ನೇಮಕ ಮಾಡುವುದು ಅಸಿಂಧು. ಆ ಕಾರಣಕ್ಕೆ ನೇಮಕವನ್ನ ನಾವು ಪೆಂಡಿಂಗ್ ಇಟ್ಟಿದ್ದೇವೆಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

Tags: BJPCongress PartyDK ShivakumarDr G ParameshwarEshwar KhandreMallikarjun KhargesiddaramaiahSrinivasSurjivalಸಿದ್ದರಾಮಯ್ಯ
Previous Post

ನಮ್ಮದೇನೂ ತಪ್ಪಿಲ್ಲ.. ಕಾನೂನು ಪಾಲಿಸಿದಾಗ ಬ್ಲಾಕ್‌ಮೇಲ್‌ ಸರಿಯಲ್ಲ..

Next Post

ಆರದ ಗಾಯ.. ಲಾಠಿಚಾರ್ಜ್ ಕಿಚ್ಚಿಗೆ ಹೆಚ್ಚಾದಪಂಚಮಸಾಲಿ ಹೋರಾಟ – ಸಿಎಂ ಕ್ಷೇತ್ರದಿಂದಲೇ ಹೋರಾಟಕ್ಕೆ ಪ್ಲಾನ್ ?!  

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post
ಪಂಚಮಸಾಲಿಗಳಿಗೆ ಕಾಂಗ್ರೆಸ್ ಸರ್ಕಾರ ಲಾಠಿ..ಬೂಟಿನ ಏಟು ಕೊಟ್ಟಿದೆ – ಮುಂದೆ ಬುದ್ಧಿ ಕಳಿಸುತ್ತೇವೆ : ಜಯ ಮೃತ್ಯುಂಜಯ ಸ್ವಾಮೀಜಿ ಆಕ್ರೋಶ! 

ಆರದ ಗಾಯ.. ಲಾಠಿಚಾರ್ಜ್ ಕಿಚ್ಚಿಗೆ ಹೆಚ್ಚಾದಪಂಚಮಸಾಲಿ ಹೋರಾಟ - ಸಿಎಂ ಕ್ಷೇತ್ರದಿಂದಲೇ ಹೋರಾಟಕ್ಕೆ ಪ್ಲಾನ್ ?!  

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada