ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಸ್ವಕ್ಷೇತ್ರ ಶಿಕಾರಿಪುರದ ಮುಚ್ಚಿಡಿ ಗ್ರಾಮದ ದಲಿತ ಕುಟುಂಬಗಳ ಕೃಷಿ ಭೂಮಿಯಿಂದ ಒಕ್ಕಲೆಬ್ಬಿಸುವ ತಾಲ್ಲೂಕು ಆಡಳಿತದ ಕ್ರಮದ ವಿರುದ್ಧ ರೈತ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಮುಂದಾದ ಘಟನೆ ಜೂ.17 ರಂದು ನಡೆದಿದೆ. ದಲಿತ ಕುಟುಂಬಗಳ ಸಾಮೂಹಿಕ ಆತ್ಮಹತ್ಯೆಗೆ ಮುಂದಾದ ಹಿನ್ನಲೆಯಲ್ಲಿ ಬೆದರಿದ ತಹಶೀಲ್ದಾರ್, ಪೊಲೀಸರು ಭೂಮಿ ವಶಪಡಿಸಿಕೊಳ್ಳುವ ಪ್ರಯತ್ನ ನಿಲ್ಲಿಸಿ ಹಿಂತಿರುಗಿದ್ದಾರೆ.




