ದಲಿತ ಕವಿ ಡಾ.ಸಿದ್ದಲಿಂಗಯ್ಯ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಕೆಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿ ತನ್ನದೆಯಾದ ಅಪಾರ ಸಾಧನೆ ಮಾಡಿದ ಅವರು ದಲಿತ ಕವಿ ಎಂದೇ ಪ್ರಖ್ಯಾತರಾಗಿದ್ದರು. ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ.
ರಾಜಕೀಯ ಕ್ಷೇತ್ರದಲ್ಲಿಯೂ ಅವರ ಸಾಧನೆ ಅಪಾರವಾದುದು ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲ್ಲೋಕಿನ ಮಂಚನಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದ ಸಿದ್ದಲಿಂಗಯ್ಯ ಅವರು ದಲಿತ ಸಾಹಿತ್ಯದಲ್ಲಿ ಮೇರು ವ್ಯಕ್ತಿಯಾಗಿದ್ದರು.