ಕರೋನಾ ಸೋಂಕಿಗೆ ಕವಿ ಡಾ. ಸಿದ್ದಲಿಂಗಯ್ಯ ಬಲಿ

ದಲಿತ ಕವಿ ಡಾ.ಸಿದ್ದಲಿಂಗಯ್ಯ ಕೋವಿಡ್‌ ಸೋಂಕಿಗೆ ಬಲಿಯಾಗಿದ್ದಾರೆ. ಕೆಲವು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿ ತನ್ನದೆಯಾದ ಅಪಾರ ಸಾಧನೆ ಮಾಡಿದ ಅವರು ದಲಿತ ಕವಿ ಎಂದೇ ಪ್ರಖ್ಯಾತರಾಗಿದ್ದರು. ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದ್ದಾರೆ.

ರಾಜಕೀಯ ಕ್ಷೇತ್ರದಲ್ಲಿಯೂ ಅವರ ಸಾಧನೆ ಅಪಾರವಾದುದು ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲ್ಲೋಕಿನ ಮಂಚನಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದ ಸಿದ್ದಲಿಂಗಯ್ಯ ಅವರು ದಲಿತ ಸಾಹಿತ್ಯದಲ್ಲಿ ಮೇರು ವ್ಯಕ್ತಿಯಾಗಿದ್ದರು.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...