ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸವಲತ್ತು ಸಿಗುತ್ತಿಲ್ಲ. ಇದರಿಂದ ಅವರು ಹೈರಾಣಾಗಿ ಜಡ್ಜ್ ಎದುರು ಬೇಡಿಕೆ ಒಂದನ್ನು ಇಟ್ಟಿದ್ದಾರೆ. ‘ನನಗೆ ವಿಷ ನೀಡಲು ಆದೇಶಿಸಿ’ ಎಂದು ಜಡ್ಜ್ ಎದುರೇ ಕೇಳಿದ್ದಾರೆ.

ದರ್ಶನ್ ಬೇಡಿಕೆ ಕೇಳಿ ಜಡ್ಜ್ ಒಮ್ಮೆ ಶಾಕ್ ಆದರು. ‘ಹಾಗೆಲ್ಲ ಕೇಳಬಾರದು’ ಎಂದು ಜಡ್ಜ್ ದರ್ಶನ್ಗೆ ಕಿವಿ ಮಾತು ಹೇಳಿದ್ದಾರೆ. ಹೆಚ್ಚುವರಿ ದಿಂಬು ಹಾಗೂ ಬೇಡ್ಶೀಟ್ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಿಡಿಯೋ ಕಾಲ್ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅವರು, ಮೊದಲಿಗೆ ಕೈ ಎತ್ತಿ ‘ಒಂದು ಮನವಿ ಇದೆ’ ಎಂದು ಹೇಳಿದ್ದಾರೆ. ಮನವಿ ಏನು ಎಂದು ಕೇಳಿದಾಗ, ದರ್ಶನ್ ಕೊಟ್ಟ ಉತ್ತರ ಜಡ್ಜ್ಗೆ ಶಾಕ್ ತಂದಿತು.

‘ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್ನಿಂದಲೇ ಈ ಆದೇಶ ನೀಡಬೇಕು’ ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ಜಡ್ಜ್ಜ್ ‘ಹಾಗೆಲ್ಲಾ ನೀವು ಕೇಳುವಂತಿಲ್ಲ’ ಎಂದು ಹೇಳಿದ್ದಾರೆ. ‘ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ. ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ’ ಎಂದು ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ್ದಾರೆ.









