
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಲಾಗಿದೆ.ನ್ಯಾಯಾಂಗ ಬಂಧನದ ಇಂದು ಮುಕ್ತಾಯವಾದ ಹಿನ್ನೆಲೆಯಲ್ಲಿ ನಟ ದರ್ಶನ್ ಅವರನ್ನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ ಆಗಸ್ಟ್ 1ರವರೆಗೆ ನಟ ದರ್ಶನ್ ಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಆದೇಶ ಹೊರಡಿಸಿದ್ದಾರೆ. ಈ ಮೂಲಕ ನಟ ದರ್ಶನ್ ಮತ್ತೆ ಜೈಲುವಾಸ ಅನುಭವಿಸಬೇಕಿದೆ.
ಇನ್ನು ಮನೆಯಿಂದ ಊಟ, ಪುಸ್ತಕ, ಹಾಸಿಗೆ ಕೋರಿ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ನಾಳೆ ಮಧ್ಯಾಹ್ನಕ್ಕೆ ಮುಂದೂಡಿದೆ